Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು - Vistara News

ಬೆಂಗಳೂರು

Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು

Train services: ವಿವಿಧ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ರೈಲು ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಕೆಲವು ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ಸ್ಥಗಿತಗೊಂಡರೆ, ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ವಿಸ್ತರಣೆ ಮಾಡಲಾಗಿದೆ.

VISTARANEWS.COM


on

Train services
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ಮೆಂಟ್-ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857ರಲ್ಲಿ ವಿವಿಧ ಕಾಮಗಾರಿಯನ್ನು ಇಲಾಖೆಯು ಕೈಗೊಳ್ಳುತ್ತಿದೆ. ಇದರ ಸಲುವಾಗಿ ಕೆಲವು ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ (Train services) ಮಾಡಲಾಗುತ್ತಿದೆ.

ಈ ರೈಲುಗಳ ಸಂಚಾರ ರದ್ದು

ಜುಲೈ 30, ಆಗಸ್ಟ್ 6 ಮತ್ತು 13ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12658 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ಚೆನ್ನೈನಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ತಾತ್ಕಾಲಿಕ ರದ್ದಾಗಲಿದೆ.

ಈ ಮಾರ್ಗದ ರೈಲುಗಳು ಭಾಗಶಃ ರದ್ದು

ಜುಲೈ 30, ಆಗಸ್ಟ್ 6 ಮತ್ತು 13ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು, ವೈಟ್ ಫೀಲ್ಡ್-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16594 ನಾಂದೇಡ್-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಲಹಂಕ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ & ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.

ಇನ್ನೂ ಜುಲೈ 31, ಆಗಸ್ಟ್ 7 ಮತ್ತು 14ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರ ನಿಲ್ದಾಣಗಳ ನಡುವೆ & ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06243 ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ. ಈ ರೈಲುಗಳು ಯಶವಂತಪುರ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಪ್ರಾರಂಭವಾಗಲಿವೆ.

ಮಾರ್ಗ ಬದಲಾವಣೆ

-ಜುಲೈ 29, ಆಗಸ್ಟ್ 5 ಮತ್ತು 12 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಮೆಂಟ್, ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

-ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ರೈಲು ಸಂಖ್ಯೆ 06269 ಮೈಸೂರು-ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್ಎಂವಿಟಿ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ 00:45 ಗಂಟೆಗೆ ಪ್ರಾರಂಭಿಸಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16021 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಇದನ್ನೂ ಓದಿ: Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

ರೈಲುಗಳ ನಿಯಂತ್ರಣ

ಜುಲೈ 30, ಆಗಸ್ಟ್ 6 ಮತ್ತು 13, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11301 ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 5 ನಿಮಿಷ, ರೈಲು ಸಂಖ್ಯೆ 16231 ಮೈಲಾಡುತುರೈ-ಮೈಸೂರು ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 45 ನಿಮಿಷ & ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ಎಕ್ಸ್ ಪ್ರೆಸ್ ರೈಲನ್ನು 100 ನಿಮಿಷ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.

ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ವಿಸ್ತರಣೆ

ಮಯಿಲಾಡುತುರೈ-ಮೈಸೂರು ನಿಲ್ದಾಣಗಳ ನಡುವೆ ಪ್ರತಿದಿನ ಚಲಿಸುವ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಕಡಲೂರು ಪೋರ್ಟ್ವರೆಗೆ ವಿಸ್ತರಿಸಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಹೀಗಾಗಿ ವಿಸ್ತೃತ ರೈಲು ಸೇವೆಯು ಎರಡೂ ಕಡೆಯಿಂದ ಜುಲೈ 19 ರಿಂದ ಪ್ರಾರಂಭವಾಗಲಿದೆ. ವಿಸ್ತರಣೆಗೊಂಡ ಭಾಗದ ರೈಲಿನ ನಿಲುಗಡೆ ಮತ್ತು ಸಮಯ ಹೀಗಿವೆ..

1) ರೈಲು ಸಂಖ್ಯೆ 16232 ಮೈಸೂರು-ಕಡಲೂರು ಪೋರ್ಟ್ ಡೈಲಿ ಎಕ್ಸ್‌ಪ್ರೆಸ್: ಮಯಿಲಾಡುತುರೈಗೆ 06:45 ಗಂಟೆಗೆ ಆಗಮಿಸಿ, 07:00 ಗಂಟೆಗೆ ನಿರ್ಗಮಿಸಲಿದೆ.
ಸಿರ್ಕಾಝಿಗೆ 07:23 ಗಂಟೆಗೆ ಆಗಮಿಸಿ, 07:24 ಗಂಟೆಗೆ ನಿರ್ಗಮಿಸಲಿದೆ.
ಚಿದಂಬರಂಗೆ 07:41 ಗಂಟೆಗೆ ಆಗಮಿಸಿ, 07:42 ಗಂಟೆಗೆ ನಿರ್ಗಮಿಸಲಿದೆ.
ಕಡಲೂರು ಪೋರ್ಟ್‌ಗೆ 08:35 ಗಂಟೆಗೆ ಆಗಮಿಸಲಿದೆ.

