Accident | ಅವೈಜ್ಞಾನಿಕ ರೋಡ್‌ ಸ್ಟ್ರಿಪ್ಸ್‌, ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವು - Vistara News

ಕ್ರೈಂ

Accident | ಅವೈಜ್ಞಾನಿಕ ರೋಡ್‌ ಸ್ಟ್ರಿಪ್ಸ್‌, ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರಿನ ಸುಮನಹಳ್ಳಿ-ಲಗ್ಗೆರೆ ರಿಂಗ್‌ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆಯಲ್ಲಿ ಅವೈಜ್ಞಾನಿಕ ರೋಡ್‌ ಸ್ಟ್ರಿಪ್ಸ್‌ ಕೂಡ ಕಾರಣ ಎನ್ನಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಸುಮನಹಳ್ಳಿ-ಲಗ್ಗೆರೆ ರಿಂಗ್‌ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವೈಜ್ಞಾನಿಕವಾಗಿ ನಿರ್ಮಿಸಿದ್ದ ರೋಡ್‌ ಸ್ಟ್ರಿಪ್ಸ್‌ ಇದಕ್ಕೆ (Accident) ಕಾರಣವೆನ್ನಲಾಗಿದೆ.

ಸುಮನಹಳ್ಳಿ-ಲಗ್ಗೆರೆ ರಿಂಗ್ ರಸ್ತೆಯಲ್ಲಿ ರೋಡ್ ಸ್ಟ್ರಿಪ್ಸ್ ಬಳಿ ಸವಾರ ಬೈಕ್ ಸ್ಲೋ ಮಾಡಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಬೈಕ್ ಸವಾರನ ತಲೆಗೆ ಬಲವಾದ ಪೆಟ್ಟು ಬಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಚಾಲಕನನ್ನು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಬಳಿಯ ಸುಮನ್ ಹಳ್ಳಿ ಬ್ರಿಡ್ಜ್ ಬಳಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸುಮನ್ ಹಳ್ಳಿಯಿಂದ ಲಗ್ಗೆರೆ ಕಡೆಗೆ ಬಸ್‌ ಸಂಚರಿಸುತ್ತಿತ್ತು. ಈ ಸಂದರ್ಭ ಸಾರ್ವಜನಿಕರು ಬಸ್ ಚಾಲಕನಿಗೆ ಥಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan: ನಟ ದರ್ಶನ್‌ಗೆ ಆ. 20ರವರೆಗೆ ಜೈಲೂಟವೇ ಫಿಕ್ಸ್‌; ವಿಚಾರಣೆ ಮುಂದೂಡಿದ ಹೈಕೋರ್ಟ್

Actor Darshan: ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ.

VISTARANEWS.COM


on

Actor Darshan
Koo

ಬೆಂಗಳೂರು: ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ. ಹೀಗಾಗಿ ಇನ್ನೂ 21 ದಿನ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಕರ್ನಾಟಕ ಕಾರಾಗೃಹಗಳ ಕಾಯ್ದೆ ಓದುತ್ತಾ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ ಅವರು, ಮ್ಯಾನ್ಯುವಲ್ ಪ್ರಕಾರ ವಿಚಾರಣಾಧೀನ ಕೈದಿಗೆ ಸ್ವಂತ ಖರ್ಚಿನಲ್ಲಿ ಖಾಸಗಿ ಊಟ ಪಡೆಯೋದಕ್ಕೆ ಅವಕಾಶ ಇದೆ. ಅಧೀನ ನ್ಯಾಯಾಲಯ ಇಲ್ಲಿ ಆ್ಯಕ್ಟ್‌ಗಿಂತ ಮ್ಯಾನ್ಯುಯಲ್ ಬಗ್ಗೆ ಪರಿಗಣಿಸಿದೆ. ಕರ್ನಾಟಕ ಪ್ರಿಸನ್ಸ್ ಆ್ಯಕ್ಟ್ 1963 ಅನ್ನು ಪರಿಗಣಸಿಯೇ ಇಲ್ಲ. ಸೆಕ್ಷನ್ 30ರಡಿಯಲ್ಲಿ ಮನೆ ಊಟ ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.

