ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ವರ್ಷದ ಮಗು ಬಲಿಯಾಗಿದೆ ಎಂದು ಹೆತ್ತವರು ಆರೋಪಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರು ವರ್ಷದ ಮಗುವನ್ನು ಜ್ವರ ಇದ್ದ ಕಾರಣಕ್ಕೆ ನಿನ್ನೆ ಯಲಹಂಕದ ಶುಶ್ರೂಷಾ ಆಸ್ಪತ್ರೆಗೆ ಪೋಷಕರು ಕರೆದೊಯ್ದಿದ್ದರು. ಸುಮಾರು ಒಂದು ಗಂಟೆ ಕಾಲ ವೈದ್ಯರು ಯಾವುದೇ ಚಿಕಿತ್ಸೆ ನೀಡದೆ ಕಾಯಿಸಿದ್ದರು. ತದನಂತರ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಮಗುವನ್ನು ಕಳುಹಿಸಿದ್ದರು. ಸಂಜೆ ಮಗುವನ್ನು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 9 ಗಂಟೆಯ ಹೊತ್ತಿಗೆ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢೀಕರಿಸಿದರು.
ಜ್ವರ ಎಂದು ಆಸ್ಪತ್ರೆಗೆ ದಾಖಲಾದ ಮಗು ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಿಗೀಡಾಗಿದೆ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿನ ಅನುಮಾನಾಸ್ಪದ ಸಾವಿನ ಬಗ್ಗೆ ಹೆಬ್ಬಾಳ ಠಾಣೆಗೆ ದೂರು ನೀಡಲಾಗಿದೆ. ಹೆಬ್ಬಾಳ ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಲಿಫ್ಟ್‌ಗೆ ಸಿಲುಕಿ ಯುವಕ ಸಾವು
ಬೆಂಗಳೂರು: ಲಿಫ್ಟ್‌ಗೆ ಸಿಲುಕಿ ಯುವಕನೊಬ್ಬ ಸಾವಿಗೀಡಾದ ಘಟನೆ ಜೆ.ಸಿ. ರಸ್ತೆಯ ಭರತ್ ಸರ್ಕಲ್ ಬಳಿ ನಡೆದಿದೆ.
ಉತ್ತರ ಪ್ರದೇಶ ಮೂಲದ ವಿಕಾಸ್ (26) ಸಾವನ್ನಪ್ಪಿದ ಯುವಕ. ಸಂಜಯ್ ಆಟೋಮೊಬೈಲ್‌ನಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್ ಆರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದರು. ಸಂಜೆ ಏಳು ಗಂಟೆ ಸುಮಾರಿಗೆ ಹೀಗೆ ಸಾವಿಗೀಡಾಗಿದ್ದಾರೆ. ಘಟನೆ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Child Death: ಆಟವಾಡುತ್ತಾ ಹೋದ ಆರು ವರ್ಷದ ಬಾಲಕಿ ಲಿಫ್ಟ್‌ಗಾಗಿ ತೋಡಿದ್ದ ಗುಂಡಿಗೆ ಬಿದ್ದು ಸಾವು