ಪಠ್ಯಪುಸ್ತಕ ವಿಚಾರದಲ್ಲಿ ಸಿದ್ದರಾಮಯ್ಯ ಮತಬ್ಯಾಂಕ್ ರಾಜಕೀಯ: ಎಂ.ಜಿ.ಮಹೇಶ್ - Vistara News

ಬೆಂಗಳೂರು

ಪಠ್ಯಪುಸ್ತಕ ವಿಚಾರದಲ್ಲಿ ಸಿದ್ದರಾಮಯ್ಯ ಮತಬ್ಯಾಂಕ್ ರಾಜಕೀಯ: ಎಂ.ಜಿ.ಮಹೇಶ್

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸಿದ್ದರಾಮಯ್ಯನವರ ಡೋಂಗಿ – ಹುಸಿ ರಾಜಕೀಯ ಪ್ರವೃತ್ತಿ ಬಹಿರಂಗವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಟೀಕಿಸಿದ್ದಾರೆ.

VISTARANEWS.COM


on

ಪತ್ರಿಕಾಗೋಷ್ಠಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ಭದ್ರಪಡಿಸುವ ಸ್ವಾರ್ಥ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಎಂ.ಜಿ. ಮಹೇಶ್ ಅವರು ಟೀಕಿಸಿದರು. ಹಾಸನದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು.

70 ವರ್ಷಗಳ ಕಾಲ ಈ ದೇಶದಲ್ಲಿ ಅವರದೇ ಶಿಕ್ಷಣ ಪದ್ಧತಿಯನ್ನು ಜಾರಿ ಮಾಡಿದರೂ ಯಾರೂ ಅದನ್ನು ಪ್ರಶ್ನಿಸಲು ಹೋಗಲಿಲ್ಲ. ಈಗ ಪರಾಮರ್ಶೆ ಮಾಡಿದಾಗ ಮೂಲ ಸಂಸ್ಕೃತಿಯನ್ನೇ ಅವಹೇಳನ ಮಾಡಲಾಗುತ್ತಿದೆ. ಪಾಕಿಸ್ತಾನ ತನ್ನ ಇತಿಹಾಸ ಪಠ್ಯದಲ್ಲಿ 5 ಸಾವಿರ ವರ್ಷಗಳ ಹಿಂದಿನ ಪಾಣಿನಿಯ ವ್ಯಾಕರಣವನ್ನು ನೆನಪಿಸಿಕೊಳ್ಳುತ್ತದೆ. ಆದರೆ ಈ ಸಿದ್ದರಾಮಯ್ಯರಿಗೆ ಏನಾಗಿದೆ? ಈ ದೇಶದ ಮೌಲ್ಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತು ವೋಟ್‍ಬ್ಯಾಂಕ್ ಉಳಿಸಿಕೊಳ್ಳಲು ಸಿದ್ದರಾಮಯ್ಯ ಈ ಪ್ರಯತ್ನದಲ್ಲಿದ್ದಾರೆ ಎಂದು ಆಕ್ಷೇಪಿಸಿದರು.

ಹಿಂದೆ ಪಠ್ಯಪುಸ್ತಕದ ಪರಿಷ್ಕರಣೆ ಮಾಡುವಾಗ ಪೆರಿಯಾರ್ ಅವರ ಪಾಠವನ್ನು ಹಾಕಿದರು. ಪೆರಿಯಾರ್ ಮೂರ್ತಿಪೂಜೆ ಬಗ್ಗೆ ನಂಬಿಕೆ ಇರದ, ಗಣಪತಿ, ರಾಮನ ಫೋಟೋಗೆ ಚಪ್ಪಲಿ ಹಾರ ಹಾಕಿದ, ವಿಗ್ರಹಗಳನ್ನು ಪುಡಿ ಮಾಡಿದ ವ್ಯಕ್ತಿ. ಪೆರಿಯಾರ್ ಮಾಡಿದ್ದಕ್ಕೋಸ್ಕರ ಅಲ್ಲಿನ ಹಿಂದುಳಿದ ಜನ ಕಾವಡಿ ಆಂದೋಲನ ಆರಂಭಿಸಿದರು. ಪೆರಿಯಾರ್ ತಮಿಳುನಾಡಿನಲ್ಲಿ ಆರಂಭಿಸಿದ ದ್ರಾವಿಡ ಚಳವಳಿಗೆ ವಿರುದ್ಧವಾಗಿ ಅಲ್ಲಿನ ಜನರು ಆರ್ಯನ್ ಎಂಬ ಹೋಟೆಲ್‍ಗಳು, ಬೇಕರಿಗಳನ್ನು ತೆರೆದರು. ಇದರಲ್ಲಿ ಬಿಜೆಪಿ ಪಾತ್ರವೇನೂ ಇರಲಿಲ್ಲ. ಅಂಥ ಪೆರಿಯಾರನ್ನು ಇಷ್ಟು ವರ್ಷ ಬೋಧಿಸಬಹುದು; ಆದರೆ, ಬಹುತ್ವದ ವಿಚಾರ ಬೋಧಿಸುವಂತಿಲ್ಲ. ಇದ್ಯಾವ ಮಾನದಂಡ ಎಂದು ಪ್ರಶ್ನಿಸಿದರು.