ಇನ್ನು ದರ್ಶನ್‌ಗೆ ಅನಾರೋಗ್ಯವಾಗಿರುವ ಬಗ್ಗೆ ವರದಿ ಇದೆ. ಜೈಲಿನ ಮುಖ್ಯ ಆರೋಗ್ಯಾಧಿಕಾರಿ ವರದಿ ನೀಡಿದ್ದಾರೆ ಎಂದು ವಕೀಲರು ಹೇಳಿದ್ದಕ್ಕೆ, ಪ್ರತಿ ವಿಚಾರಣಾಧೀನ ಕೈದಿಯೂ ಈ ಸಮಸ್ಯೆ ಎದುರಿಸುತ್ತಾರೆ. ಅವರು ಮನುಷ್ಯರೇ ಅಲ್ಲವೇ ಎಂದು ಜಡ್ಜ್ ಪ್ರಶ್ನೆ ಮಾಡಿದರು. ನ್ಯೂಟ್ರಿಷನ್ ಕೊರತೆ ಇದ್ದರೆ ಜೈಲಿನ ವೈದ್ಯಾಧಿಕಾರಿ ಪ್ರಿಸ್ಕ್ರಿಪ್ಷನ್ ನೀಡುತ್ತಾರೆ ಎಂದು ಹೇಳಿದರು. ಡಾಕ್ಟರ್ ಏನು ಹೇಳುತ್ತಾರೋ ಅದನ್ನು ಜೈಲಿನಲ್ಲಿ ನೀಡಲಾಗುತ್ತದೆ. ಸೆಕ್ಷನ್ 30ರ ಬಗ್ಗೆ ಹೇಳಲು ಅವಕಾಶ ಇದೆ. ಆದರೆ ಮನೆ ಊಟದ ಬಗ್ಗೆ ಯಾಕೆ ಎಂದು ಜಡ್ಜ್‌ ಪ್ರಶ್ನಿಸಿದರು.

ಇದನ್ನೂ ಓದಿ | Actor Darshan: ಜೈಲಿನ ಊಟ ನಂಗಂತೂ ಸಖತ್‌ ಇಷ್ಟ ಆಗಿತ್ತು , ದರ್ಶನ್‌ಗೆ ಯಾಕೆ ಕಷ್ಟ ಆಗ್ತಿದೆ ಎಂದ ಚೇತನ್‌ ಅಹಿಂಸಾ!

ಈ ವೇಳೆ ವೈದ್ಯಾಧಿಕಾರಿಗಳು, ದರ್ಶನ್‌ ಅನಾರೋಗ್ಯದ ಬಗ್ಗೆ ವರದಿಯನ್ನು ನೀಡಿದ್ದಾರೆ ಎಂದು ಪ್ರಭುಲಿಂಗ ನಾವದಗಿ ಉತ್ತರಿಸಿ, ಜೈಲಿನ ಮುಖ್ಯ ಆರೋಗ್ಯ ಅಧಿಕಾರಿಯ ವೈದ್ಯಕೀಯ ವರದಿ ಸಲ್ಲಿಸಿದರು. ಡಾಕ್ಟರ್ ಇದಕ್ಕಾಗಿಯೇ ಸ್ಪೆಸಿಫಿಕ್ ಆಗಿ ಹೇಳಿರಬೇಕು ಅಲ್ವಾ? ಆಗ ಮಾತ್ರ ಪರಿಗಣನೆಗೆ ಅವಕಾಶ ಇದೆ ಎಂದು ಜಡ್ಜ್‌ ಹೇಳಿದರು.

ಈ ವೇಳೆ ಎಸ್‌ಪಿಸಿ ಎಸ್‌ಪಿಪಿ ಬೆಳ್ಳಿಯಪ್ಪ ವಾದ ಮಂಡಿಸಿ, ದರ್ಶನ್‌ಗೆ ಫುಡ್ ಪಾಯಿಸನ್ ಆಗಿಲ್ಲ ಅನ್ನೋ ವೈದ್ಯಕೀಯ ವರದಿ ಇದೆ. ಅದರೂ ನಾವು ಎರಡು ವಾರ ನ್ಯೂಟ್ರಿಷನ್ ಫುಡ್ ನೀಡುತ್ತೇವೆ. ವೈದ್ಯಾಧಿಕಾರಿ ಸೂಚನೆ ಪಾಲಿಸಲು ಸಿದ್ಧ ಎಂದು ಹೇಳಿದರು.

ವಾದ- ಪ್ರತಿವಾದ ಆಲಿಸಿದ ಬಳಿಕ ಮಾತನಾಡಿದ ಜಡ್ಜ್‌ ನ್ಯಾ. ನಾಗ ಪ್ರಸನ್ನ ಅವರು, ಕೈದಿಗಳಲ್ಲಿ ಯಾವುದೇ ಶ್ರೀಮಂತ, ಬಡವ, ವಿಐಪಿ, ಪೊಲಿಟಿಕಲ್ ಪ್ರಿಸನ್ ಅಂತ ಬರಲ್ಲಾ, ಎಲ್ಲರೂ ಕೈದಿಗಳೇ ಅಭಿಪ್ರಾಯಪಟ್ಟು, ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದರು. ಇದೇ ವೇಳೆ ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದರು.

