ಬೆಂಗಳೂರು: ಈಗೀನ ಕಾಲದಲ್ಲಿ ಯಾರನ್ನಾ ನಂಬೋದು ಬಿಡೋದು? ಅಕ್ಕನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ತಂಗಿಯ (Theft Case) ಬಂಧನವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮಾ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿಯಾಗಿರುವ ಉಮಾಳಿಂದ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಇನ್ನೂ ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಅವರು ಕೊಟ್ಟಿರಲಿಲ್ಲ ಎನ್ನಲಾಗಿದೆ.
ಇದೇ ಕಾರಣಕ್ಕೆ ಅಕ್ಕ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಳು. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್‌ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
ವಿದೇಶಿ ಪ್ರಜೆಗಳ ಬಂಧನ
ಮೆಡಿಕಲ್ ವೀಸಾದಲ್ಲಿ ಬಂದು ಅನಧಿಕೃತವಾಗಿ ವಾಸವಾಗಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬಳು ಚಿಕಿತ್ಸೆಗೆಂದು ಮೆಡಿಕಲ್ ವೀಸಾದಲ್ಲಿ ಬಂದಿದ್ದಳು. ಸದ್ಯಕ್ಕೆ ಮಹಿಳೆ ಜತೆಗೆ ಇನ್ನೊಬ್ಬರನ್ನು ಬಂಧಿಸಿ ಫಾರಿನರ್ಸ್ ರಿಸ್ಟ್ರಿಕ್ಷನ್ ಸೆಂಟರ್‌ನಲ್ಲಿ ಇರಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಯೂನೋ ಕಾನ್ ಕಳವು – ಶ್ರೀಖಿ ಅರೆಸ್ಟ್
ಬಿಟ್ ಕಾಯಿನ್ ಹಗರಣ ಪ್ರಕರಣ ಸಂಬಂಧಿಸಿದಂತೆ ಶ್ರೀಖಿ @ ಶ್ರೀಕೃಷ್ಣನನ್ನು ಬಂಧಿಸಲಾಘಿದೆ. ಶ್ರೀಖಿಯನ್ನು ಸಿಐಡಿ ಎಸ್‌ಐಟಿ ಬಂಧಿಸಿದೆ. ಯೂನೋ ಕಾನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶ್ರೀಖಿಯನ್ನು ಬಂಧಿಸಿ ತನಿಖೆಯನ್ನು ನಡೆಸಲಾಗುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