ಮಾತೆತ್ತಿದರೆ ಮನುವಾದ ಎನ್ನುತ್ತಾರೆ. ದೇವರಿಲ್ಲ ಎಂದ ಚಾರ್ವಾಕನಿಗೆ ಈ ದೇಶದಲ್ಲಿ ಸಪ್ತಋಷಿಗಳಲ್ಲಿ ಸ್ಥಾನ ಕೊಟ್ಟಿದ್ದಾರೆ. ಹಿಂದೆ ವಿಚಾರವಾದಿಗಳು ತಮ್ಮ ಮನೆ ಮುಂದೆ ಚಾರ್ವಾಕ ಎಂದು ಹೆಸರು ಹಾಕಿಕೊಳ್ಳುತ್ತಿದ್ದರು. ಈ ದೇಶದ ಬಹುತ್ವ ಮತ್ತು ಮೂಲ ನಿವಾಸಿಗಳ ಬಗ್ಗೆ ಪ್ರಶ್ನಿಸಲು ನಿಮಗೆ ಯಾವ ನೈತಿಕತೆ ಇದೆ? ಯಾರನ್ನು ಓಲೈಸಲು ನೀವು ಈ ಕೆಲಸ ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಅಸಹಿಷ್ಣುತೆ ಪದ ಬಳಕೆ ಬಗ್ಗೆ ಪ್ರಸ್ತಾಪಿಸಿದ ಅವರು, ದೇಶದ ಉದ್ದಗಲಕ್ಕೂ ಅಸಹಿಷ್ಣುತೆ ನಡೆದಿಲ್ಲವೇ? ನಿನ್ನೆ ಕಲಬುರ್ಗಿಯಲ್ಲಿ ಮುಸ್ಲಿಂ ಯುವತಿಯನ್ನು ಪ್ರೀತಿಸಿದ ದಲಿತ ಯುವಕನನ್ನು ಕೊಲೆ ಮಾಡಿದರಲ್ಲವೇ? ಎಲ್ಲಿ ಹೋದಿರಿ ನೀವು? ಕುಂದಾಪುರದಲ್ಲಿ ಜಿಹಾದಿಗಳು ಮೋಸ ಮಾಡಿದರೆಂಬ ಕಾರಣಕ್ಕೆ ಹೆಣ್ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲವೇ? ಆಗ ನೀವು ಎಲ್ಲಿದ್ದಿರಿ ಎಂದು ಕೇಳಿದರು.

ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಸುಟ್ಟು ಹಾಕಿದರು; ಸುಟ್ಟು ಹಾಕಿದ ವ್ಯಕ್ತಿ ಜೈಲಿನಿಂದ ಬಿಡುಗಡೆಯಾಗಿ ಬಂದಾಗ ನಿಮ್ಮ ಶಿಷ್ಯ ಜಮೀರ್ ಅವರನ್ನು ಮೆರವಣಿಗೆ ಮಾಡಿ ಕರೆತಂದಿಲ್ಲವೇ? ಇದ್ಯಾವ ನಿಲುವು ಸಿದ್ದರಾಮಯ್ಯನವರೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಸಿದ್ದರಾಮಯ್ಯನವರ ಡೋಂಗಿ – ಹುಸಿ ರಾಜಕೀಯ ಪ್ರವೃತ್ತಿ ಬಹಿರಂಗವಾಗಿದೆ. ಸಿದ್ದರಾಮಯ್ಯ ಅರೆಬೆಂದ ಮಡಿಕೆಯ ಥರ ಪರಿಕಲ್ಪನೆಯೇ ಇಲ್ಲದ ರಾಜಕಾರಣಿ ಆಗಿದ್ದಾರೆ. ದೇವರು ಸಿದ್ದರಾಮಯ್ಯನವರಿಗೆ ಅಷ್ಟೇ ಬುದ್ಧಿ ಕೊಟ್ಟಿದ್ದರೆ ನಾನೇನೂ ಮಾಡಲಾಗದು. ಆ ಭಗವಂತ ಇನ್ನಷ್ಟು ಪ್ರಬುದ್ಧತೆ, ಜಾಣ್ಮೆಯನ್ನು ಅವರಿಗೆ ಕೊಡಬೇಕು ಅನಿಸುತ್ತಿದೆ ಎಂದು ನುಡಿದರು.

ಭಾರತದ ಸೋಲು, ವಿಫಲತೆಯನ್ನೇ ಹಿಂದೆ ಪಠ್ಯದಲ್ಲಿ ತರಲಾಯಿತು. ಭಾರತ ವಿಜೃಂಭಿಸಿದ್ದು ಎಲ್ಲೂ ಇಲ್ಲ. ಈಗ ದೇಶದ ಭವ್ಯ ವಿಚಾರಗಳನ್ನು ಪಾಠದಲ್ಲಿ ಹಾಕಿದರೆ ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ನಾರಾಯಣ ಗುರು, ಭಗತ್ ಸಿಂಗ್ ಅವರನ್ನು ಬಿಟ್ಟರೆಂದು ಸುಳ್ಳು ಸುದ್ದಿ ಹಬ್ಬಿಸುವ ಪ್ರಯತ್ನ ಮಾಡಿದರು. ಇದೆಲ್ಲ ಫಲ ಕೊಡದಿದ್ದಾಗ ಮೂಲನಿವಾಸಿಗಳ ವಿಚಾರ ಎತ್ತಿದ್ದಾರೆ. ಇದೊಂದು ವ್ಯವಸ್ಥಿತ ರೀತಿಯ ಪಿತೂರಿ ಎಂದು ಆಕ್ಷೇಪಿಸಿದರು.

ಪಠ್ಯ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಕಾರ್ಯವನ್ನು ಯಾವುದೇ ಬಣ್ಣದಿಂದ ನೋಡಬಾರದು. ಕೇಸರೀಕರಣ, ಎಡ, ಬಲದಿಂದ ಮೊದಲು ಹೊರಗೆ ಬರಬೇಕಿದೆ. ಸಿದ್ದರಾಮಯ್ಯನವರು ಮಾತನಾಡಿದರೆ ಅದು ಜಾತ್ಯತೀತವಾದ. ನಾವೇನಾದರೂ ಮಾತನಾಡಿದರೆ ಅದು ಕೋಮುವಾದ. ಇದು ಈ ದೇಶದಲ್ಲಿ 70 ವರ್ಷಗಳಿಂದ ನಡೆದುಬಂದಿದೆ ಎಂದು ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷ ಹೆಚ್. ಕೆ. ಸುರೇಶ್, ಜಿಲ್ಲಾ ವಕ್ತಾರ ಹೆಚ್.ಎಂ. ಸುರೇಶ್, ಜಿಲ್ಲಾ ಸಂಚಾಲಕ ವಿಜಯ್ ಕುಮಾರ್, ಸಹ ಸಂಚಾಲಕ ಗಗನ್ ಗಾಂಧಿ ಇದ್ದರು.

