Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್ - Vistara News

ಬೆಂಗಳೂರು

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Tungabhadra Dam: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ʼʼಸರ್ಕಾರ ಅಲ್ಲಿಗೆ ತಾಂತ್ರಿಕ ತಂಡವನ್ನು ಕಳುಹಿಸುತ್ತಿದೆ. ನದಿಪಾತ್ರದ ಊರುಗಳಲ್ಲಿ ಪ್ರವಾಹ ಆಗುವ ಭಯ ಬೇಡ” ಎಂದು ಹೇಳಿದ್ದಾರೆ.

VISTARANEWS.COM


on

Tungabhadra Dam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯ (Tungabhadra Dam)ದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ (Dr. G. Parameshwar) ಅವರು, ʼʼಸರ್ಕಾರ ಅಲ್ಲಿಗೆ ತಾಂತ್ರಿಕ ತಂಡವನ್ನು ಕಳುಹಿಸುತ್ತಿದೆ. ನದಿಪಾತ್ರದ ಊರುಗಳಲ್ಲಿ ಪ್ರವಾಹ ಆಗುವ ಭಯ ಬೇಡ ಎಂದು ಎಂಜಿನಿಯರ್‌ಗಳು ತಿಳಿಸಿದ್ದಾರೆ. ಕ್ರಸ್ಟ್ ಗೇಟ್ ರಿಪೇರಿ ಮಾಡಲು ಸಾಧ್ಯವಿದೆʼʼ ಎಂದು ಅಭಯ ನೀಡಿದ್ದಾರೆ.

ʼʼಪ್ರವಾಹ ಭೀತಿ ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳುತ್ತಿದ್ದಾರೆ. ತಾಂತ್ರಿಕ ತಂಡ ಹೋದ ನಂತರ ಎಲ್ಲ ಸರಿಯಾಗುವ ವಿಶ್ವಾಸ ಇದೆʼʼ ಎಂದು ತಿಳಿಸಿದ್ದಾರೆ.

ಸರ್ಕಾರ ‌ಎಲ್ಲಿ‌ದೆ? ಮಾಜಿ ಸಚಿವ ಹಾಲಪ್ಪ ಆಚಾರ್ ಆಕ್ರೋಶ

ಕೊಪ್ಪಳ: ತುಂಗಭದ್ರಾ ಜಲಾಶಯ ಪರಿಶೀಲಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ʼʼಜಲಾಶಯದ 19ನೇ ಗೇಟ್ ಅಡ್ರೆಸ್ ಇಲ್ಲದಂತೆ ನಾಪತ್ತೆಯಾಗಿದೆ. ಉಳಿದ ಗೇಟ್‌ಗಳಲ್ಲಿ ಕೂಡ ಬಿರುಕು ಕಂಡು ಬಂದಿದೆ. ಇಂತಹ ಘಟನೆ ನಡೆದಿದ್ದರೂ ಜವಾಬ್ದಾರಿ ಇರುವ ಸರ್ಕಾರ ‌ಎಲ್ಲಿ‌ದೆ?ʼʼ ಎಂದು ಪ್ರಶ್ನಿಸಿದ್ದಾರೆ.

ʼʼ4 ಜಿಲ್ಲೆಯ 10 ಲಕ್ಷ ಎಕರೆ ಪ್ರದೇಶದ ರೈತರು ಇದೇ ಡ್ಯಾಂ ನೀರನ್ನು ನೆಚ್ಚಿಕೊಂಡಿದ್ದಾರೆ. ನೀರು ಅಪಾರ ಪ್ರಮಾಣದಲ್ಲಿ ಹರಿ ಹೋಗುತ್ತಿರುವುದಿಂದ ಪ್ರವಾಹ ಭೀತಿ ಜತೆಗೆ ಮುಂದೆ ನೀರು ಖಾಲಿಯಾಗುವ ಆತಂಕವೂ ಇದೆ. ರೈತರ ತಲೆ ಮೇಲೆ ಸರ್ಕಾರ ಬಂಡೆ ಹಾಕಿದಂತಾಗಿದೆ. ಯಾವುದೇ ಯೋಜನೆಯಿರಲಿ ಅದನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು. ಆದರೆ ಇಲ್ಲಿ ಸರಿಯಾಗಿ ನಿರ್ವಹಣೆ ಮಾಡದ ಕಾರಣ ನಿರ್ಲಕ್ಷ್ಯದಿಂದ ಈ ರೀತಿ ಪರಿಸ್ಥಿತಿ ಎದುರಾಗಿದೆʼʼ ಎಂದು ದೂರಿದ್ದಾರೆ.

ʼʼಇದು ಸರ್ಕಾರದ ತಪ್ಪು. ಜಲಾಶಯದ ಸ್ಥಿತಿಗೆ ಸರ್ಕಾರವೇ ನೇರ ಹೊಣೆ. ಜಲಾಶಯ ನಿರ್ವಹಣೆಗೆ ಅನುದಾನ ಇರುತ್ತದೆ. ಒಂದುವೇಳೆ ಇಲ್ಲದಿದ್ದರೆ ರಾಜ್ಯ ಸರ್ಕಾರ ‌ನೀಡಬೇಕು. ಕಾಂಗ್ರೆಸ್ ಸರ್ಕಾರದಿಂದ ಬೇಜವಬ್ದಾರಿತನದಿಂದ ಆಡಳಿತ ನಡೆಯುತ್ತಿದೆ. ಯುದ್ದೋಪಾದಿಯಲ್ಲಿ ಗೇಟ್ ರಿಪೇರಿ ಕೆಲಸವಾಗಬೇಕಿತ್ತು. ಆದರೆ ಇಲ್ಲಿವರಗೆ ರಿಪೇರಿ ‌ಕೆಲಸ‌ ಆರಂಭವಾಗಿಲ್ಲʼʼ ಎಂದು ಹೇಳಿದ್ದಾರೆ.

ನೀರು ಉಳಿಸಬೇಕು: ಸಂಸದ ತುಕಾರಾಂ

ವಿಜಯನಗರ: ʼʼತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿಯಲು ಏನು ಕಾರಣ ಎನ್ನುವುದು ಗೊತ್ತಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ‌ವೋ ತಾಂತ್ರಿಕ ತೊಂದರೆಯೋ ಎನ್ನುವುದು ತಿಳಿದು ಬಂದಿಲ್ಲ. ಮೊದಲು ಹರಿದು ಹೋಗುತ್ತಿರುವ ನೀರನ್ನು ಉಳಿಸಬೇಕಿದೆ. ಈ ಬಗ್ಗೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದೇನೆʼʼ ಎಂದ ಸಂಸದ ತುಕಾರಾಂ ತಿಳಿಸಿದ್ದಾರೆ.

ಜಲಾಶಯ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ʼʼಗೇಟ್ ದುರಸ್ತಿಗಾಗಿ ಪರಿಣಿತರನ್ನು ಕರೆಸುತ್ತಿದ್ದೇವೆ. ಈಗಾಗಲೇ ನೀರಾವರಿ ನಿಗಮದ ಎಂಡಿ ಬಂದಿದ್ದಾರೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಮತ್ತು ನಾನು ರೈತರ ಜತೆ ಇದ್ದೇ ಇರುತ್ತೇವೆʼʼ ಎಂದು ತಿಳಿಸಿದ್ದಾರೆ.

ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆ

ಸೋಮವಾರ (ಆಗಸ್ಟ್‌ 13) ನಿಗದಿಯಾಗಿದ್ದ ಹೇಮಾವತಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest18 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest20 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest22 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest24 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest5 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