ನವದೆಹಲಿ: ರಾಜ್ಯದ ಬಾಕಿ ರೈಲ್ವೆ ಹಾಗೂ ಜಲ ಜೀವನ್ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh), ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬುಧವಾರ ಭೇಟಿ ಮಾಡಿ, ಮನವಿ ಸಲ್ಲಿಸಿದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು, ಹೆಜ್ಜಾಲ, ಕನಕಪುರ ಹಾಗೂ ಚಾಮರಾಜನಗರ ಹೊಸ ರೈಲ್ವೆ ಮಾರ್ಗ ಈ ಹಿಂದೆಯೇ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಆಗಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ.
ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್
ಅದೇ ರೀತಿ ರಾಜ್ಯದ ಅನೇಕ ರೈಲ್ವೆ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಅವರು ಕೋರಿದರು.
ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್; ಪ್ರಯಾಣಿಕರು ಕಂಗಾಲು
ಜಲ ಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರು ಯೋಜನೆಗಳಿಗೆ ಸಲ್ಲಿಸಿರುವ ಪ್ರಸ್ತಾವನೆಗಳು ಆರು ತಿಂಗಳಿಂದ ಬಾಕಿ ಉಳಿದಿವೆ. ಅವುಗಳಿಗೆ ಮಂಜೂರಾತಿ ಕೊಡಿ ಎಂದು ಡಿ.ಕೆ. ಸುರೇಶ್ ಮನವಿ ಮಾಡಿದ್ದು, ಸಚಿವ ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.