ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಮುಖರ ಸಭೆ ನಗರದಲ್ಲಿ ಭಾನುವಾರ ನಡೆಯಿತು.
ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಒಕ್ಕಲಿಗರ ಮಹಾಸಭೆ ಆಯೋಜಿಸಿದ್ದ ಸಭೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಸಭೆಯಲ್ಲಿ ಸಚಿವ ಅಶ್ವತ್ಥನಾರಾಯಣ ಅವರು ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿರುವ ಮಹತ್ವ ಮತ್ತು ವೈಶಿಷ್ಟ್ಯಗಳನ್ನು ಸಭಿಕರೊಂದಿಗೆ ಹಂಚಿಕೊಂಡರು. ಜತೆಗೆ ನ.11ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಭೆಯನ್ನು ಯಶಸ್ವಿಯಾಗಿ ನಡೆಸಲು ಸಮುದಾಯದ ಸದಸ್ಯರು ಸ್ವಯಂ ಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ನುಡಿದರು.
ಶ್ರೀ ಸೋಮನಾಥಾನಂದ ಸ್ವಾಮೀಜಿ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ, ವೆಂಚರ್ ಕ್ಯಾಪಿಟಲಿಸ್ಟ್ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಒಕ್ಕಲಿಗರ ಮಹಾಸಭಾದ ಅಧ್ಯಕ್ಷ ಆನಂದ್, ಸಮುದಾಯದ ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳು, ಹಾಲಿ ಐಪಿಎಸ್ ಅಧಿಕಾರಿಗಳು, ಉದ್ಯಮಿಗಳು, ಸಂಘ-ಸಂಸ್ಥೆಗಳ ಪ್ರಮುಖರು, ಲೇಖಕರು, ಹೋರಾಟಗಾರರು ಪಾಲ್ಗೊಂಡಿದ್ದರು.
ಇದನ್ನೂ ಓದಿ | Modi Visit | ಸಿದ್ಧವಾಯ್ತು ಕೆಂಪೇಗೌಡ ಪೇಟ; ಮೋದಿಗೆ ತೊಡಿಸಲಿರುವ ಇದರ ವಿಶೇಷತೆ ಏನಿದೆ?