Site icon Vistara News

Suicide Case | ವಿಷ ಸೇವಿಸಿ ತಾಯಿ, ಇಬ್ಬರು ಮಕ್ಕಳ ಆತ್ಮಹತ್ಯೆ

suicide

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಧಾನಿಯ ಮಹಾಲಕ್ಷ್ಮಿ ಲೇಔಟಿನ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮಹಾಲಕ್ಷ್ಮಿ ಲೇಔಟ್‌ನ ವೆಸ್ಟ್ ಆಫ್ ಕಾರ್ಡ್ ರೋಡ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ತಾಯಿ‌ ಹಾಗೂ ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಮಕ್ಕಳಿಗೆ ತಾಯಿ ವಿಷ ನೀಡಿ ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಯಶೋದ(೭೦), ಸುಮನ್ ಗುಪ್ತಾ(೪೧), ನರೇಶ್ ಗುಪ್ತಾ (೩೬) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ರಾತ್ರಿ ಘಟನೆ ನಡೆದಿದ್ದು ಮುಂಜಾನೆ ಪೊಲೀಸರಿಗೆ ಮಾಹಿತಿ ದೊರೆತಿದೆ. ಯಶೋದ ತಮ್ಮ ಮಗಳು ಹಾಗೂ ಮಗನ ಜೊತೆ ಮಹಾಲಕ್ಷ್ಮಿ ಲೇಔಟ್‌ನ ಮನೆಯಲ್ಲಿ ವಾಸವಿದ್ದರು. ನರೇಶ್ ಗುಪ್ತಾ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದರು ಎಂದು ತಿಳಿದುಬಂದಿದೆ. ಮಹಾಲಕ್ಷ್ಮಿ ಲೇಔಟ್‌ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Suicide Case | ಮದುವೆ ಬ್ರೇಕಪ್‌ಗೆ ಬೇಸತ್ತು ಆರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Exit mobile version