Site icon Vistara News

UGCET 2024: ಸಿಇಟಿ, ನೀಟ್; ನೈಜ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

UGCET 2024

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ (UGCET 2024) ಪ್ರಕಟಿಸಿದೆ.

ಫಲಿತಾಂಶ ಕುರಿತು ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದಲ್ಲಿ ಮಾತ್ರ, ಅಂದರೆ ಆಪ್ಷನ್ ದಾಖಲಿಸಿದ್ದರೂ ಸೀಟು ಹಂಚಿಕೆಯಾಗದಿರುವ ಇತ್ಯಾದಿ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆ.30 ರ ಮಧ್ಯಾಹ್ನ 12 ಗಂಟೆ ಒಳಗೆ ಇ-ಮೇಲ್ (keaauthority-ka@nic.in) ಕಳುಹಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Reliance Jio: ರಿಲಯನ್ಸ್ ಜಿಯೋನಿಂದ ಹೊಸ ಆಫರ್‌; 100 ಜಿಬಿ ಕ್ಲೌಡ್ ಸಂಗ್ರಹ ಉಚಿತ

ಆಕ್ಷೇಪಣೆಗಳನ್ನು ಪರಿಶೀಲಿಸಿ, ನೈಜವಾಗಿದ್ದರೆ ಮಾತ್ರ ಪರಿಗಣಿಸಲಾಗುತ್ತದೆ. ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ವಿವಿಧ ನಾಲ್ಕು ಚಾಯ್ಸ್‌ಗಳನ್ನು ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಕೆಸೆಟ್: ಅರ್ಜಿ ಸಲ್ಲಿಸಲು ಸೆ.2ರವರೆಗೆ ಅವಕಾಶ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್-24) ಗೆ ಅರ್ಜಿ ಸಲ್ಲಿಸಲು ಸೆ.2 ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.3 ಕೊನೆ ದಿನ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

ಡಿಸಿಇಟಿ: ಮರು ಪರೀಕ್ಷೆಯಲ್ಲಿ ಅರ್ಹರಾದವರಿಗೂ ಅವಕಾಶ

ಜುಲೈ ತಿಂಗಳ ಮರು ಪರೀಕ್ಷೆಯಲ್ಲಿ ಅರ್ಹತೆ ಪಡೆದ ಡಿಪ್ಲೊಮಾ ಅಭ್ಯರ್ಥಿಗಳು, ಡಿಸಿಇಟಿ-24ಕ್ಕೆ ಹಾಜರಾಗದೇ ಇದ್ದಲ್ಲಿ 2ನೇ ಸುತ್ತಿನ ನಂತರ ಉಳಿದಿರುವ ಎಂಜಿನಿಯರಿಂಗ್, ಆರ್ಕಿಟೆಕ್ಚರ್ ಸೀಟುಗಳ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌

ಮಾರ್ಗಸೂಚಿಗಳನ್ನು ಸದ್ಯದಲ್ಲೇ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ವಿವರಗಳಿಗೆ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

Exit mobile version