tipu sultan Urigoda nanjegowda movie in dilemaTipu Sultan: ಉರಿಗೌಡ-ನಂಜೇಗೌಡ ಸಿನಿಮಾಗೆ ಬ್ರೇಕ್‌?: ಅಂತರ ಕಾಯ್ದುಕೊಂಡ ಕಟೀಲ್‌; ಚರ್ಚಿಸಲು ಮುನಿರತ್ನಗೆ ಚುಂಚಶ್ರೀ ಆಹ್ವಾನ Vistara News
Connect with us

ಕರ್ನಾಟಕ ಎಲೆಕ್ಷನ್

Tipu Sultan: ಉರಿಗೌಡ-ನಂಜೇಗೌಡ ಸಿನಿಮಾಗೆ ಬ್ರೇಕ್‌?: ಅಂತರ ಕಾಯ್ದುಕೊಂಡ ಕಟೀಲ್‌; ಚರ್ಚಿಸಲು ಮುನಿರತ್ನಗೆ ಚುಂಚಶ್ರೀ ಆಹ್ವಾನ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಉರಿಗೌಡ ನಂಜೇಗೌಡ ಸಿನಿಮಾ ನೋಂದಣಿ ಮಾಡಿರುವ ಮುನಿರತ್ನ ಅವರು, ಶೀಘ್ರದಲ್ಲೆ ಚಿತ್ರೀಕರಣ ಮಾಡಲಾಗುತ್ತದೆ ಎಂದು ಹೇಳಿದ್ದರು.

VISTARANEWS.COM


on

tipu sultan Urigoda nanjegowda movie in dilema
Koo

ಬೆಂಗಳೂರು: ಟಿಪ್ಪು ಸುಲ್ತಾನನನ್ನು ಹತ್ಯೆ ಮಾಡಿದವರು ಎಂದು ಬಿಜೆಪಿ ಹೇಳುತ್ತಿರುವ ಉರಿಗೌಡ ಹಾಗೂ ನಂಜೇಗೌಡ ಹೆಸರಿನಲ್ಲಿ ಸಿನಿಮಾ ನಿರ್ಮಾಣ ಮಾಡುವ ನಿರ್ಮಾಪಕ ಹಾಗೂ ಬಿಜೆಪಿ ಶಾಸಕ ಮುನಿರತ್ನ ಪ್ರಯತ್ನಕ್ಕೆ ಹಿನ್ನಡೆ ಆಗುವ ಸಾಧ್ಯತೆಯಿದೆ. ಸಿನಿಮಾ ನಿರ್ಮಾಣ ಮಾಡುವ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಅಂತರ ಕಾಯ್ದುಕೊಂಡಿದ್ದರೆ ಇತ್ತ ಸಿನಿಮಾ ಕುರಿತು ಚರ್ಚೆ ನಡೆಸಲು ಆಗಮಿಸುವಂತೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಹ್ವಾನ ನೀಡಿದ್ದಾರೆ.

ಬೆಂಗಳೂರಿನಲ್ಲಿ ವಿವಿಧ ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡಿದ ನಳಿನ್‌ ಕುಮಾರ್‌ ಕಟೀಲ್‌, ಸಿನಿಮಾ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದರು. ಉರಿಗೌಡ ನಂಜೇಗೌಡ ಸಿನಿಮಾದ ಬಗ್ಗೆ ಮುನಿರತ್ನ ಅವರನ್ನೇ ಕೇಳಿ ಎಂದು ಹೊರಟುಹೋದರು.

ಶ್ರೀಗಳು ಆಹ್ವಾನ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಮುನಿರತ್ನ, ಈಗಾಗಲೇ ಆರ್‌. ಅಶೋಕ್‌, ಡಾ. ಸಿ.ಎನ್‌. ಅಶ್ವತ್ಥನಾರಾಯಣಾವರುಗಳು ಉರಿಗೌಡ-ನಂಜೇಗೌಡರ ಇತಿಹಾಸ ಬಗ್ಗೆ ಮಾತಾಡಿದಾರೆ. ನಾನು ಒಬ್ಬ ನಿರ್ಮಾಪಕನಾಗಿ ಅವರ ಚಿತ್ರ ಮಾಡೋಣ ಎಂದುಕೊಂಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಶ್ರೀಗಳು ಚರ್ಚೆ ‌ಮಾಡಲು ನನ್ನನ್ನು ಕರೆದಿದ್ದಾರೆ.

