Site icon Vistara News

HD Devegowda : ಡೋಂಟ್‌ ವರಿ, ನಾನು ಆರೋಗ್ಯವಾಗಿದ್ದೇನೆ; ಅನಾರೋಗ್ಯ ಸುದ್ದಿಗೆ ದೇವೇಗೌಡರ ಸ್ಪಷ್ಟನೆ

HD Devegowda Health issues Clarification

ಬೆಂಗಳೂರು: ನನ್ನ ಆರೋಗ್ಯಕ್ಕೆ ಸಂಬಂಧಿಸಿ ಕೆಲವು ಮಾಧ್ಯಮಗಳಲ್ಲಿ ಅತಿರಂಜಿತ ವರದಿಗಳು (exaggerated reports) ಬರುತ್ತಿವೆ ಎಂದು ತಿಳಿದುಬಂತು. ಈ ವಿಚಾರದಲ್ಲಿ ನಾನೊಂದು ಸ್ಪಷ್ಟೀಕರಣ ನೀಡಲು ಬಯಸುತ್ತೇನೆ, ನಾನು ಆಸ್ಪತ್ರೆಗೆ ಹೋಗಿರುವುದು ಕೇವಲ ಸಾಮಾನ್ಯ ಆರೋಗ್ಯ ತಪಾಸಣೆಗೆ. ನಾನು ಶೀಘ್ರ ಮನೆಗೆ ತೆರಳಲಿದ್ದೇನೆ. ಯಾವುದೇ ರೀತಿಯ ಚಿಂತೆಗಳಿಗೆ ಕಾರಣವಿಲ್ಲ: ಹೀಗೆಂದು ಟ್ವೀಟ್‌ ಮಾಡಿದ್ದಾರೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು (HD Devegowda).

ಹಿರಿಯ ರಾಜಕಾರಣಿಯಾಗಿರುವ ಎಚ್‌.ಡಿ ದೇವೇಗೌಡರಿಗೆ ಗುರುವಾರ ಮುಂಜಾನೆ ಸಣ್ಣ ಪ್ರಮಾಣದ ಆರೋಗ್ಯ ವ್ಯತ್ಯಯ (Health Problem) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ (Manipal Hospital) ದಾಖಲಿಸಲಾಗಿತ್ತು. 90 ವರ್ಷದ ದೇವೇಗೌಡರಿಗೆ ಗುರುವಾರ ಬೆಳಗ್ಗೆ ಉಸಿರಾಟ ಸಮಸ್ಯೆ (Breathing Problem) ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ ಚಿಕಿತ್ಸೆಗಾಗಿ ದಾಖಲಿಸಿಕೊಂಡರು ಎನ್ನಲಾಗಿದೆ. ಆದರೆ, ಅವರ ಅನಾರೋಗ್ಯಕ್ಕೆ ಸಂಬಂಧಿಸಿ ಕೆಲವು ಮಾಧ್ಯಮಗಳಲ್ಲಿ ಅತಿರಂಜಿತ ವರದಿಗಳು ಪ್ರಕಟಗೊಂಡ ಹಿನ್ನೆಲೆಯಲ್ಲಿ ಅವರೇ ಸ್ಪಷ್ಟೀಕರಣ ನೀಡಿದ್ದಾರೆ.

ದೇವೇಗೌಡರು ಆರೋಗ್ಯವಾಗಿಯೇ ಇದ್ದಾರೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೀಗಾಗಿ ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರೂ ಮಾಹಿತಿ ನೀಡಿದ್ದಾರೆ. ಅವರು ಆಹಾರ ಸೇವನೆ ಮಾಡುತ್ತಿದ್ದಾರೆ, ಅವರ ಉಸಿರಾಟವೂ ಸಹಜ ಸ್ಥಿತಿಗೆ ಬರುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವಿಚಾರವನ್ನು ದೇವೇಗೌಡರೂ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Ram Mandir: ಬಾಲರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಎಚ್‌.ಡಿ.ದೇವೇಗೌಡರ ಕುಟುಂಬ

HD Devegowda : ಕಳೆದ ವರ್ಷವೂ ಫೆಬ್ರವರಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು

ದೇವೇಗೌಡರು ಕಳೆದ 2023ರ ಫೆಬ್ರವರಿ ತಿಂಗಳಲ್ಲಿ ಅನಾರೋಗ್ಯ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದಿದ್ದರು. ಕಳೆದ ವರ್ಷದ ಫೆಬ್ರವರಿ 28ರಂದು ಅವರಿಗೆ ಕಾಲು ಊತ ಜಾಸ್ತಿ ಆಗಿ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಜನರಲ್ ಚೆಕಪ್‍ಗೆಂದು ಬೆಂಗಳೂರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ಸಂದರ್ಭ ವೈದ್ಯರು ಪರಿಶೀಲಿಸಿ ಒಂದು ವಾರದ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು.

ಒಂದು ವಾರಗಳ ಕಾಲ ವಿಶ್ರಾಂತಿ ಪಡೆದ ಅವರು ಮಾರ್ಚ್‌ 6ರಂದು ಡಿಸ್ಚಾರ್ಚ್‌ ಆಗಿದ್ದರು. ಡಿಸ್ಚಾರ್ಜ್‌ ಆದ ಕೆಲವೇ ದಿನದಲ್ಲಿ ಅವರು ವೀಲ್‌ ಚೇರ್‌ನಲ್ಲೇ ಮೈಸೂರಿನಲ್ಲಿ ನಡೆದ ಜೆಡಿಎಸ್‌ ಚುನಾವಣಾ ಪೂರ್ವ ಪಂಚರತ್ನ ಸಮಾವೇಶದಲ್ಲಿ ಭಾಗಿಯಾಗಿದ್ದರು.

ಮುಂದೆ ಆಗಿನ‌ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ರಾಜಕಾರಣಿಗಳು ಅವರನ್ನು ಮನೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಕರೆ ಮಾಡಿದ್ದರು.

ಅದಾದ ಬಳಿಕ ಎಚ್‌.ಡಿ ದೇವೇಗೌಡ ಅವರು ಪೂರ್ಣವಾಗಿ ಚೇತರಿಸಿಕೊಂಡಿದ್ದು, ದಿಲ್ಲಿಯಲ್ಲಿ ‌ ನಡೆದ ಜೆಡಿಎಸ್‌-ಬಿಜೆಪಿ ಮೈತ್ರಿ ಮಾತುಕತೆಯಲ್ಲಿ ಸಕ್ರಿಯರಾಗಿದ್ದರು. ಜತೆಗೆ ಜನವರಿ 22ರಂದು ನಡೆದ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Exit mobile version