2) ರೈಲು ಸಂಖ್ಯೆ 16231 ಕಡಲೂರು ಪೋರ್ಟ್-ಮೈಸೂರು ಡೈಲಿ ಎಕ್ಸ್‌ಪ್ರೆಸ್ :
ಕಡಲೂರು ಪೋರ್ಟ್ ನಿಲ್ದಾಣದಿಂದ 15:40 ಗಂಟೆಗೆ ನಿರ್ಗಮಿಸಲಿದೆ.
ಚಿದಂಬರಂಗೆ 16:07 ಗಂಟೆಗೆ ಆಗಮಿಸಿ, 16:08 ಗಂಟೆಗೆ ನಿರ್ಗಮಿಸಲಿದೆ.
ಸಿರ್ಕಾಝಿಗೆ 16:23 ಗಂಟೆಗೆ ಆಗಮಿಸಿ,16:24 ಗಂಟೆಗೆ ನಿರ್ಗಮಿಸಲಿದೆ.
ಮಯಿಲಾಡುತುರೈಗೆ 17:30 ಗಂಟೆಗೆ ಆಗಮಿಸಿ,17:55 ಗಂಟೆಗೆ ನಿರ್ಗಮಿಸಲಿದೆ.

ಮೈಸೂರು-ಮೈಲಾಡುತುರೈ ನಿಲ್ದಾಣಗಳ ನಡುವಿನ ನಿಲುಗಡೆ ಮತ್ತು ವೇಳಾಪಟ್ಟಿಯಲ್ಲಿ ಬದಲಾಣೆ ಇರುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

VISTARANEWS.COM


on

ಬಿಡದಿ ಟೌನ್‌ಶಿಪ್‌

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಬೃಹತ್ ಪ್ರತಿಭಟನೆ ರೈತ ಸಂಘಟನೆಗಳ ತೀರ್ಮಾನ

ಬಿಡದಿ ಟೌನ್‌ಶಿಪ್ ಯೋಜನೆಯ ಅಂತಿಮ ಅಧಿಸೂಚನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ, ಯೋಜನೆ ವಿರೋಧಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಯೋಜನೆಗಾಗಿ ಭೂಮಿ ನೀಡದಿರಲು ರೈತರು ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದು, ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರ ಎಪಿಎಂಸಿ ಆವರಣದ ರೈತಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಗ್ರಾಮಗಳ ರೈತರು, ಮುಖಂಡರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಿದರು.

ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಭೈರಮಂಗಲ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿಭಟನೆಯ ಮೂಲಕ ಸರ್ಕಾರದ ಗಮನ ಸೆಳೆದು ಯೋಜನೆ ವಿರುದ್ಧದ ರೈತರ ಅಸಮಾಧಾನವನ್ನು ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ.

ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು, ರೈತರ ಬದುಕು ಮತ್ತು ಕೃಷಿ ಭೂಮಿಗೆ ಧಕ್ಕೆ ತರುವ ಯಾವುದೇ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರ ರೈತರ ಅಭಿಪ್ರಾಯವನ್ನು ಗೌರವಿಸಿ ಯೋಜನೆ ಕುರಿತು ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ರೈತರ ಹೋರಾಟಕ್ಕೆ ವಿಪಕ್ಷಗಳು ಬೆಂಬಲ ಸೂಚಿಸಿರುವುದಾಗಿ ತಿಳಿದುಬಂದಿದೆ. ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಕೂಡಾ ಪ್ರತಿಭಟನೆಗೆ ಸಾಥ್ ನೀಡಲು ಮುಂದಾಗಿವೆ ಎನ್ನಲಾಗಿದೆ.

ಜೂನ್ 22ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಸರ್ಕಾರದ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ಸಿದ್ಧತೆ ನಡೆಸಿವೆ.