ಸೋಮವಾರ ಬೆಳಗ್ಗೆ ಶ್ರೀಗಳ ಭೇಟಿ ಮಾಡ್ತಿದೀನಿ. ಇತಿಹಾಸದ ಬಗ್ಗೆ ‌ಮಾತಾಡೋರು ಅದಕ್ಕೆ ಜಾತಿ ಬಣ್ಣ ಕೊಡಬಾರದು. ಸಿನಿಮಾ ಈಗ ಚರ್ಚೆಯಲ್ಲಿದೆ. ಶ್ರೀಗಳನ್ನು ಭೇಟಿ ಮಾಡೋವರೆಗೂ ಚಿತ್ರದ ಬಗ್ಗೆ ಹೆಚ್ಚಾಗೇನೂ ಮಾತಾಡಲ್ಲ‌ ಎಂದಿದ್ದಾರೆ.

ಭರ್ಜರಿ ಪ್ರಚಾರವನ್ನೂ ಗಳಿಸುತ್ತಿದ್ದ ಚಲನಚಿತ್ರದ ಕುರಿತು ಇದೀಗ ಪ್ರಶ್ನೆಗಳೆದ್ದಿವೆ. ಸ್ವತಃ ಮುನಿರತ್ನ ಪ್ರತಿನಿಧಿಸುವ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತಗಳೇ ನಿರ್ಣಾಯಕವಾಗಿದ್ದು, ಮುನಿರತ್ನ ಅವರ ಗೆಲುವಿಗೆ ಈ ಮತಗಳು ಅತ್ಯಗತ್ಯವಾಗುತ್ತವೆ.

ಇದನ್ನೂ ಓದಿ: Tipu Sultan: ಉರಿಗೌಡ-ನಂಜೇಗೌಡ ವಿವಾದಕ್ಕೆ ಒಕ್ಕಲಿಗರ ಸಂಘ ಎಂಟ್ರಿ; ಸ್ವಾಮೀಜಿಗಳ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಕರ್ನಾಟಕ

JDS Karnataka: ಬಿಜೆಪಿಯಿಂದ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Edited by

Mallikarjun khuba joins JDS
Koo

ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಖೂಬಾ ಅವರನ್ನು ಪಕ್ಷಕ್ಕೆ ಕುಮಾರಸ್ವಾಮಿ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.

ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು ಖೂಬಾ. ಕಳೆದ ಚುನಾವಣೆ ವೇಳೆ ಬಿಜೆಪಿಗೆ ಮರಳಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್‌ ಅಭ್ಯರ್ಥಿ ಬಿ. ನಾರಾಯಣ ರಾವ್‌ ವಿರುದ್ಧ ಸೋಲುಂಡಿದ್ದರು.

ಈ ಕುರಿತು ಮಾತನಾಡಿದ ಕುಮಾರಸ್ವಾಮಿ, ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: ರಾಮ ರಾಮ! ಶ್ರೀರಾಮನ ಕಾಲಿನ ಮೇಲೆ ನಿಂತು ಪ್ರತಿಮೆಗೆ ಹೂವಿನ ಹಾರ ಹಾಕಿದ ಬಸವಕಲ್ಯಾಣ ಬಿಜೆಪಿ ಶಾಸಕ!

Continue Reading

ಕರ್ನಾಟಕ

Karnataka Election: ಜೆಡಿಎಸ್‌, ಬಿಜೆಪಿಯ ತಲಾ ಒಂದು ವಿಕೆಟ್‌ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ

ಅನೇಕ ವರ್ಷ ಕಾಂಗ್ರೆಸ್‌ನಲ್ಲಿದ್ದ ಗೋಪಾಲಕೃಷ್ಣ ಮತ್ತೆ ಅದೇ ಪಕ್ಷಕ್ಕೆ ತೆರಳಬಹುದು ಎನ್ನಲಾಗಿದ್ದು, ಎ.ಟಿ. ರಾಮಸ್ವಾಮಿ ಬಿಜೆಪಿ ಸೇರುವ ಸಾಧ್ಯತೆಯಿದೆ.

