Accident | ಮದ್ಯದ ಅಮಲಿನಲ್ಲಿ ಬೈಕ್ ಹತ್ತಿದ ಇಬ್ಬರು ಹೋಗಿದ್ದು ಯಮಲೋಕಕ್ಕೆ! - Vistara News

ಬೆಂಗಳೂರು

Accident | ಮದ್ಯದ ಅಮಲಿನಲ್ಲಿ ಬೈಕ್ ಹತ್ತಿದ ಇಬ್ಬರು ಹೋಗಿದ್ದು ಯಮಲೋಕಕ್ಕೆ!

ಮದ್ಯ ಸೇವಿಸಿದ್ದರೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ್ದರಿಂದ ಬೆಂಗಳೂರಿನ ಲಗ್ಗೆರೆ ಸೇತುವೆ ಬಳಿ ಬೈಕ್‌ ಅಪಘಾತ ನಡೆದು, ಸವಾರರಿಬ್ಬರೂ ಮೃತಪಟ್ಟಿದ್ದಾರೆ.

VISTARANEWS.COM


on

Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಸ್ತೆಯಲ್ಲಿ ತೆರಳುತ್ತಿದ್ದಾಗ ಕಾಮಗಾರಿ ಸೂಚನಾ ಫಲಕಕ್ಕೆ ಬೈಕ್‌ ಡಿಕ್ಕಿಯಾಗಿ (Accident) ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಕಂಠಪೂರ್ತಿ ಕುಡಿದು ಬೈಕ್ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ದೇವರಾಜು(22) ಹಾಗೂ ಜಗದೀಶ್(22) ಮೃತರು. ಮದ್ಯದ ಅಮಲಿನಲ್ಲಿ ನಿರ್ಲಕ್ಷ್ಯದಿಂದ ಜಗದೀಶ್ ಅತಿವೇಗವಾಗಿ ಬೈಕ್ ಚಲಾಯಿಸಿದ್ದಾನೆ. ನಗರದ ಲಗ್ಗೆರೆ ಬ್ರಿಡ್ಜ್ ಬಳಿ ನಿಯಂತ್ರಣ ತಪ್ಪಿ ಕಾಮಗಾರಿ ಸೂಚನಾ ಫಲಕಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಇಬ್ಬರಿಗೂ ಗಂಭೀರ ಗಾಯಗಳಾಗಿವೆ.

ತಕ್ಷಣ ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯದಲ್ಲಿ ಮುಂಬದಿ ಸವಾರ ಜಗದೀಶ್ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ದೇವರಾಜ್‌ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case | ಹೆಂಡತಿಯನ್ನು ಚುಡಾಯಿಸಿದ ಎಂದು ಪ್ರಶ್ನೆ ಮಾಡಿದವನನ್ನೇ ಕೊಂದ ಭೂಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

VISTARANEWS.COM


on

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಜಂಟಿಯಾಗಿ ಮೇ 16ರಂದು ನಗರದಲ್ಲಿ “ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026” ಆಯೋಜಿಸಿವೆ.
“ತಂತ್ರಜ್ಞಾನದಲ್ಲಿನ ಸ್ವಾಯತ್ತತೆ” ಎಂಬ ವಿಷಯದಡಿ ಈ ಸಮ್ಮಿಟ್ ನಡೆಯಲಿದೆ ಎಂದು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ, ವಿಶೇಷವಾಗಿ ಬೆಂಗಳೂರು, ಇಂದು ಭಾರತದ ತಂತ್ರಜ್ಞಾನ ಮಹತ್ವಾಕಾಂಕ್ಷೆಯ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ದೇಶದ ಪ್ರಮುಖ ಜಿಡಿಪಿ ಕೊಡುಗೆ ನೀಡುವ ನಗರಗಳಲ್ಲಿ ಬೆಂಗಳೂರು ಒಂದಾಗಿದೆ, ವೆಂಚರ್ ಕ್ಯಾಪಿಟಲ್ ಹೂಡಿಕೆಗಳ ಪ್ರಮುಖ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ.