ಇದನ್ನೂ ಓದಿ| ಪಠ್ಯಪುಸ್ತಕ ಕುರಿತು ಪ್ರಶ್ನಿಸಲು ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ: ಸಚಿವ ನಾಗೇಶ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Chetan Chandra: ಬೆಂಗಳೂರಿನ ಕಗ್ಗಲಿಪುರದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ನಟ ಚೇತನ್ ಚಂದ್ರ ಅವರನ್ನು ಅಡ್ಡಗಟ್ಟಿ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ.

VISTARANEWS.COM


on

Chetan Chandra
Koo

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌!

Mother's Day 2024 Duniya Vijay jaggesh Post Viral

ಬೆಂಗಳೂರು: ಅಮ್ಮ ಅಮ್ಮ ಅನ್ನೋ ಮಾತು ಬಂತು ಎಲ್ಲಿಂದ..? ಭೂಮಿಗೆ ಬಂದ (Mother’s Day 2024) ಮೊದಲನೆ ಕಂದನ ಅಳುವ ದನಿಯಿಂದ ʼಈ ಸಾಲುಗಳು ಯಾವಾಗಲೂ ನಮ್ಮನ್ನ ಬಿಡದೇ ಕಾಡುತ್ತವೆ. ʼಅಮ್ಮʼ ಅನ್ನೋ ಶಬ್ದಕ್ಕೆ ಅರ್ಥ ನಿಡುವುದು ಕೂಸೇ ಆದ್ರೂ ಆ ಕೂಸಿಗೆ ರೆಕ್ಕೆ ಕಟ್ಟಿ ಹಾರೋ ಹಾಗೇ ಮಾಡೋಳು ತಾಯಿ. ಪ್ರತಿವರ್ಷ ಮೇ ತಿಂಗಳ 2ನೇ ಭಾನುವಾರ ಮದರ್ಸ್ ಡೇ. ತಾಯಂದಿರ ದಿನದ ಹಿನ್ನೆಲೆಯಲ್ಲಿ ಜಗ್ಗೇಶ್, ದುನಿಯಾ ವಿಜಯ್ ಸೇರಿದಂತೆ ಹಲವರು ತಮ್ಮ ತಾಯಿಯನ್ನು ಸ್ಮರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ನವರಸ ನಾಯಕ ಜಗ್ಗೇಶ್‌ ಅವರು ಇನ್‌ಸ್ಟಾದಲ್ಲಿ ಅಮ್ಮನ ತೊಡೆ ಮೇಲೆ ಮಲಗಿರುವ ಫೋಟೊ ಜತೆಗೆ ಹೀಗೆ ಬರೆದಿದ್ದಾರೆ. ಧನ್ಯವಾದ ಜೀ ಕನ್ನಡ. ನನ್ನ ಪ್ರೀತಿಯ ಅಮ್ಮನ ಈ ರೀತಿ ನೆನೆಯುವಂತ ಕಾಣಿಕೆಗಾಗಿ.
ನಾನು ಇಂದು 61 ವರ್ಷವಾದರು ಅಮ್ಮನ ನೆನೆದಾಗ ಮಗುವಾಗುವೆ. ಅಂತಹ ಶಕ್ತಿಯಿದೆ ಅಮ್ಮನ ಎರಡಕ್ಷರಕ್ಕೆ.
ಕಾರುಣ್ಯ ಸೆಲೆಯ ಓ ಅಮ್ಮಂದಿರೆ…ನೀವುಗಳು ಇರಬೇಕು ಶಾಶ್ವತ. ದೃವನಕ್ಷತ್ರದಂತೆ..! ಮರೆಯಾಗದೆ ಮಕ್ಕಳ ಮುಂದೆ..ʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ದುನಿಯಾ ವಿಜಯ್‌ ಅವರು ಅಮ್ಮನ ಜತೆ ಇರುವ ಫೋಟೊ ಶೇರ್‌ ಮಾಡಿ ʻʻಈ ಉಸಿರು ಕೊಟ್ಟ ನಿನಗೆ
ನನ್ನ ಉಸಿರಿರೊವರೆಗೂ. ಪ್ರತಿ ದಿನ ಆಚರಣೆಯೇ ಅಮ್ಮʼʼ ಎಂದು ಬರೆದುಕೊಂಡಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ದುನಿಯಾ ವಿಜಯ್‌ ಅಮ್ಮ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಅವರಿಗೆ ಕೋವಿಡ್ 19 ಪಾಸಿಟಿವ್ ಕಂಡುಬಂದಿತ್ತು. ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿ, ತಂದೆ-ತಾಯಿಯನ್ನು ದುನಿಯಾ ವಿಜಯ್ ಆರೈಕೆ ಮಾಡಿದ್ದರು. ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. 3 ವರ್ಷಗಳ ಹಿಂದೆ ನಟ ದುನಿಯಾ ವಿಜಯ್ ನಾರಾಯಣಮ್ಮ ನಿಧನರಾದರು.