VISTARANEWS.COM


on

Edited by

karnataka election AT Ramaswamy and NY Gopalakrishna resigns
Koo

ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಇಬ್ಬರು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಒಬ್ಬರು ಬಿಜೆಪಿಗೆ, ಮತ್ತೊಬ್ಬರು ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಅರಕಲಗೂಡು ಜೆಡಿಎಸ್‌ ಶಾಸಕ ಹಾಗೂ ಮಾಜಿ ಸಚಿವ ಎ.ಟಿ. ರಾಮಸ್ವಾಮಿ ಬೆಂಗಳೂರಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಮೂಲಕ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ. ರಾಮಸ್ವಾಮಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಂತೋಷದಿಂದ ರಾಜೀನಾಮೆ ನೀಡಿದ್ದೇನೆ. ಕಾರ್ಯದರ್ಶಿ ಗೆ ರಾಜೀನಾಮೆ ನೀಡಿದ್ದೇನೆ, ಸ್ಪೀಕರ್ ಬಂದ ಬಳಿಕ ಅಂಗೀಕಾರ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.

ನಾನು ಇಂದೇ ಶಾಸಕರ ಭವನದ ಕೊಠಡಿ ಬಿಟ್ಟು ಕೊಡುತ್ತಿದ್ದೇನೆ. ಜೆಡಿಎಸ್ ನಾಯಕರು ನನಗೆ ಅವಕಾಶ ಮಾಡಿಕೊಟ್ಟಿದಕ್ಕೆ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ನಾನು ಅಧಿಕಾರ ಆಸೆ ಪಡೆದವನಲ್ಲ. ನಾನು ವಿರೋಧ ಪಕ್ಷದವರ ಜತೆ ಸಹ ಉತ್ತಮವಾಗಿದ್ದೇನೆ. ನಾನು ರಾಜಕೀಯ ವಿರೋಧಿಗಳಿಗೂ ಒಳ್ಳೆಯದಾಗ್ಲಿ ಎಂದು ಭಾವಿಸುತ್ತೇನೆ. ಜನ ಸೇವೆಗಾಗಿ ಅವಕಾಶ ಸಿಕ್ಕಿತ್ತು.

ಮುಂದೆ ಅವಕಾಶ ಸಿಕ್ರೆ ಜನರ ಸೇವೆಗೆ ಮುಡುಪಾಗಿ ಇಡುತ್ತಿದ್ದೇನೆ. ಕರ್ನಾಟಕದ ರಾಜಕಾರಣ ಕೆಟ್ಟು ಹೋಗಿದೆ. ಒಲೈಕೆ ರಾಜಕಾರಣ ಜಾಸ್ತಿ ಆಗಿದೆ. ವಿಧಾನ ಸಭೆ ಮತ್ತು ಪರಿಷತ್ ಹಣದ ಸಭೆ ಆಗದೇ ಜನರ ಸಭೆ ಆಗಲಿ. ಜನರ ಹಿತಾಸಕ್ತಿಗೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನು ಜೆಡಿಎಸ್ ಬಿಡಲಿಲ್ಲ. ಎಂದೂ ಸಹ ಸಹ ಜೆಡಿಎಸ್ ಬಿಡಲಿಲ್ಲ. ಎಲ್ಲ ಪಕ್ಷಗಳಲ್ಲೂ ಲೋಪದೋಷಗಳಿವೆ. ಮನಿ ಪವರ್ ಮುಂದೆ ಬಲಿಪಶು ಆದೆ. ಅಕ್ರಮಗಳನ್ನ ಎತ್ತಿ ಹಿಡಿದಿದ್ದೆ ಶಾಪ ಎನ್ನುವುದಾದರೆ ಅದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತೇನೆ ಎಂದರು.

ಯಾವ ಪಕ್ಷ ಸೇರುತ್ತೇನೆ ಎನ್ನುವ ಕುರಿತು ರಾಮಸ್ವಾಮಿ ಸ್ಪಷ್ಟವಾಗಿ ತಿಳಿಸಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾಗಿ ಅರಕಲಗೂಡಿನಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.

ಗೋಪಾಲಕೃಷ್ಣ ರಾಜೀನಾಮೆ

ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ವಯಸ್ಸಿನ ಕಾರಣಕ್ಕೆ ರಾಜಕೀಯ ನಿವೃತ್ತಿ ಪಡೆಯಲು ರಾಜೀನಾಮೆ ನೀಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.