Also Read: ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

VISTARANEWS.COM


on

ಸಿಎಂ ಡಿಕೆಶಿ

ಸಿಎಂ ಡಿಕೆಶಿ: ಲಂಚ ಕೇಳಿದ್ರೆ ದೂರು ನೀಡಲು ಪೋನ್ ನಂಬರ್ ಡಿಸ್ ಪ್ಲೇ

ಭ್ರಷ್ಟಾಚಾರ ಮುಕ್ತ ಸರ್ಕಾರದ ನಿರ್ಮಾಣವೇ ನನ್ನ ಮೊದಲ ಆದ್ಯತೆ” ಎಂದು ಹೇಳುವ ಮೂಲಕ ಸಿಎಂ ಡಿ.ಕೆ.ಶಿವಕುಮಾರ್‌ ಭ್ರಷ್ಟಾಚಾರದ ವಿರುದ್ಧ ತಮ್ಮ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಲಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕರಿಗೆ ಸೇವೆ ನೀಡುವ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ ಲಂಚಕ್ಕೆ ಅವಕಾಶ ಇರಬಾರದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಸಹಾಯಕ ಆಯುಕ್ತರು (ಎಸಿ) ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿಎಂ ಡಿಕೆಶಿ ಆಡಳಿತದ ಪಾರದರ್ಶಕತೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ.

ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಲಂಚ ಕೇಳಿದರೆ ಸಾರ್ವಜನಿಕರು ದೂರು ನೀಡಲು ಅನುಕೂಲವಾಗುವಂತೆ ಪ್ರತಿ ಸರ್ಕಾರಿ ಕಚೇರಿಯಲ್ಲಿ ದೂರು ಸಲ್ಲಿಸಲು ಅಗತ್ಯವಿರುವ ಫೋನ್ ನಂಬರ್‌ಗಳನ್ನು ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಿದರು.

“ನನಗೆ ಯಾವುದೇ ವೈಯಕ್ತಿಕ ನಿರೀಕ್ಷೆಗಳಿಲ್ಲ. ಜನರಿಗೆ ಸ್ವಚ್ಛ, ಪಾರದರ್ಶಕ ಮತ್ತು ಜನಸ್ನೇಹಿ ಆಡಳಿತ ನೀಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಸಿಎಂ ಹೇಳಿದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೇ ತಂಡದಂತೆ ಕೆಲಸ ಮಾಡಬೇಕು. “ನಾವೆಲ್ಲ ಕರ್ನಾಟಕ ಟೀಂ ಆಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಗಳ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಸಮನ್ವಯ ಅತ್ಯಗತ್ಯ” ಎಂದು ತಿಳಿಸಿದರು.

ಇದೇ ವೇಳೆ, ರಾಜ್ಯದ ಎಲ್ಲ ಜಿಲ್ಲೆಗಳ ಸಮಸ್ಯೆಗಳನ್ನು ಆಲಿಸಲು ತಾವೇ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಸಿಎಂ ಭರವಸೆ ನೀಡಿದರು. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Also Read: ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

VISTARANEWS.COM


on

ನರೇಂದ್ರ ಮೋದಿ

ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕಿಚ್ಚ.

ಸುದೀರ್ಘ ಅವಧಿಗೆ ಭಾರತದ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ಇತಿಹಾಸ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದೀಪ್, “12 ವರ್ಷಗಳು ಕಳೆದರೂ ಅದೇ ಉತ್ಸಾಹ, ಅದೇ ಕಾರ್ಯವೇಗ, ಕಿಂಚಿತ್ತೂ ದಣಿವೇ ಇಲ್ಲ” ಎಂದು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯತ್ತ ಪ್ರಧಾನಿ ಮೋದಿ ತೋರಿರುವ ನಿರಂತರ ಬದ್ಧತೆ ಹಾಗೂ ಸಮರ್ಪಣೆಯನ್ನು ಕೊಂಡಾಡಿರುವ ಸುದೀಪ್, ಈ ಸಾಧನೆ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಮುಂದಿನ ದಿನಗಳಿಗೂ ಯಶಸ್ಸು, ಆರೋಗ್ಯ ಮತ್ತು ಇನ್ನಷ್ಟು ಸಾಧನೆಗಳು ತಮ್ಮದಾಗಲಿ ಎಂದು ಹಾರೈಸಿದ್ದಾರೆ.

ಭಾರತದ ಚುನಾವಣೋತ್ತರ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಸತತವಾಗಿ 4,399 ದಿನಗಳ(ಜೂನ್‌ 10ಕ್ಕೆ) ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ಅನೇಕರು ಪ್ರಧಾನಿ ಮೋದಿ ಅವರ ಐತಿಹಾಸಿಕ ಆಡಳಿತಾವಧಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

