Site icon Vistara News

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

Pralhad Joshi

ನವದೆಹಲಿ: ಭಾರತದಲ್ಲೂ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಮನಸ್ಥಿತಿ, ದುಷ್ಟ ಉದ್ದೇಶ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಮುಖಂಡ ಐವಾನ್ ಡಿಸೋಜ ಅವರ ಹೇಳಿಕೆ ಅರಾಜಕತೆ ಸೃಷ್ಟಿಯನ್ನು ಪುಷ್ಟೀಕರಿಸುತ್ತಿದೆ ಎಂದು ವ್ಯಾಖ್ಯಾನಿಸಿ ಸಚಿವ ಜೋಶಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಭ್ರಷ್ಟಾಚಾರದ ಜನಕ ಕಾಂಗ್ರೆಸ್ ಪಕ್ಷ ಈ ರೀತಿ ಅರಾಜಕತೆಯ ಮಾತುಗಳನ್ನಾಡುವುದು ಅಕ್ಷಮ್ಯ ಮತ್ತು ಅತ್ಯಂತ ಖಂಡನೀಯ ಎಂದು ತಿಳಿಸಿರುವ ಸಚಿವರು, ಕಾಂಗ್ರೆಸ್‌ನ ನಡೆ ನೋಡಿದರೆ ಬಾಂಗ್ಲಾ ದೇಶದಂತಹ ಅರಾಜಕತೆ ಸೃಷ್ಟಿಸುವ ರೀತಿ ವರ್ತಿಸುತ್ತಿರುವಂತಿದೆ ಎಂದು ಆರೋಪಿಸಿದ್ದಾರೆ.

ಸಂವಿಧಾನ ದತ್ತವಾಗಿರುವ ರಾಜ್ಯಪಾಲರ ಸ್ಥಾನಕ್ಕೆ ಘನತೆ-ಗೌರವ ತೋರುವ ಬದಲು ಅದಕ್ಕೆ ಧಕ್ಕೆ ತರುವ ರೀತಿ ಕಾಂಗ್ರೆಸ್ ವರ್ತಿಸುತ್ತಿದೆ. ರಾಜಭವನ ಮತ್ತು ರಾಜ್ಯಪಾಲರ ಗೃಹಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವುದು ನಿಜಕ್ಕೂ ಆಡಳಿತಾರೂಢ ಸರ್ಕಾರದ ಸರ್ವಾಧಿಕಾರಿ ಧೋರಣೆ ಎನ್ನುವಂತಿದೆ ಎಂದು ಜೋಶಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಪಾಲರ ಹುದ್ದೆ ಘನತೆಯ ಅರಿವೆ ಇಲ್ಲ. ಸಂವಿಧಾನದ ಹತ್ಯೆ ಮಾಡಿ ದೇಶದಲ್ಲಿ ಎಮರ್ಜೆನ್ಸಿ ಹೇರಿ ಜನಜೀವನ ಅಸ್ತವ್ಯಸ್ಥಗೊಳಿಸಿದ್ದ ಕಾಂಗ್ರೆಸ್ ಪಕ್ಷ ಇನ್ನೂ ಅದೇ ವರ್ತನೆ, ಮನಸ್ಥಿತಿಯಲ್ಲಿದೆ. ಅದನ್ನಿನ್ನೂ ತಿದ್ದಿಕೊಂಡಿಲ್ಲ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ಇದಕ್ಕೆ ಜನರೇ ತಕ್ಕ ಪಾಠವ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

Exit mobile version