ಆದರೆ ಅವರು ಮೊಳಕಾಲ್ಮೂರಿನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಕನ್ಪರ್ಮ್ ಮಾಡಿಕೊಂಡೇ ರಾಜೀನಾಮೆ ನೀಡಿದ್ದಾರೆ. ಹಿಂದಿನ ಎಲೆಕ್ಷನ್ ನಲ್ಲಿ ಟಿಕೆಟ್ ನಿಂದ ವಂಚಿತ ಆಗಿದ್ದ ಗೋಪಾಲಕೃಷ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಪ್ರಭಾವದಿಂದ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದರು. ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Elections : ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ನಾಳೆ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್‌ಗೆ ಸೇರ್ಪಡೆ

Continue Reading

ಕರ್ನಾಟಕ

Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ

Hiriyur News: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್ ಅವರನ್ನು ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಬರ ಮಾಡಿಕೊಂಡರು.

VISTARANEWS.COM


on

Edited by

T Chandrasekhar Former city council president Hiriyur
ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್.
Koo

ಹಿರಿಯೂರು: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಗರಸಭೆಯ (city council) ಮಾಜಿ ಅಧ್ಯಕ್ಷ ಹಾಗೂ ಭೋವಿ ಸಮಾಜದ ನಾಯಕ ಟಿ. ಚಂದ್ರಶೇಖರ್ ಬಿಜೆಪಿಗೆ ಸದ್ದಿಲ್ಲದೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.

ಟಿ. ಚಂದ್ರಶೇಖರ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ತಿಮ್ಮಭೋವಿ, ರಂಗಸ್ವಾಮಿ ಸೇರಿದಂತೆ ಮತ್ತಿತರರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.

ಕಾಂಗ್ರೆಸ್‌ನಲ್ಲಿದ್ದ ಟಿ. ಚಂದ್ರಶೇಖರ್ ಅವರು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ನಂತರ ನಗರಸಭಾ ಅಧ್ಯಕ್ಷರಾಗಿದ್ದರು. ಬಳಿಕ ನಡೆದ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಶಾಸಕಿ ಕೆ. ಪೂರ್ಣಿಮಾ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರ ಜತೆಗಿದ್ದ ಚಂದ್ರಶೇಖರ್ ಅವರು ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಂತರ ಕಾಯ್ದುಕೊಂಡಿದ್ದರು. ಇದೀಗ ಗುರುವಾರ (ಮಾ.30) ರಾತ್ರಿ ಮಾಜಿ ಸಚಿವ ಡಿ. ಸುಧಾಕರ್ ಅವರು ತಮ್ಮ ಮನೆಯಲ್ಲಿಯೇ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Karnataka Election: ಕನ್ನಡಿಗರ ವಿರುದ್ಧ ತಮಿಳರನ್ನು ಮುನಿರತ್ನ ಎತ್ತಿಕಟ್ಟುತ್ತಿದ್ದಾರೆ: ಆಡಿಯೊ ಬಿಡುಗಡೆ ಮಾಡಿದ ಡಿ.ಕೆ. ಸುರೇಶ್‌

ಚಂದ್ರಶೇಖರ್ ಅವರು ಬಿಜೆಪಿ ತೊರೆದಿರುವುದರಿಂದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಹಿನ್ನಡೆ ಉಂಟಾಗಲಿದೆ ಎಂಬ ವಿಶ್ಲೇಷಣೆ ಸಹ ಈ ವೇಳೆ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭೋವಿ ಸಮಾಜದ ಮತಗಳು ಹೆಚ್ಚು ಬಂದಿದ್ದವು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರಿಯಾಗಲಿದೆಯೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಪಕ್ಷ ಸೇರ್ಪಡೆ ಕುರಿತು ಮಾತನಾಡಿದ ಮಾಜಿ ಸಚಿವ ಡಿ. ಸುಧಾಕರ್, ಚಂದ್ರಶೇಖರ್ ಅವರು ಕಾಂಗ್ರೆಸ್‌ನ ತತ್ತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ವಾಪಸ್ ಬಂದಿದ್ದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಭ್ರಷ್ಟಾಚಾರ, ಜನ ವಿರೋಧಿ ಆಡಳಿತ ಕೊನೆಗೊಂಡಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಕರ್ನಾಟಕ

BJP Karnataka: ರಾಜ್ಯಾದ್ಯಂತ ಬಿಜೆಪಿ ಆಂತರಿಕ ಚುನಾವಣೆ: ತಲಾ ಮೂವರು ಅಭ್ಯರ್ಥಿಗಳ ಹೆಸರು ಸೂಚಿಸಿದ ಪದಾಧಿಕಾರಿಗಳು

ಕಾರ್ಯಕರ್ತರ ಒಲವು ಯಾವ ಆಕಾಂಕ್ಷಿಗಳ ಪರವಾಗಿದೆ ಎನ್ನುವುದನ್ನು ಅರಿಯುವ ಸಲುವಾಗಿ ಬಿಜೆಪಿ ಅಭಿಪ್ರಾಯ ಸಂಗ್ರಹ ನಡೆಸುತ್ತಿದೆ.

