Site icon Vistara News

Toll collection: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ಸಂಗ್ರಹ ಆರಂಭ

Expressway Ban on bike and auto traffic on Bangalore-Mysore expressway soon, what is the reason?

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಲಿದೆ. ಟೋಲ್ ಪ್ಲಾಜಾ ಮುಂಭಾಗ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಶೇಷಗಿರಿಹಳ್ಳಿ ಟೋಲ್ ಪ್ಲಾಜಾ ಮುಂಭಾಗ ಪೋಲಿಸರ ಸರ್ಪಗಾವಲು ಹಾಕಲಾಗಿದೆ. ಮೈಸೂರಿನಿಂದ-ಬೆಂಗಳೂರಿಗೆ ಎಕ್ಸಿಟ್ ಆಗುವ ಟೋಲ್ ಪ್ಲಾಜಾ ಇಲ್ಲಿದೆ. ಇಂದು ಬೆಳಿಗ್ಗೆ 8 ಘಂಟೆಯಿಂದ ಟೋಲ್ ಸಂಗ್ರಹ ಆರಂಭವಾಗಿದೆ.

ಟೋಲ್ ಸಂಗ್ರಹ ವಿರೋಧಿಸಿ ಯುವ ಕಾಂಗ್ರೆಸ್, ಕನ್ನಡಪರ ಸಂಘಟನೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿವೆ. ಮೂಲಭೂತ ವ್ಯವಸ್ಥೆ, ಸರ್ವಿಸ್ ರಸ್ತೆ ಸರಿಪಡಿಸಿ ಟೋಲ್ ಸಂಗ್ರಹಿಸುವಂತೆ ಆಗ್ರಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುನ್ನೆಚರಿಕಾ ಕ್ರಮವಾಗಿ ಪ್ರತಿಭಟನಾಕರರನ್ನು ಬಂಧಿಸಲು ಮೂರು ಡಿಎಆರ್ ವಾಹನಗಳನ್ನು ಪೊಲೀಸರು ವ್ಯವಸ್ಥೆಗೊಳಿಸಿದ್ದಾರೆ.

Exit mobile version