ಇದನ್ನೂ ಓದಿ | Dog Meat Controversy: ಅಬ್ದುಲ್‌ ರಜಾಕ್‌ ತಂದಿರೋದು ಕುರಿ ಮಾಂಸ, ‌ಖಚಿತಪಡಿಸಿದ ಲ್ಯಾಬ್‌ ವರದಿ: ಆಹಾರ ಇಲಾಖೆ ಆಯುಕ್ತ

Continue Reading

Latest

Bribe Case: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

Bribe Case: ನೀರಾವರಿ ಉದ್ದೇಶಗಳಿಗಾಗಿ ಜೀವನ್ ಧಾರಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಮೌಲ್ಯಮಾಪನಕ್ಕಾಗಿ 1,000 ರೂ.ಗಳನ್ನು ಲಂಚವಾಗಿ ಸ್ವೀಕರಿಸಿದ್ದಕ್ಕಾಗಿ ಸಬ್‌ ಎಂಜಿನಿಯರ್‌ಗೆ ಸ್ಥಳೀಯ ನ್ಯಾಯಾಲಯ 1 ಸಾವಿರ ರೂ. ದಂಡ ವಿಧಿಸಿತ್ತು. ಇದೀಗ ಸಬ್ ಎಂಜಿನಿಯರ್‌ಗೆ ತಪ್ಪಾಗಿ ಶಿಕ್ಷೆ ವಿಧಿಸಲಾಗಿದೆ ಎಂದು ಛತ್ತೀಸ್‌ಗಢ ಹೈಕೋರ್ಟ್ 25 ವರ್ಷಗಳ ಬಳಿಕ ಖುಲಾಸೆಗೊಳಿಸಿದೆ.

VISTARANEWS.COM


on

Bribe Case
Koo


ನ್ಯಾಯಾಲಗಳಲ್ಲಿ ಎಷ್ಟೋ ಕೇಸ್‌ಗಳು ವಿಚಾರಣೆಯಾಗದೆ ಹಾಗೇ ಉಳಿದಿವೆ. ಹಾಗಾಗಿ ಪ್ರಕರಣ ದಾಖಲಿಸಿದವರು, ಆರೋಪಿಗಳು ಆಗಾಗ ಕೋರ್ಟ್‍ಗೆ ಹೋಗಿ ಬರುತ್ತಿರುತ್ತಾರೆ. ಅಂತಹದೊಂದು ಹಳೆಯ ಕೇಸ್ ಈಗ ವಿಚಾರಣೆಯಾಗಿದೆ, 25 ವರ್ಷಗಳ ಹಳೆಯ ಕೇಸ್ ಅನ್ನು ಕೈಗೆತ್ತಿಕೊಂಡ ಛತ್ತೀಸ್‍ಗಢ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ನೀಡಿ ಆರೋಪಿಯನ್ನು ಕೇಸಿನಿಂದ ಖುಲಾಸೆಗೊಳಿಸಿದೆ. ಮನೇಂದ್ರಗಢದಲ್ಲಿ ನೀರಾವರಿ ಉದ್ದೇಶಗಳಿಗಾಗಿ ಜೀವನ್ ಧಾರಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಮೌಲ್ಯಮಾಪನಕ್ಕಾಗಿ 1,000 ರೂ.ಗಳನ್ನು ಲಂಚ (Bribe Case)ವಾಗಿ ಸ್ವೀಕರಿಸಿದ್ದಕ್ಕಾಗಿ ತಪ್ಪಾಗಿ ಶಿಕ್ಷೆಗೊಳಗಾದ ಸಬ್ ಎಂಜಿನಿಯರ್ ಒಬ್ಬರನ್ನು ಛತ್ತೀಸ್‍ಗಢ ಹೈಕೋರ್ಟ್ 25 ವರ್ಷಗಳ ಹಳೆಯ ಪ್ರಕರಣದಿಂದ ಖುಲಾಸೆಗೊಳಿಸಿದೆ ಎಂಬುದಾಗಿ ತಿಳಿದುಬಂದಿದೆ.