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರ ತಾಯಿ ಸುಜಾತಾ ಕಾಮತ್‌ ಕಿಡ್ನಿ ವೈಫಲ್ಯದಿಂದಾಗಿ ಕೊನೆಯುಸಿರೆಳೆದಿದ್ದರು. ಈ ದಿನ ನಟಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಮಿಸ್‌ ಯೂ ಅಮ್ಮ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ (Duniya Vijay) ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್‌ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೋನಿಕಾ ಈಗ ಹೆಸರು ಬದಲಾಯಿಸಿಕೊಂಡಿದ್ದಾರೆ. ಸಿನಿಮಾಗಾಗಿ ರಿತಾನ್ಯಾ ಎಂದು ಹೆಸರು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ | Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

Continue Reading

ಕ್ರೈಂ

Self Harming: ಎರಡು ಸಬ್ಜೆಕ್ಟ್‌ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Self Harming: ಎಂಜಿನಿಯರಿಂಗ್‌ 3ನೇ ವರ್ಷದಲ್ಲಿ ಎರಡು ವಿಷಯಗಳಲ್ಲಿ ಅನುತ್ತೀರ್ಣವಾಗಿರುವುದು ತಂದೆಗೆ ತಿಳಿಯುತ್ತದೆ ಎಂದು ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ ನಡೆದಿದೆ.

VISTARANEWS.COM


on

Self Harming
Koo

ಆನೇಕಲ್: ಎರಡು ಸಬ್ಜೆಕ್ಟ್‌ ಫೇಲ್‌ ಆಗಿರುವುದು ಪೋಷಕರಿಗೆ ತಿಳಿಯುತ್ತದೆ ಎಂದು ಹೆದರಿ, ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ನಗರ ಹೊರವಲಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.

ಬಿಹಾರ ಮೂಲದ ಹೇಮಲತಾ ಪಾಂಡೆ, ವಿಜಯ್ ಶಂಕರ್ ಪಾಂಡೆ ದಂಪತಿ ಪುತ್ರ ಅಮೃತೇಶ್ ಪಾಂಡೆ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ವಿದ್ಯಾರ್ಥಿಯ ಕುಟುಂಬ ಕೆಲ ವರ್ಷಗಳ ಹಿಂದೆ ಜಿಗಣಿಗೆ ಬಂದು ನೆಲೆಸಿತ್ತು. ಮಗನಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕೆಂದು ಕನಸು ಕಂಡಿದ್ದ ಪೋಷಕರು, ಮೈಸೂರು ರಸ್ತೆಯ ಆರ್.ವಿ. ಕಾಲೇಜಿಗೆ ಸೇರಿಸಿದ್ದರು.

ಆರ್.ವಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಹಾಸ್ಟೆಲ್‌ನಿಂದ ಕಾಲೇಜಿಗೆ ಹೋಗಿ ಬರುತ್ತಿದ್ದ. ಆದರೆ, ಮೂರನೇ ವರ್ಷದಲ್ಲಿ ಎರಡು ವಿಷಯ ಫೇಲ್ ಆಗಿ, ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ. ಚುನಾವಣೆಗೆ ಮತ ಹಾಕಲು ಜಿಗಣಿಗೆ ಬಂದಿದ್ದ ಅಮೃತೇಶ್, ಫೇಲ್ ಆಗಿರುವ ವಿಚಾರ ತಂದೆಗೆ ತಿಳಿಯುತ್ತದೆ ಎಂದು ಹೆದರಿಕೊಂಡಿದ್ದ. ಕಾಲೇಜಿನವರು ಪೋನ್ ಮಾಡುತ್ತಾರೆ ಎಂದು ತಂದೆ ಫೋನ್‌ನಲ್ಲಿದ್ದ ನಂಬರ್‌ಗಳನ್ನು ಬ್ಲಾಕ್ ಮಾಡಿದ್ದ.

ಇದನ್ನೂ ಓದಿ | Murder Case : ಪತಿಯ ಡೆಡ್ಲಿ ಅಟ್ಯಾಕ್‌ಗೆ ಪತ್ನಿ ಸಾವು; ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ಇತ್ತೀಚೆಗೆ ಆರನೇ ಸೆಮಿಸ್ಟರ್‌ಗೆ ಆಡ್ಮಿಷನ್ ಮಾಡಿ ಕಾಲೇಜಿಗೆ ಬಿಟ್ಟು ಬರುತ್ತೀನಿ ಎಂದು ತಂದೆ ಹೇಳಿದ್ದರು. ಆದರೆ, ತಂದೆ ಜತೆ ಕಾಲೇಜಿಗೆ ಹೋದರೆ ಫೇಲ್ ಆದ ವಿಚಾರ ತಿಳಿಯುತ್ತದೆ ಎಂದು ಹೆದರಿದ್ದ ವಿದ್ಯಾರ್ಥಿ, ಮೇ 10ರಂದು ಮನೆಯಿಂದ ಹೊರಗೆ ಹೋಗಿದ್ದ. ಇದರಿಂದ ಎಲ್ಲೆಡೆ ಆತನಿಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಆದರೆ, ಶನಿವಾರ ಜಿಗಣಿ ಕೆರೆಯಲ್ಲಿ ವಿದ್ಯಾರ್ಥಿಯ ಮೃತದೇಹ ದೊರೆತಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಹೀಗಾಗಿ ಮೃತದೇಹವನ್ನು ಪೊಲೀಸರು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದು, ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

Drowned in water

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಾಟದಹೊಸಳ್ಳಿ ಕೆರೆಯಲ್ಲಿ ಈಜಲು ಹೋದ ಟೆಕ್ಕಿ ನೀರಲ್ಲಿ (Drowned in water) ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ಶನಿವಾರ ಮಧ್ಯಾಹ್ನ ನೀರಿನಲ್ಲಿ ಮುಳುಗಿ ವಿನಯ್ ರಮೇಶ್ (42) ಎಂಬುವವರು ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಭಾನುವಾರ ಟೆಕ್ಕಿ ಮೃತದೇಹವು ಪತ್ತೆಯಾಗಿದೆ.