VISTARANEWS.COM


on

Edited by

bjp karnataka conducting internal elections across state
Koo

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಿರುವ ಬಿಜೆಪಿ ರಾಜ್ಯಾದ್ಯಂತ ಕಾರ್ಯಕರ್ತರಿಂದ ಆಂತರಿಕ ಚುನಾವಣೆ ನಡೆಸುತ್ತಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕೇಂದ್ರ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಮತದಾನ ಮೂಲಕ ಅಭಿಪ್ರಾಯ ಸಂಗ್ರಹ ನಡೆಯಿತು. ರಾಜಾಜಿನಗರ, ಗಾಂಧಿ ನಗರ, ಚಾಮರಾಜಪೇಟೆ, ಶಿವಾಜಿನಗರ, ಶಾಂತಿನಗರ, ಸರ್ವಜ್ಞ ನಗರ, ಸಿ. ವಿ. ರಾಮನ್ ನಗರ, ಮಹದೇವಪುರ ಕ್ಷೇತ್ರಗಳ ಕುರಿತು ಪದಾಧಿಕಾರಿಗಳು ಅಭಿಪ್ರಾಯ ನೀಡುತ್ತಿದ್ದಾರೆ.

ಬೆಳಗಾವಿ ಧರ್ಮನಾಥ ಭವನದಲ್ಲಿ ಬೆಳಗಾವಿ ಬಿಜೆಪಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲಾ ಚುನಾವಣಾ ಸಿದ್ದತಾ ಸಭೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ನಡೆಯಿತು. ಬಳ್ಳಾರಿಯಲ್ಲಿ ಬಿಜೆಪಿ ರಾಜಾಧ್ಯಕ್ಷ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕಟೀಲ್‌, ಇಡೀ ರಾಜ್ಯದಲ್ಲಿ ಜಿಲ್ಲೆಗಳಿಗೆ ತಂಡಗಳನ್ನ ಕಳುಹಿಸಿ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದೇವೆ. ಅಭಿಪ್ರಾಯ ಸಂಗ್ರಹದ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಂದು ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದರು.

ಇದನ್ನೂ ಓದಿ: ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ

ಹಾವೇರಿಯಲ್ಲಿ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ. ರಾಜ್ಯದ ಎಲ್ಲ 36 ಸಂಘಟನಾ ಜಿಲ್ಲೆಗಳಲ್ಲೂ ಚುನಾವಣೆ ನಡೆದಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಇಂತಹ ಪ್ರಕ್ರಿಯೆ ನಡೆಸುತ್ತಿದೆ. ಜಿಲ್ಲಾ ಕೇಂದ್ರ ದಲ್ಲಿ ಪ್ರಕ್ರಿಯೆ ನಡೆದರೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಅಭಿಪ್ರಾಯ ಸಂಗ್ರಹ ನಡೆದಿದೆ.

ಪದಾದಿಕಾರಿಗಳು ಮೂವರು ಅಭ್ಯರ್ಥಿಗಳ ಹೆಸರನ್ನ ಬರೆದು ಮತಪೆಟ್ಟಿಗೆಯಲ್ಲಿ ಹಾಕಿದ್ದಾರೆ. ಈ ಕಾರ್ಯನಿರ್ವಹಣೆ ಮೇಲ್ವಿಚಾರಣೆಗೆ ವೀಕ್ಷಕರ ನೇಮಕ ಮಾಡಲಾಗಿದೆ. ಅಭಿಪ್ರಾಯ ಸಂಗ್ರಹ ಮುಗಿದ ಬಳಿಕ, ಅದನ್ನ ವೀಕ್ಷಕರು ರಾಜ್ಯ ಘಟಕಕ್ಕೆ ಸಲ್ಲಿಸಲಿದ್ದಾರೆ. ಇದರ ಆಧಾರದ ಮೇಲೆ ಏಪ್ರಿಲ್ 2 ಅಥವಾ 3 ರಂದು ರಾಜ್ಯ ಪಧಾದಿಕಾರಿಗಳ ಸಭೆ ನಡೆಯಲಿದೆ. ಸಭೆ ಬಳಿಕ ಈ ಅಭಿಪ್ರಾಯವನ್ನ ಕೇಂದ್ರ ಸಂಸದೀಯ ಮಂಡಳಿಗೆ ರವಾನಿಸಲಾಗುತ್ತೆ.