ಮನೇಂದ್ರಗಢದಲ್ಲಿ ನೀರಾವರಿ ಉದ್ದೇಶಗಳಿಗಾಗಿ ಜೀವನ್ ಧಾರಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳಿಗೆ ಮೂರನೇ ಮತ್ತು ಅಂತಿಮ ಕಂತನ್ನು ಬಿಡುಗಡೆ ಮಾಡಲು ಅಧಿಕಾರಿ 1,000 ರೂ.ಗಳ ಲಂಚದ ಮೊತ್ತವನ್ನು ಕೇಳುತ್ತಿದ್ದಾರೆ ಎಂದು ಆರೋಪಿಸಿ ಪ್ರೇಮ್ ಮಿಶ್ರಾ ಎಂಬವರು ಬಿಲಾಸ್ಪುರದ ಲೋಕಾಯುಕ್ತ ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ಇದರಿಂದ ಸಹಾಯಕ ಎಂಜಿನಿಯರ್ ಆಗಿರುವ ಆರ್.ಪಿ.ಕಶ್ಯಪ್ ಪೊಲೀಸರ ದಾಳಿಯಲ್ಲಿ ಸಿಕ್ಕಿಬಿದ್ದಿದ್ದರು. ಜನಪದ್ ಪಂಚಾಯತ್ ಮನೇಂದ್ರಗಢ ಸಬ್ ಎಂಜಿನಿಯರ್ ಆಗಿ ನೇಮಕಗೊಂಡಿದ್ದ ಕಶ್ಯಪ್ ಅವರ ನಿವಾಸದಲ್ಲಿ ಮಿಶ್ರಾ ಅವರು ಕರೆನ್ಸಿ ನೋಟುಗಳನ್ನು ನೀಡಿದ ನಂತರ, ಪೊಲೀಸರ ತಂಡ ಬಲೆ ಬೀಸಿ ಹಣವನ್ನು ವಶಪಡಿಸಿಕೊಂಡು ಕಶ್ಯಪ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನಂತರ ಅಂಬಿಕಾಪುರದ ವಿಚಾರಣಾ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಅವರನ್ನು ದೋಷಿ ಎಂದು ಘೋಷಿಸಿತು ಮತ್ತು ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3,000 ರೂ. ದಂಡ ವಿಧಿಸಿತು. ಇದಾದ ನಂತರ ಜಾಮೀನಿನ ಮೇಲೆ ಹೊರಗಿರುವ ಕಶ್ಯಪ್ ಈ ಪ್ರಕರಣದ ಬಗ್ಗೆ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿದ್ದರು.

ಇದನ್ನೂ ಓದಿ:  115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

ಇಲ್ಲಿ ವಿಚಾರಣೆ ನಡೆಸಿ ಮನೇಂದ್ರಗಢದ ಅದೇ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್, ಸಿಮೆಂಟ್ ಅಂಗಡಿಯ ಮಾಲೀಕ ಅಲ್ಲಾವುದ್ದೀನ್, ಟ್ರ್ಯಾಕ್ಟರ್-ಟ್ರಾಲಿ ಮಾಲೀಕ ಧನಿರಾಮ್ ಅವರ ಹೇಳಿಕೆಗಳನ್ನು ವಿಚಾರಣೆಯ ಸಮಯದಲ್ಲಿ ಗಣನೆಗೆ ತೆಗೆದುಕೊಂಡ ಹೈಕೋರ್ಟ್ ನ್ಯಾಯಮೂರ್ತಿ ಸಂಜಯ್ ಕೆ ಜೈಸ್ವಾಲ್ ಅವರು ಕಶ್ಯಪ್ ಅವರನ್ನು ಆರೋಪಗಳಿಂದ ಖುಲಾಸೆಗೊಳಿಸಿದರು, ಏಕೆಂದರೆ ಲಂಚದ ಬೇಡಿಕೆ ಎಂದು ಸ್ವೀಕರಿಸಲಾದ ಹಣವು ಯಾವುದೇ ರೀತಿಯಲ್ಲಿ ಸಾಬೀತಾಗದ ಕಾರಣ ದಾಖಲೆಯಲ್ಲಿರುವ ಪುರಾವೆಗಳು ಮೇಲ್ಮನವಿದಾರನನ್ನು ತಪ್ಪಿತಸ್ಥರೆಂದು ಪರಿಗಣಿಸದ ಕಾರಣ ನ್ಯಾಯಾಲಯ ಈ ಪ್ರಕರಣದಿಂದ ಕಶ್ಯಪ್ ಅವರನ್ನು ಖುಲಾಸೆಗೊಳಿಸಿದೆ. ಒಂದು ಪ್ರಕರಣ ಇತ್ಯರ್ಥವಾಗಲು 25 ವರ್ಷಗಳು ಬೇಕೆ ಎಂದು ಜನ ಚರ್ಚಿಸುವಂತಾಗಿದೆ! ನ್ಯಾಯದಾನ ಇಷ್ಟು ನಿಧಾನವಾದರೆ ಭ್ರಷ್ಟಾಚಾರ ಪ್ರಕರಣ ಕಡಿಮೆ ಆಗುವುದಾದರೂ ಹೇಗೆ ಎಂದು ಜನ ಸೋಷಿಯಲ್‌ ಮೀಡಿಯಾಗಳಲ್ಲಿ ಪ್ರಶ್ನಿಸುತ್ತಿದ್ದಾರೆ.