ಪ್ರಮುಖ ಸುದ್ದಿ

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

VISTARANEWS.COM


on

ರಾಜ್ಯಸಭೆ ಟಿಕೆಟ್‌

ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ- ಹೆಚ್‌ಡಿಡಿ

ರಾಜ್ಯಸಭಾ ಟಿಕೆಟ್‌ಗಾಗಿ ಮೋದಿ ನನ್ನ ಸಂಬಂಧ ಆರಂಭವಾಗಿಲ್ಲ. ಮೋದಿಯವರು ವಿಶ್ವನಾಯಕ, ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆ ಜೆಡಿಎಸ್‌ ಇರುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಟಿಕೆಟ್‌ ಸಿಗದ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಹೆಚ್‌.ಡಿ.ದೇವೇಗೌಡರು ಇಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯಸಭೆ ಟಿಕೆಟ್‌ ವಿಚಾರವಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ 18 ಶಾಸಕರು ಇದ್ದಾರೆ. ಹಾಗಾಗಿ ನಾವು ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನನ್ನ ಮತ್ತು ಮೋದಿಯವರ ಸಂಬಂಧ ಒಂದು ರಾಜ್ಯಸಭೆ ಟಿಕೆಟ್‌ನಿಂದ ಆರಂಭವಾಗಿದೆ ಅಥವಾ ಅದಕ್ಕಾಗಿಯೇ ಮುಂದುವರಿಯುತ್ತಿದೆ ಎಂದು ರಾಜ್ಯದ ಜನರು ಭಾವಿಸಬಾರದು. 2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಾಗಿನಿಂದಲೇ ಅವರ ಕಾರ್ಯವೈಖರಿಯನ್ನು ಗಮನಿಸುತ್ತಿದ್ದೇನೆ” ಎಂದು ದೇವೇಗೌಡರು ಹೇಳಿದ್ದಾರೆ.

ಗೋಧ್ರಾ ಘಟನೆಯ ಸಂದರ್ಭದಲ್ಲಿ ತಾವು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೋದಿ ಅವರನ್ನು ಟೀಕಿಸಿದ್ದ ವಿಚಾರವನ್ನೂ ಅವರು ನೆನಪಿಸಿಕೊಂಡರು. ಆದರೆ ನಂತರ ಪ್ರಧಾನಿಯಾದ ಬಳಿಕ ಮೋದಿ ಅವರನ್ನು ಹಲವು ಬಾರಿ ಭೇಟಿಯಾಗಿ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯದ ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಗಮನಿಸಿದ್ದೇನೆ. ದೇಶದ ಆರ್ಥಿಕತೆ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದೆ. ಜಾಗತಿಕ ಮಟ್ಟದಲ್ಲೂ ಮೋದಿ ಅವರಿಗೆ ವಿಶಿಷ್ಟ ಗೌರವ ಮತ್ತು ಸ್ಥಾನಮಾನ ದೊರೆತಿದೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

“ಮೋದಿಯವರಂತಹ ನಾಯಕತ್ವವನ್ನು ಬೇರೆ ಯಾರಿಂದಲೂ ಸರಿಸಾಟಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ವೈಯಕ್ತಿಕವಾಗಿ ಅವರೊಂದಿಗೆ ನನಗೆ ಆತ್ಮೀಯ ಸಂಬಂಧವಿದೆ. ನಾನು ರಾಜ್ಯಸಭಾ ಸದಸ್ಯನಾಗದಿದ್ದರೂ ಆ ಸಂಬಂಧ ಮುಂದುವರಿಯುತ್ತದೆ” ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಚಾರ ಬಂದರೂ ಪ್ರಧಾನಿಯನ್ನು ಭೇಟಿ ಮಾಡುವ ಅಥವಾ ಪತ್ರ ಬರೆಯುವ ಅವಕಾಶ ನನಗಿದೆ. ನಮ್ಮ ಸಂಬಂಧ ರಾಜಕೀಯ ಹುದ್ದೆಗಳಿಗೆ ಸೀಮಿತವಲ್ಲ ಎಂದು ದೇವೇಗೌಡರು ಹೇಳಿದರು.

ಇದೇ ವೇಳೆ, ಎನ್‌ಡಿಎ ಜತೆಗಿನ ಜೆಡಿಎಸ್ ಬಾಂಧವ್ಯದ ಬಗ್ಗೆ ಮಾತನಾಡಿದ ಅವರು, “ಒಂದು ರಾಜ್ಯಸಭೆ ಸ್ಥಾನದ ಕಾರಣಕ್ಕೆ ಎನ್‌ಡಿಎ ಜೊತೆಗಿನ ಸಂಬಂಧ ಮುಕ್ತಾಯವಾಗುವುದಿಲ್ಲ. ನಾವು ರಾಜ್ಯಸಭಾ ಸ್ಥಾನವನ್ನು ಕೇಳಿಯೂ ಇಲ್ಲ ಎಂದ ಅವರು ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆಗಿನ ಮೈತ್ರಿ ಮತ್ತು ಸಂಬಂಧ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

Also Read: ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
ಬಿಡದಿ ಟೌನ್‌ಶಿಪ್‌
Latest1 day ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest2 days ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest3 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest3 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest3 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest4 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ5 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest5 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest5 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest5 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