ಬೆಂಗಳೂರಿನ ಇಂದಿರಾನಗರ ನಿವಾಸಿಯಾದ ವಿನಯ್ ರಮೇಶ್, ಐದು ಜನ ಸ್ನೇಹಿತರೊಟ್ಟಿಗೆ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಕೆಲವರು ಈ ದಡದಿಂದ ಆ ದಡಕ್ಕೆ ಯಾರು ಮೊದಲು ಈಜಿಕೊಂಡು ಬರುತ್ತಾರೆ ನೋಡೋಣಾ ಎಂದು ಸವಾಲು ಹಾಕಿಕೊಂಡಿದ್ದಾರೆ. ಈ ಚಾಲೆಂಜ್‌ ಅನ್ನು ಸ್ವೀಕರಿಸಿದ ರಮೇಶ್‌ ಜೋಶ್‌ನಲ್ಲಿ ನೀರಿಗೆ ಇಳಿದಿದ್ದಾರೆ. ಆದರೆ ವಿನಯ್ ರಮೇಶ್ ವಾಪಸ್ ಬಂದಿರಲಿಲ್ಲ.

ಹೀಗಾಗಿ ಜತೆಗೆ ಇದ್ದ ಸ್ನೇಹಿತರು ಗಾಬರಿಯಾಗಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಯ್‌ ರಮೇಶ್‌ ವಿಮಾನದಲ್ಲಿ ಚೆನ್ನೈ ನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಸ್ನೇಹಿತರೊಟ್ಟಿಗೆ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ನಿರಂತರ ಪ್ರಯಾಣದಿಂದ ಬಳಲಿದ್ದ ವಿನಯ್ ಈಜಲು ಕೆರೆಗೆ ಇಳಿದಾಗ ಸುಸ್ತಾಗಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

ಈಜುವ ಚಾಲೆಂಜ್ ವಿನಯ್ ರಮೇಶ್‌ಗೆ ಮುಳುವಾಯ್ತಾ ಎಂಬ ಪ್ರಶ್ನೆ ಕಾಡುತ್ತಿದೆ. 24 ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಕೆರೆಯಿಂದ ಹೊರಗೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Hoax Bomb Threat: ದೆಹಲಿ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌; ಆತಂಕ ಸೃಷ್ಟಿ

Hoax Bomb Threat: ಬೆಂಗಳೂರಿನ ಗೋವಿಂದ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಬಂದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

Hoax bomb threat
Koo

ಬೆಂಗಳೂರು: ದೆಹಲಿಯ ವಿಮಾನ ನಿಲ್ದಾಣ ಹಾಗೂ ಹಲವು ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ (Hoax Bomb Threat) ಬಂದ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌ ಸಂದೇಶ ಬಂದಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಭಾನುವಾರ ನಡೆದಿದೆ. ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆ‌ಯಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಿಟಿ ಎಸ್.ಬಿ.ಗೆ ಇ-ಮೇಲ್ ಬಂದಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗೋವಿಂದ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಸಂಜೆ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಬಂದ ಕೂಡಲೇ ಅಲರ್ಟ್ ಆದ ಪೊಲೀಸರು, ಕೂಡಲೇ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಯಾವುದೇ ಬಾಂಬ್‌ ಅಥವಾ ಸ್ಫೋಟಕಗಳು ಕಾಣದಿದ್ದರಿಂದ, ಹುಸಿ‌ ಬಾಂಬ್ ಬೆದರಿಕೆ ಬಂದಿರುವುದು ಖಚಿತವಾಗಿದೆ.

ಇದನ್ನೂ ಓದಿ | Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

Bomb Threat

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಮಾನ ನಿಲ್ದಾಣ (delhi airport) ಮತ್ತು ಹಲವಾರು ಆಸ್ಪತ್ರೆಗಳಿಗೆ (hospital) ಭಾನುವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬಂದವು. ಇದರಿಂದಾಗಿ ಸ್ಥಳೀಯರು ಆತಂಕಕ್ಕೆ ಒಳಗಾದರು. ಅಧಿಕಾರಿಗಳು ಬಹು ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ, ವಾಹನಗಳನ್ನು ನಿಯೋಜಿಸಿದರು. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಮೊದಲು ಬುರಾರಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಬಂದಿದ್ದು, ಅಪರಾಹ್ನ 3.15ರ ಸುಮಾರಿಗೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ.

ಹಲವು ಆಸ್ಪತೆಗಳಿಗೆ ಬೆದರಿಕೆ

ಬಾಂಬ್ ಬೆದರಿಕೆಯ ಬಗ್ಗೆ ಬುರಾರಿ ಆಸ್ಪತ್ರೆಗೆ ಇ-ಮೇಲ್ ಬಂದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನ ದಳಗಳು ಸ್ಥಳಕ್ಕೆ ಧಾವಿಸಿತ್ತು. ತಂಡಗಳು ಆಸ್ಪತ್ರೆಯನ್ನು ಪರಿಶೀಲಿಸುತ್ತಿವೆ. ಇನ್ನೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಎಂ.ಕೆ. ಮೀನಾ ತಿಳಿಸಿದ್ದಾರೆ.

ಸಂಜೆ 4.26ರ ಸುಮಾರಿಗೆ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಿಂದ ಎರಡನೇ ಕರೆ ಬಂದಿದ್ದು, ಬಳಿಕ ಹಿಂದೂ ರಾವ್ ಆಸ್ಪತ್ರೆ ಸೇರಿದಂತೆ ಎಂಟರಿಂದ 10 ಇತರ ಆಸ್ಪತ್ರೆಗಳಿಗೆ ಇದೇ ರೀತಿಯ ಬೆದರಿಕೆ ಇ-ಮೇಲ್‌ಗಳು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬೆದರಿಕೆ

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕುರಿತು ಸಂಜೆ 6.15 ರ ಸುಮಾರಿಗೆ ಕರೆ ಬಂದಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ಐಜಿಐ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆಯ ಕುರಿತು ಸಂಜೆ 6.15 ರ ಸುಮಾರಿಗೆ ನಮಗೆ ಕರೆ ಬಂದಿತ್ತು. ಅಗ್ನಿಶಾಮಕ ವಾಹನಗಳನ್ನು ಸಿಬ್ಬಂದಿ ಸಮೇತ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಗಾರ್ಗ್ ಹೇಳಿದರು.
ಶಾಲೆಗಳಿಗೆ ಹಿಂದೆ ಬೆದರಿಕೆ ಹಾಕಲಾಗಿತ್ತು.