Continue Reading

Latest

Triple Talaq: ವರದಕ್ಷಿಣೆ ತರಲು ನಿರಾಕರಿಸಿದ ಪತ್ನಿಗೆ ವಾಟ್ಸಾಪ್‍ನಲ್ಲೇ ತ್ರಿವಳಿ ತಲಾಖ್!

Triple Talaq: ಮೆಡಿಕಲ್ ಸ್ಟೋರ್ ಮಾಲೀಕನೊಬ್ಬ ತನ್ನ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಆಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನ್ನ ಪತಿ 15 ಲಕ್ಷ ರೂ. ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದ. ಅಷ್ಟು ಹಣ ಕೊಡಲು ಸಾಧ್ಯವಿಲ್ಲ ಎಂದು ಹೇಳಿದಾಗ ವಾಟ್ಸ್‌ಆಪ್‌ನಲ್ಲೇ ತ್ರಿವಳಿ ತಲಾಖ್‌ ನೀಡಿದ್ದಾನೆ. ತಲಾಕ್‌ ವಿರುದ್ಧ ಕಠಿಣ ಕಾಯಿದೆ ಜಾರಿಯಲ್ಲಿದ್ದರೂ ತಲಾಕ್‌ ಪ್ರಕರಣಗಳು ಇನ್ನೂ ಮುಂದುವರಿದಿರುವುದು ಅಚ್ಚರಿ ಮೂಡಿಸಿದೆ.

VISTARANEWS.COM


on

Triple Talaq
Koo


ತ್ರಿವಳಿ ತಲಾಖ್ (Triple Talaq) ಅನ್ನು ನ್ಯಾಯಾಲಯ ನಿಷೇಧಿಸಿದ್ದರೂ ಕೂಡ ಇದನ್ನು ಇಂದಿಗೂ ಅಲ್ಲಲ್ಲಿ ಬಳಸುತ್ತ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ನ್ಯಾಯಾಲಯದ ತೀರ್ಪನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಉತ್ತರ ಪ್ರದೇಶದ ಸಾದತ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂಥ ಘಟನೆಯೊಂದು ನಡೆದಿದೆ.

ಸಾದತ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮೆಡಿಕಲ್ ಸ್ಟೋರ್ ಮಾಲೀಕನೊಬ್ಬ ತನ್ನ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಆಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನ್ನ ಪತಿ 15 ಲಕ್ಷ ರೂ. ವರ ದಕ್ಷಿಣೆಗೆ ಬೇಡಿಕೆ ಇಟ್ಟಿದ್ದಾನೆ. ಅದನ್ನು ವಿರೋಧಿಸಿದಾಗ ಅವನು ತನ್ನ ಮೇಲೆ ಆಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮಹಿಳೆ 2010ರಲ್ಲಿ ಮಲಿಹಾಬಾದ್ ಕಾಸ್ಮಂಡಿ ಕಲಾದ ಸದಾಫ್ ಮುನೀರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆಯಾದ ಕೆಲವೇ ದಿನಗಳಲ್ಲಿ ಆತ ಮೆಡಿಕಲ್ ಸ್ಟೋರ್ ತೆರೆಯಲು 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಅವನ ಬೇಡಿಕೆ ಈಡೇರದಿದ್ದಾಗ, ಗರ್ಭಿಣಿಯಾಗಿದ್ದ ಆಕೆಗೆ ಗರ್ಭಪಾತ ಮಾಡಿಸಲು ಪ್ರಯತ್ನಿಸಿದ್ದಾನೆ. ಅದು ಸಾಧ್ಯವಾಗದಿದ್ದಾಗ ಆಕೆಯನ್ನು ಮನೆಯಿಂದ ಹೊರಹಾಕಿದ್ದಾನೆ. ಆಗ ಆಕೆಯ ಕುಟುಂಬವು ಹೇಗೋ 10 ಲಕ್ಷ ರೂ.ಗಳನ್ನು ವ್ಯವಸ್ಥೆ ಮಾಡಿ ಆತನಿಗೆ ನೀಡಿ ಮತ್ತೆ ಆಕೆಯನ್ನು ಗಂಡನ ಮನೆಗೆ ಕಳುಹಿಸಿತ್ತು.