Continue Reading

Latest

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

VISTARANEWS.COM


on

ನ್ಯೂಯಾರ್ಕ್:‌ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಪರಮಾಣು ಶಸ್ತ್ರಾಸ್ತ್ರಗಳ ಶಾಂತಿಯುತ ಬಳಕೆಗೆ ಕರೆ ನೀಡಿದೆ.
ಚೆರ್ನೋಬಿಲ್‌ ದುರಂತದ ಸ್ಮರಣಾರ್ಥ ಶುಕ್ರವಾರ ಇಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷೆ ಅನ್ನಾಲೆನಾ ಬೇರ್‌ಬಾಕ್ ಅವರು, ಚೆರ್ನೋಬಿಲ್‌ನ ಪ್ರಮಾಣವು, ಪರಮಾಣು ತಂತ್ರಜ್ಞಾನವನ್ನು ಶಾಂತಿಯುತವಾಗಿ ಬಳಸಿದಾಗಲೂ ಇತರ ತಂತ್ರಜ್ಞಾನಗಳಿಗಿಂತ ಮೂಲಭೂತವಾಗಿ ಭಿನ್ನವಾಗಿದೆ ಎಂದು ಒತ್ತಿ ಹೇಳಿದರು.
ಏಪ್ರಿಲ್ 26, 1986 ರಂದು ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ಇತಿಹಾಸದಲ್ಲಿಯೇ ಅತ್ಯಂತ ಭೀಕರವಾದ ಪರಮಾಣು ಅಪಘಾತಗಳಲ್ಲಿ ಒಂದನ್ನು ಕಂಡಿತು. ಆ ದಿನ, ಸರಣಿ ಸ್ಫೋಟಕಗಳು ನಂ. 4 ರಿಯಾಕ್ಟರ್ ಅನ್ನು ಹಾಳು ಮಾಡಿ, ಉಕ್ರೇನ್, ಬೆಲಾರಸ್ ಮತ್ತು ಯುರೋಪಿನ ಇತರ ಭಾಗಗಳಲ್ಲಿ ವಿಕಿರಣಶೀಲ ಮಾಲಿನ್ಯವನ್ನು ಹರಡಿತು.
8 ಮಿಲಿಯನ್‌ಗಿಂತಲೂ ಹೆಚ್ಚು ಜನರು ವಿಕಿರಣಕ್ಕೆ ಒಡ್ಡಿಕೊಂಡರು, ಸಾವಿರಾರು ಜನರು ಸತ್ತರು ಮತ್ತು ಮಕ್ಕಳು ಲ್ಯುಕೇಮಿಯಾ ಮತ್ತು ಇತರ ಕಾಯಿಲೆಗಳನ್ನು ಬೆಳೆಸಿಕೊಂಡರು ಎಂದು ಬೇರ್‌ಬಾಕ್ ಹೇಳಿದರು.

Continue Reading

Latest

ಒಳಮೀಸಲಾತಿ ಜಾರಿ: ಕೊಟ್ಟ ಮಾತು ಈಡೇರಿಸಿದ ಸಿದ್ದರಾಮಯ್ಯ; ಸಚಿವ ಆರ್.ಬಿ. ತಿಮ್ಮಾಪುರ

VISTARANEWS.COM


on

ಬೆಂಗಳೂರು: ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಐತಿಹಾಸಿಕ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ, ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ನೇತೃತ್ವದ ನಿಯೋಗ ಕೃತಜ್ಞತೆ ಅರ್ಪಿಸಿತು.

ಶನಿವಾರ ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ತಿಮ್ಮಾಪೂರ ಹಾಗೂ ನೂರಾರು ದಲಿತ ಎಡ ಸಮುದಾಯದ ನಾಯಕರು, ಮೂವತ್ತು ವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕೆ ಸಿಹಿ ತಿನ್ನಿಸಿ ಧನ್ಯವಾದ ತಿಳಿಸಿದರು.

ನಮ್ಮ ಒಳ ಮೀಸಲಾತಿ ಹೋರಾಟ 30-40 ವರ್ಷಗಳದ್ದು. ಹಲವು ಸರ್ಕಾರಗಳು, ಮುಖ್ಯಮಂತ್ರಿಗಳಿಂದ ಸಾಧ್ಯವಾಗದ ಕೆಲಸವನ್ನ ಸಿದ್ದರಾಮಯ್ಯರವರು ಮಾಡಿ ತೋರಿಸಿದ್ದಾರೆ‌. ಸಿದ್ದರಾಮಯ್ಯನವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಸರ್ವ ಜನಾಂಗ ಒಪ್ಪುವಂತೆ ಮಾಡಿ, ಎಲ್ಲಾ ಕ್ಯಾಬಿನೆಟ್ ಸಚಿವರ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೂಲಕ ನಮ್ಮ ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಮ್ಮ ಇಡೀ ಸಮುದಾಯ ಸಿದ್ದರಾಮಯ್ಯರನ್ನ ನೆನಪಿಟ್ಟುಕೊಳ್ಳಲಿದೆ. ಇಡೀ ಸಮುದಾಯ ಅವರಿಗೆ ಕೃತಜ್ಞರಾಗಿಲಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದರು.

Continue Reading
Advertisement
Latest3 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest4 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest4 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest6 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest6 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest8 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest8 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest10 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest1 day ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