ಇತ್ತೀಚೆಗೆ ಬೆಂಗಳೂರು, ದೆಹಲಿ ಮತ್ತು ಅಹಮದಾಬಾದ್‌ನಲ್ಲಿ ಇದೇ ರೀತಿಯ ಬೆದರಿಕೆಗಳನ್ನು ಹಾಕಲಾಗಿತ್ತು. ಕೆಲವೇ ದಿನಗಳ ಹಿಂದೆ ದೆಹಲಿ-ಎನ್‌ಸಿಆರ್‌ನಾದ್ಯಂತ 130 ಕ್ಕೂ ಹೆಚ್ಚು ಶಾಲೆಗಳು ತಮ್ಮ ಆವರಣದಲ್ಲಿ ಸ್ಫೋಟಕಗಳಿರುವುದಾಗಿ ಇ-ಮೇಲ್‌ ಸಂದೇಶಗಳನ್ನು ಸ್ವೀಕರಿಸಿದವು. ಬೆದರಿಕೆಗಳು ವ್ಯಾಪಕವಾದ ಭೀತಿಗೆ ಕಾರಣವಾಗಿತ್ತು. ಇದರ ಪರಿಣಾಮವಾಗಿ ತಕ್ಷಣದ ಸ್ಥಳಾಂತರಿಸುವಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಂಪೂರ್ಣ ಹುಡುಕಾಟಗಳನ್ನು ನಡೆಸಲಾಯಿತು.

ದೂರು ದಾಖಲು

ಇ-ಮೇಲ್‌ಗಳ ನಿಖರವಾದ ಮೂಲವನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ಇಂಟರ್‌ಪೋಲ್ ಮೂಲಕ ರಷ್ಯಾದ ಮೇಲಿಂಗ್ ಸೇವಾ ಕಂಪೆನಿ Mail.ru ಅನ್ನು ಸಂಪರ್ಕಿಸಿದರು. ಬಾಂಬ್ ಹುಸಿ ಇ-ಮೇಲ್‌ಗಳ ಉದ್ದೇಶವು ಸಾಮೂಹಿಕ ಭೀತಿಯನ್ನು ಸೃಷ್ಟಿಸುವುದು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದಾಗಿದೆ ಎಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸುಳ್ಳು ಬಾಂಬ್ ಬೆದರಿಕೆಗಳ ಸಂದರ್ಭಗಳನ್ನು ಎದುರಿಸಲು ವಿವರವಾದ ಪ್ರೋಟೋಕಾಲ್ ಮತ್ತು ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ಸ್ (SOP) ಗಾಗಿ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ವಾರದ ಆರಂಭದಲ್ಲಿ, ಗೃಹ ಕಾರ್ಯದರ್ಶಿ ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ತಪ್ಪು ಮಾಹಿತಿಯಿಂದಾಗಿ ಯಾವುದೇ ಅನಗತ್ಯ ಭಯವನ್ನುಉಂಟಾಗದಂತೆ ತಡೆಯಲು ವ್ಯವಸ್ಥೆಗೊಳಿಸುವಂತೆ ಕೇಳಿಕೊಂಡಿದ್ದರು.
ಭದ್ರತೆ ಹೆಚ್ಚಳಕ್ಕೆ ಸೂಚನೆ

ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭದ್ರತೆ, ಸಿಸಿಟಿವಿ ಕೆಮರಾ ಮತ್ತು ಇಮೇಲ್‌ಗಳ ನಿಯಮಿತ ಮೇಲ್ವಿಚಾರಣೆಯನ್ನು ಹೆಚ್ಚಿಸುವ ಅಗತ್ಯವನ್ನು ಸಚಿವಾಲಯ ಒತ್ತಿಹೇಳಿದೆ.

ಇದನ್ನೂ ಓದಿ | Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

ತಪ್ಪು ಮಾಹಿತಿಯು ಯಾವುದೇ ಅನಗತ್ಯ ಭೀತಿಯನ್ನು ಸೃಷ್ಟಿಸದಂತೆ ಪರಿಣಾಮಕಾರಿ ಪ್ರತಿಕ್ರಿಯೆ ಕಾರ್ಯವಿಧಾನಕ್ಕಾಗಿ ನಿಕಟ ಸಮನ್ವಯವನ್ನು ಹೊಂದಲು ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ. ಈ ಕುರಿತು ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಮತ್ತು ದೆಹಲಿ ಪೊಲೀಸ್ ಕಮಿಷನರ್ ಭಾಗವಹಿಸಿದ್ದರು.

Continue Reading

ಕರ್ನಾಟಕ

Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Prajwal Revanna Case: ಎಸ್‌ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದರೆ ಸಿಬಿಐಗೆ ವಹಿಸಬೇಕು. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್‌ ಸೇರಿದಂತೆ ಯಾರ‌ ಯಾರ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯನ್ನು ಮಾಡಬೇಕು.

VISTARANEWS.COM


on

Prajwal Revanna Case Basavaraj Bommai says DK Shivakumar should be questioned
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಸರಿಯಾದ ತನಿಖೆಗೆ ಸಿಬಿಐಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಎಸ್‌ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದರೆ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಚಾರಣೆಯನ್ನೂ ಮಾಡಬೇಕು ಎಂಬ ಕೆಲವರ ಆಗ್ರಹದ ಕುರಿತು ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ‌ ಯಾರ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯನ್ನು ಮಾಡಬೇಕು. ಆ ಕಾರಣಕ್ಕಾಗಿಯೇ ನಾವು ಪ್ರಕರಣ ಸಿಬಿಐಗೆ ಕೊಡಲಿ ಅಂತ ಕೇಳುತ್ತಿದ್ದೇವೆ ಎಂದು ಹೇಳಿದರು.

