Site icon Vistara News

UGCET 2024: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ರಿಸ್ಟಲ್‌ ಅನೌನ್ಸ್‌; ಆಪ್ಶನ್ ಎಂಟ್ರಿಗೆ ಇವತ್ತೆ ಲಾಸ್ಟ್

UGCET 2024 /NEET seat allotment results will be declared on Sept 1st

ಬೆಂಗಳೂರು: ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸುಗಳ ಪ್ರವೇಶಕ್ಕೆ (UGCET 2024) ಆಪ್ಶನ್ (ಆಯ್ಕೆ/ಇಚ್ಛೆ) ಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಂಗಳವಾರ (ಆ.20) ರಾತ್ರಿ ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದೆ.

ವಾಟ್ಸ್‌ ಆ್ಯಪ್‌ ಸಂದೇಶ

ಆಗಸ್ಟ್ 22ರ ಬೆಳಗ್ಗೆ 10ರವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ‌ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ ಆ್ಯಪ್‌ ಸಂದೇಶ ಕೂಡ ರವಾನಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೂ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ಇರುತ್ತದೆ

ಇದನ್ನೂ ಓದಿ: KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

ಆ.25ಕ್ಕೆ 2ನೇ ಅಣಕು ಸೀಟು ಹಂಚಿಕೆ ರಿಸ್ಟಲ್‌

ಆಗಸ್ಟ್ 25ರ ರಾತ್ರಿ 8ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುತ್ತದೆ. ನಂತರ ಆಗಸ್ಟ್ 27ರ ಬೆಳಗ್ಗೆ 11ರವರೆಗೆ ಇಚ್ಛೆಗಳನ್ನು ಬದಲಿಸಿಕೊಳ್ಳಬಹುದು. ಸೆಪ್ಟೆಂಬರ್ 1ರಂದು ಸಂಜೆ 6ಕ್ಕೆ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.

ವೆಬ್ ಸೈಟ್‌ನಲ್ಲಿ ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಹಾಗೆಯೇ ಕಾಲೇಜು ಶುಲ್ಕದ ಮಾಹಿತಿ ಕೂಡ ಇದ್ದು, ಅದನ್ನೂ ಗಮನಿಸಿಯೇ‌ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಿ ಎಂದೂ ಪ್ರಸನ್ನ ಸಲಹೆ ನೀಡಿದ್ದಾರೆ.

ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಂಡೇ ಮುಂದುವರಿಯಬೇಕು.

ಅಭ್ಯರ್ಥಿಗಳೇ ಹುಷಾರ್‌..

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್‌ಗಳ ಸೀಟು ಕೊಡಿಸುವುದಾಗಿ ಹೇಳಿ ವಂಚಿಸುವವರ ಬಗ್ಗೆ ಎಚ್ಚರ ಇರಲಿ. ಸರ್ಕಾರಿ, ಖಾಸಗಿ, ಮ್ಯಾನೇಜ್ಮೆಂಟ್, ಎನ್.ಆರ್.ಐ ಹೀಗೆ ಎಲ್ಲ ಕೋಟಾಗಳ ಸೀಟು ಹಂಚಿಕೆ ಮೆರಿಟ್ ಆಧಾರದ ಮೇಲೆ ಕೆಇಎ ವತಿಯಿಂದಲೇ ಆಗುತ್ತದೆ. ಈ ಕುಡಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಎಕ್ಸ್‌ ಮೂಲಕ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version