ಬ್ಯಾಲೇಟ್ ಪೇಪರ್ ಮೂಲಕ ಸಂಗ್ರಹವಾಗುವ ಅಭ್ಯರ್ಥಿಗಳ ಹೆಸರನ್ನು ರಾಜ್ಯ ಪದಾಧಿಕಾರಿಗಳು ಶನಿವಾರ ಶಾರ್ಟ್ ಲಿಸ್ಟ್ ಮಾಡಲಿದ್ದಾರೆ. ಬೆಂಗಳೂರಿನ ಹೊರ‌ ಹೊಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿರುವ ಸಭೆಗಳಲ್ಲಿ ಅಭ್ಯರ್ಥಿಗಳ ಶಿಫಾರಸನ್ನು ಕೇಂದ್ರಕ್ಕೆ ರವಾನೆ ಮಾಡಲಾಗುತ್ತದೆ.

ಇದನ್ನೂ ಓದಿ: ರಾಮ ರಾಮ! ಶ್ರೀರಾಮನ ಕಾಲಿನ ಮೇಲೆ ನಿಂತು ಪ್ರತಿಮೆಗೆ ಹೂವಿನ ಹಾರ ಹಾಕಿದ ಬಸವಕಲ್ಯಾಣ ಬಿಜೆಪಿ ಶಾಸಕ!

Continue Reading
Advertisement
Suicide Case updates 21 year old woman commits suicide by hanging herself
ಕರ್ನಾಟಕ4 mins ago

Suicide Case: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 21ರ ಮಹಿಳೆ; ಕೌಟುಂಬಿಕ ಕಲಹ ಶಂಕೆ

IPL 2023: IPL fan park after three years; Opportunity in Karnataka too
ಕ್ರಿಕೆಟ್15 mins ago

IPL 2023: ಮೂರು ವರ್ಷಗಳ ಬಳಿಕ ಐಪಿಎಲ್​ ಫ್ಯಾನ್​ ಪಾರ್ಕ್​; ಕರ್ನಾಟಕದಲ್ಲಿಯೂ ಇರಲಿದೆ ಜೋಶ್​

Mallikarjun khuba joins JDS
ಕರ್ನಾಟಕ18 mins ago

JDS Karnataka: ಬಿಜೆಪಿಯಿಂದ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

Navjot Sidhu to be released from Jail
ದೇಶ23 mins ago

ಏ.1ರಂದು ಜೈಲಿಂದ ಬಿಡುಗಡೆಯಾಗಲಿದ್ದಾರೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು; ಪತ್ನಿ ಟ್ವೀಟ್ ಬೆನ್ನಲ್ಲೇ ಸಿಧು ಟ್ವೀಟ್​

Release Rs 17.42 crore dues to MySugar factory says Dinesh Gooligowda
ಕರ್ನಾಟಕ24 mins ago

MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್‌ ಗೂಳಿಗೌಡ

Modi With Kharge
ಅಂಕಣ29 mins ago

ಮೊಗಸಾಲೆ ಅಂಕಣ: ಮೋದಿ, ಖರ್ಗೆ ಹಣಾಹಣಿಗೆ ವೇದಿಕೆ ಸಜ್ಜು

ಆರೋಗ್ಯ30 mins ago

New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

ವೈರಲ್ ನ್ಯೂಸ್33 mins ago

Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ

Boys death
ಕರ್ನಾಟಕ39 mins ago

Mysterious death : ನಿರ್ಜನ ಪ್ರದೇಶದಲ್ಲಿ 8 ವರ್ಷದ ಬಾಲಕನ ಶವ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿ ಎಸೆದ ಶಂಕೆ

6 die of suffocation in Delhi After Due to mosquito coil
ದೇಶ1 hour ago

ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ10 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ21 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!