ಎಲ್ಲವೂ ಸರಿ ಹೋಗುತ್ತದೆ

ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆಯಾದ ಮೇಲೆ ಕೆಲವರಲ್ಲಿ ಅಸಮಧಾನವಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಚುನಾವಣೆಗೆ ಹಲವರು ಆಕಾಂಕ್ಷಿಗಳು ಇದ್ದರು. ಟಿಕೆಟ್ ಕೈತಪ್ಪಿದಾಗ ಸಹಜವಾಗಿ ಬೇಸರ ಆಗುತ್ತದೆ. ಎಲ್ಲವೂ ಸರಿ ಹೋಗುತ್ತದೆ. ಈಗಾಗಲೇ ಮೈತ್ರಿ ಬಗ್ಗೆ ವರಿಷ್ಠರು ಯಾವ ರೀತಿ ತೀರ್ಮಾನ ಮಾಡಿದ್ದಾರೋ ಅದರಂತೆ ನಡೆಯುತ್ತದೆ ಎಂದು ಹೇಳಿದರು.

ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಬಿಜೆಪಿ ಮತ್ತು ಜೆಡಿಎಸ್‌ ಆಗ್ರಹವನ್ನು ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಸಿಬಿಐ ಮೇಲೆ ನನಗೆ ನಂಬಿಕೆ ಇಲ್ಲ ಅಂತಲ್ಲ. ನಮ್ಮ ಪೊಲೀಸರ ಮೇಲೆ ಇವರಿಗೆ ನಂಬಿಕೆ ಇಲ್ಲವೇ? ಎಂದು ಇವರಿಗೆ? ಎಂದು ಹೇಳುವ ಮೂಲಕ ಈ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಸಿಬಿಐ ಬಗ್ಗೆ ಬಿಜೆಪಿಯವರು ಏನು ಹೇಳಿದ್ದಾರೆ ಗೊತ್ತಾ? ಸಿಬಿಐ ಅಂದರೆ ಕರಪ್ಶನ್ ಬ್ಯೂರೋ ಆಫ್ ಇನ್‌ವೆಸ್ಟಿಗೇಶನ್‌ ಅಂತ ಹೇಳಿದರು. ಈ ಹಿಂದೆ ಅವರ ಸರ್ಕಾರ ಇದ್ದಾಗ ನಾವು ಎಷ್ಟು ಸಾರಿ ಕೇಳಿದ್ದೇವೆ ಸಿಬಿಐಗೆ ಕೊಡಿ ಅಂತ. ಯಾವತ್ತಾದರೂ ಒಂದು ಪ್ರಕರಣವನ್ನು ಅವರು ಸಿಬಿಐಗೆ ಕೊಟ್ಟಿದ್ದಾರಾ? ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಈ ಪ್ರಕರಣವನ್ನು ಸಿಬಿಐಗೆ ಕೊಡುವುದಕ್ಕೆ ಆಗ್ರಹ ಮಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದರು.

ಈ ಹಿಂದೆ ನಾನು ಸಿಎಂ ಆಗಿದ್ದಾಗ ಸಿಬಿಐಗೆ 7 ಕೇಸ್ ಕೊಟ್ಟಿದ್ದೆ. ಆ ಕೇಸ್‌ಗಳಲ್ಲಿ ಏನಾಯಿತು? ಸಿಬಿಐ ಮೇಲೆ ನನಗೆ ನಂಬಿಕೆ ಇಲ್ಲ ಅಂತಲ್ಲ. ಯಾಕೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ವಾ ಇವರಿಗೆ? ಬಿಜೆಪಿಯವರಿಗೆ ಸುಳ್ಳು ಆರೋಪ ಮಾಡುವುದೇ ಕಸುಬಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಸಿಬಿಐಗೆ ಕೊಟ್ಟ ಮೇಲೆ ಏನಾಯ್ತು ಆ ಕೇಸ್?

ಸಂತ್ತಸ್ತೆಯ ದೂರಿನ ಮೇಲೆ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಅರೆಸ್ಡ್ ಮಾಡಲಾಗಿದೆ. ನಾವು ಪೊಲೀಸ್ ತನಿಖೆಯಲ್ಲಿ ಮಧ್ಯ ಪ್ರವೇಶ ಮಾಡುತ್ತಿಲ್ಲ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಪ್ರಲ್ಹಾದ್ ಜೋಶಿ ಜವಾಬ್ದಾರಿಯಿಂದ ಮಾತನಾಡಲಿ. ಉತ್ತರ ಕನ್ನಡ ಜಿಲ್ಲೆಯ ಪರೇಶ್‌ ಮೇಸ್ತಾ ಕೇಸಲ್ಲಿ ಏನ್ರೀ ಆಯ್ತು? ಸಿಬಿಐಗೆ ಕೊಟ್ಟ ಮೇಲೆ ಏನಾಯ್ತು ಆ ಕೇಸ್? ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಎಸ್ಐಟಿ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ ಈ ಸಂಬಂಧ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದಾನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದಾನೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ನಲ್ಲಿ ನವೀನ್‌ ಗೌಡ ಹಾಕಿರುವ ಪೋಸ್ಟ್‌ನಲ್ಲಿ ಜೆಡಿಎಸ್‌ ಶಾಸಕ ಎ. ಮಂಜು ವಿರುದ್ಧ ನೇರವಾಗಿ ಆರೋಪ ಮಾಡಿದ್ದಾನೆ. ಆದರೆ, ನವೀನ್‌ ಗೌಡ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಎಸ್‌ಐಟಿಯವರು ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿಕೊಂಡಿದೆ. ಈ ಮಧ್ಯೆ ನವೀನ್‌ ಗೌಡ ಮಾತ್ರ ರಾಜಾರೋಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳತೊಡಗಿದ್ದಾನೆ.