ಇದನ್ನೂ ಓದಿ: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

ಇಷ್ಟಾದರೂ ಆತ, ಆಗಸ್ಟ್ 2022ರಲ್ಲಿ ಮತ್ತೆ ತನ್ನ ವ್ಯವಹಾರವನ್ನು ವಿಸ್ತರಿಸಲು ಇನ್ನೂ 15 ಲಕ್ಷ ರೂ.ಗಳನ್ನು ತರುವಂತೆ ಒತ್ತಡ ಹೇರಲು ಪ್ರಾರಂಭಿಸಿದ್ದಾನೆ. ಇದನ್ನು ಆಕೆ ನಿರಾಕರಿಸಿದ್ದಕ್ಕೆ ಆಕೆಯನ್ನು ಥಳಿಸಿ ಇಬ್ಬರು ಮಕ್ಕಳ ಜೊತೆ ಆಕೆಯನ್ನು ಮನೆಯಿಂದ ಹೊರಗೆ ಹಾಕಿದ್ದಾನೆ. ನಂತರ ಆಗಸ್ಟ್ 10, 2022ರಂದು ಆತ ವಾಟ್ಸಾಪ್‌ನಲ್ಲೇ ತ್ರಿವಳಿ ತಲಾಖ್ ಸಂದೇಶವನ್ನು ಕಳುಹಿಸಿದ್ದಾನೆ. ಈ ಬಗ್ಗೆ ವಿವರಿಸಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ಅಲ್ಲದೇ ಆಕೆ ಮಕ್ಕಳ ಜೊತೆ ಮತ್ತೆ ಗಂಡನ ಮನೆಗೆ ಬಂದಾಗ ಅವರನ್ನು ಒಳಗೆ ಬಿಡಲಿಲ್ಲ ಮತ್ತು ಆಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಮಹಿಳೆ ತಿಳಿಸಿದ್ದಾಳೆ.

Continue Reading

ಸ್ಯಾಂಡಲ್ ವುಡ್

Actor Darshan: ಜೈಲಿನ ಊಟ ನಂಗಂತೂ ಸಖತ್‌ ಇಷ್ಟ ಆಗಿತ್ತು , ದರ್ಶನ್‌ಗೆ ಯಾಕೆ ಕಷ್ಟ ಆಗ್ತಿದೆ ಎಂದ ಚೇತನ್‌ ಅಹಿಂಸಾ!

Actor Darshan: ದರ್ಶನ್ ತಮಗೆ ಮನೆಯೂಟ ಬೇಕು ಎಂದು ಪಟ್ಟು ಹಿಡಿದ ಬೆನ್ನಲ್ಲಿಯೇ, ತಮ್ಮ ಜೈಲಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸ್ಟಾರ್ ಗಳಿಗೆ ಯೋಗ್ಯತೆ ಮೀರಿ ತುಂಬಾ ಬಿಲ್ಡಪ್ ಸಿಕ್ಕಿದೆ ಎಂದಿದ್ದಾರೆ.ಸುಮ್ಮನೆ ಪೊಲೀಸರು ಸಮಯ ವ್ಯರ್ಥ ಮಾಡಿಕೊಂಡು ಇಲ್ಲದೇ ಇರುವುದನ್ನು ಹುಟ್ಟು ಹಾಕುವುದಿಲ್ಲ. ನಿರ್ಧಾರ ಬರಲಿ. ದರ್ಶನ್‌ ಹಾಗೂ ರೇಣುಕಾ ಸ್ವಾಮಿ ಸಮಸ್ಯೆ ಅಲ್ಲʼʼಎಂದು ಮಾತು ಶುರು ಮಾಡಿದರು.

VISTARANEWS.COM


on

Actor Darshan Chethan Kumar on Darshan Case
Koo

ಬೆಂಗಳೂರು: ನಟ ಚೇತನ್‌ ಅಹಿಂಸಾ (Chethan Kumar) ತಮ್ಮ ಹೇಳಿಕೆ ಗಳ ಮೂಲಕವೇ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದರೂ ಕೂಡ. ಎರಡೆರಡು ಬಾರಿ ಜೈಲಿಗೆ ಕೂಡ ಹೋಗಿ ಬಂದರು. ಇದೀಗ ದರ್ಶನ್ ಬಂಧನ ಕುರಿತು ಮಾಧ್ಯಮದ ಜತೆ ಮಾತನಾಡಿದ್ದಾರೆ. ದರ್ಶನ್ ತಮಗೆ ಮನೆಯೂಟ ಬೇಕು ಎಂದು ಪಟ್ಟು ಹಿಡಿದ ಬೆನ್ನಲ್ಲಿಯೇ, ತಮ್ಮ ಜೈಲಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸ್ಟಾರ್ ಗಳಿಗೆ ಯೋಗ್ಯತೆ ಮೀರಿ ತುಂಬಾ ಬಿಲ್ಡಪ್ ಸಿಕ್ಕಿದೆ ಎಂದಿದ್ದಾರೆ.

ಚೇತನ್‌ ಅಹಿಂಸಾ ಮಾತನಾಡಿ ʻʻನಾನು ದರ್ಶನ್‌ ಅವರನ್ನು ಹಲವು ಸಲ ಭೇಟಿಯಾಗಿದ್ದೇನೆ. ಅವರು ದೊಡ್ಡ ಸ್ಟಾರ್‌. ಕೋಟಿ ಕಲೆಕ್ಷನ್‌ ಮಾಡುವ ಹೀರೊ. ಆದರೆ ಸಿನಿಮಾ ರಂಗದಲ್ಲಿ ವಿಚಾರಣ, ನಡವಳಿಕೆ, ಅಲೋಚನೆ, ಪ್ರತಿಭೆ ಇದಕೆಲ್ಲ ಬೆಲೆ ಇಲ್ಲ. ಹಣಕ್ಕೆ ಮಾತ್ರ ಬೆಲೆ. ದರ್ಶನ್‌ ಈ ಕೊಲೆ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆರೋಪಿ ನಿಜ. ಆದರೆ ಅಪರಾಧಿ ಅಲ್ಲ. ಬಹಳ ಗಂಭೀರ ವಾದ ಆರೋಪ ಇದು. ಸುಮ್ಮನೆ ಪೊಲೀಸರು ಸಮಯ ವ್ಯರ್ಥ ಮಾಡಿಕೊಂಡು ಇಲ್ಲದೇ ಇರುವುದನ್ನು ಹುಟ್ಟು ಹಾಕುವುದಿಲ್ಲ. ನಿರ್ಧಾರ ಬರಲಿ. ದರ್ಶನ್‌ ಹಾಗೂ ರೇಣುಕಾ ಸ್ವಾಮಿ ಸಮಸ್ಯೆ ಅಲ್ಲʼʼಎಂದು ಮಾತು ಶುರು ಮಾಡಿದರು.

ʻʻಹೀರೋಗಳು ಸತ್ತಾಗ ಸ್ಮಾರಕಗಳನ್ನು ಅವರೇ ಮಾಡಿಕೊಳ್ಳಲಿ, ಅವರು ಮಾಡಿರುವ ಸಿನಿಮಾಗಳಿಗೆ ಸಂಭಾವನೆ ಪಡೆದಿರುತ್ತಾರೆ. ಕೋಟಿ ಹಣ ಅವರ ಬಳಿ ಇರುತ್ತೆ. , ಚಿತ್ರರಂಗದಲ್ಲಿ ಮೌನ ಬಿಟ್ಟು ಸತ್ಯ ಹೇಳುವ ಕೆಲಸವನ್ನು ಎಲ್ಲರೂ ಮಾಡಬೇಕು ರೇಣುಕಾಸ್ವಾಮಿ ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಿದ್ದು ನಂಬ್ತೀವಿ, ಆದರೆ ಅದೇ ದರ್ಶನ್ ಕೊಲೆ ಆರೋಪಿ ಅಂದ್ರೆ ನಂಬಲ್ಲ, ಹೀಗಾಗಿಯೇ ಸ್ಟಾರ್ ಸಂಸ್ಕೃತಿ ಅನ್ನೋದು ಅಳಿಸಬೇಕು. ಚಿತ್ರರಂಗದ ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕ. ದರ್ಶನ್ ಆರೋಪಿಯಷ್ಟೇ ಅಪರಾಧಿಯಲ್ಲ ಆದರೆ ಅವರ ಮೇಲೆ ಗಂಭೀರ ಆರೋಪ ಇದೆʼʼ ಎಂದು ಕೂಡ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ʻʻಸೆಲ್ ಅಲ್ಲಿ ದರ್ಶನ್‌ ಅವರು ಇರಬಹುದು. ಆದರೆ ಬ್ಯಾರೆಕ್ಸ್ ಅಲ್ಲಿ ಇರುವುದು ಕಷ್ಟ. ನಾನು ಹೋರಾಟದ ಮೇಲೆ ಎರಡು ಸಲ ಜೈಲಿಗೆ ಹೋಗಿದ್ದೆ. ಮೊದಲ ಬಾರಿ ನಾನು ಜೈಲಿಗೆ ಹೋದಾಗ 6 ಜನರಿರುವ ಸೆಲ್ ನಲ್ಲಿ ಹಾಕಿದ್ದರು. ಎರಡನೇ ಬಾರಿ 40 ಜನರಿರುವ ಬ್ಯಾರೆಕ್ಸ್ ನಲ್ಲಿ ಹಾಕಿದ್ದರು. ಜೈಲಿನ ಊಟ ನನಗೆ ಯಾವತ್ತು ಸಮಸ್ಯೆಯಾಗಲಿಲ್ಲ ಬದಲಿಗೆ ಜೈಲೂಟ ನನಗೆ ಸಖತ್ ಇಷ್ಟವಾಯಿತು. ಜೈಲಿನಲ್ಲಿ ಮುದ್ದೆ ಸ್ವಲ್ಪ ಗಟ್ಟಿ ಇರುತ್ತದೆ. ನನ್ನ 39ನೇ ಹುಟ್ಟುಹಬ್ಬವನ್ನು ನಾನು ಜೈಲಿನಲ್ಲಿ ಆಚರಿಸಿಕೊಂಡೆ ಆಗ ಪುಳಿಯೋಗರೆ ಮಾಡಿದ್ದರು, ಆಗ ತುಂಬಾ ಚೆನ್ನಾಗಿತ್ತು. ಪುಳಿಯೋಗರೆ ಅಷ್ಟೇ ಅಲ್ಲ ಚಿತ್ರಾನ್ನ, ಅನ್ನ ಸಾಂಬಾರು, ಎಲ್ಲವೂ ಚೆನ್ನಾಗಿತ್ತು ಎಂದು ಹೇಳಿದ್ದಾರೆ. ದರ್ಶನ್ ಅವರಿಗೆ ಜೈಲೂಟ ಯಾಕೆ ಇಷ್ಟವಾಗ್ತಿಲ್ಲ ಎನ್ನುವುದು ಗೊತ್ತಿಲ್ಲʼʼ ಎಂದು ಕೂಡ ಚೇತನ್ ಅಹಿಂಸಾ ಹೇಳಿದ್ದಾರೆ.

Continue Reading
Advertisement
krishna byre gowda
ಪ್ರಮುಖ ಸುದ್ದಿ6 mins ago

Krishna Byre Gowda: ರಾಜ್ಯಪಾಲರ ಅಧಿಕಾರ ದುರುಪಯೋಗಪಡಿಸಿಕೊಂಡರೆ ಕೋರ್ಟ್‌ಗೆ ಹೋಗುತ್ತೇವೆ: ಕೃಷ್ಣಭೈರೇಗೌಡ

Money Guide
ಮನಿ-ಗೈಡ್10 mins ago

Money Guide: PPF v/s NPS Vatsalya ನಿಮ್ಮ ಮಕ್ಕಳಿಗೆ ಯಾವುದು ಉತ್ತಮ ಯೋಜನೆ? ಇಲ್ಲಿದೆ ವಿವರ

Vinay Guruji met by master anand brother
ಸ್ಯಾಂಡಲ್ ವುಡ್13 mins ago

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Anurag Thakur
ದೇಶ18 mins ago

Anurag Thakur: ಅನುರಾಗ್‌ ಠಾಕೂರ್‌ ‘ಜಾತಿ’ ಅಸ್ತ್ರಕ್ಕೆ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಪ್ರತ್ಯಸ್ತ್ರ!

Viral Video
Latest19 mins ago

Viral Video: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

Paris Olympic
ಕ್ರೀಡೆ20 mins ago

Paris Olympic: ಪ್ರೀ ಕ್ವಾರ್ಟರ್​ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್; ಜೊನಾಥನ್​ ಕ್ರಿಸ್ಟಿಗೆ ಆಘಾತಕಾರಿ ಸೋಲು

Wayanad Landslide
ದೇಶ23 mins ago

Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

DK Shivakumar
ಕರ್ನಾಟಕ28 mins ago

DK Shivakumar: ಪ್ರಧಾನಿ ಮೋದಿ ಭೇಟಿಯಾದ ಡಿಕೆಶಿ; ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಬೇಡಿಕೆ

Viral Video
Latest29 mins ago

Viral Video: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

Actor Chiranjeevi gets flak for ‘rudely’ pushing IndiGo employee
ಟಾಲಿವುಡ್53 mins ago

Actor Chiranjeevi: ಸೆಲ್ಫಿ ತೆಗೆದುಕೊಳ್ಳಲು ಬಂದ ಇಂಡಿಗೋ ವಿಮಾನ ಸಿಬ್ಬಂದಿಯನ್ನು ತಳ್ಳಿದ ನಟ ಚಿರಂಜೀವಿ; ನೆಟ್ಟಿಗರಿಂದ ತರಾಟೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ22 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