ನವೀನ್‌ ಗೌಡನ ಪೋಸ್ಟ್‌ನಲ್ಲೇನಿದೆ?

ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ಎ. ಮಂಜುಗೂ ಸಂಕಷ್ಟ?

ಈಗಾಗಲೇ ಎಸ್‌ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಮಧ್ಯೆ ಪೆನ್‌ಡ್ರೈವ್‌ ಅನ್ನು ಹಾಸನ ಜಿಲ್ಲಾದ್ಯಂತ ಹಂಚಿಕೆ ಮಾಡಿರುವ ಆರೋಪವನ್ನು ಹೊತ್ತಿರುವ ನವೀನ್‌ ಗೌಡ ಮಾಡಿರುವ ಪೋಸ್ಟ್‌ ಈಗ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ಈತನ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಎಸ್‌ಐಟಿಯವರು ಮುಂದಿನ ಕ್ರಮವನ್ನು ಕೈಗೊಂಡು ಮಂಜು ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರಾ? ಇಲ್ಲವೇ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಿದ್ದಾರಾ? ಅಥವಾ ಈ ಪೋಸ್ಟ್‌ ಅನ್ನು ನವೀನ್‌ ಗೌಡ ಯಾವ ಐಪಿ ಅಡ್ರೆಸ್‌ನಿಂದ ಮಾಡಿದ್ದಾನೆ ಎಂಬುದನ್ನು ತಿಳಿದುಕೊಂಡು ಶೋಧ ಕಾರ್ಯ ನಡೆಸಲಿದ್ದಾರೋ? ಎಂಬುದನ್ನು ನೋಡಬೇಕಿದೆ.

ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

ಇದು ಸೂಕ್ಷ್ಮ ವಿಷಯವಾಗಿದೆ. ಮಾತನಾಡುವಾಗ ಈ ಬಗ್ಗೆ ಎಚ್ಚರಿಕೆ ಇರಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಕಾನೂನು ಪ್ರಕಾರ ನಿಮ್ಮನ್ನೂ ಕರೆಸಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಯಾರೋ, ಏನೇನನ್ನೋ ಹೇಳುತ್ತಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗಳಿಗೆ ನಾವು ಉತ್ತರ ಕೊಡುವುದಕ್ಕೆ ಆಗಲ್ಲ. ಇದು ಗಂಭೀರವಾದ ಪ್ರಕರಣ ಆಗಿರುವುದರಿಂದ ಇದರ ಇನ್ವೆಸ್ಟಿಗೇಶನ್ ಆಗುವವರೆಗೂ ಕೂಡ ಯಾವುದೇ ಮಾಹಿತಿಯನ್ನು ಸಾರ್ವಜನಿಕ ವಲಯಕ್ಕೆ ತಿಳಿಸಲು ಆಗುವುದಿಲ್ಲ. ಈ ಕೇಸ್‌ ಬಗ್ಗೆ ಸಾರ್ವಜನಿಕರಾಗಲೀ ಅಥವಾ ರಾಜಕೀಯ ನಾಯಕರಗಾಲೀ, ಯಾವುದೇ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ಮೇಲೆಯೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ 41A ಪ್ರಕಾರ ಅವರನ್ನು ಕೂಡ ವಿಚಾರಣೆಗೆ ಕರೆಯಬೇಕಾಗುತ್ತದೆ. ಎಚ್.ಡಿ. ಕುಮಾರಸ್ವಾಮಿ ಪದೇ ಪದೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ವಿಷಯವನ್ನು ಅವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ ಬಂಧನಕ್ಕೆ ಎಸ್‌ಐಟಿ ಟೀಂ ವಿದೇಶಕ್ಕೆ ಹೋಗಲ್ಲ

ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಕಾಶವಿಲ್ಲ. ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಇಂಟರ್ ಪೋಲ್‌ನವರು ಅವರಿಗೆ ಇನ್ಫಾರ್ಮೇಷನ್ ಕೊಡುತ್ತಾರೆ. ಯಾವ ದೇಶದಲ್ಲಿ ಇದ್ದಾರೆ ಎಂಬುದನ್ನು ಗುರುತಿಸಿ ಸಿಬಿಐಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಬಿಐನವರು ನಮಗೆ ಮಾಹಿತಿಯನ್ನು ನೀಡುತ್ತಾರೆ. ಆಮೇಲೆ ನಮ್ಮ ಏಜನ್ಸಿಗಳಿಗೂ ಈ ಬಗ್ಗೆ ಗೊತ್ತಾಗುತ್ತದೆ ಎಂದು ಡಾ. ಜಿ. ಪರಮೇಶ್ವರ್‌ ವಿವರಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ನಡೆಸಲಾಗುತ್ತದೆ. ಯಾವುದೇ ವಿಚಾರಗಳನ್ನು ಸಾರ್ವಜನಿಕ ವಲಯದಲ್ಲಿ ಹೇಳುವುದಕ್ಕೆ ಆಗುವುದಿಲ್ಲ. ಸದ್ಯ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಯನ್ನು ನಡೆಸುತ್ತಿದೆ. ತನಿಖೆ ನಡೆಯುತ್ತಿರುವಾಗ ನಾನು ಹೇಳಿಕೆ ಕೊಡುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಬಿಜೆಪಿಗೆ ಸೋಲಿನ ಭಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನ ಬರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ. ಜಿ. ಪರಮೇಶ್ವರ್‌, ಬಿಜೆಪಿ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ಅದಕ್ಕೆ ಪದೇ ಪದೆ ಈ ರೀತಿ ಹೇಳುತ್ತಿದ್ದಾರೆ. ಫಲಿತಾಂಶ ಬಂದ ಮೇಲೆ ನೋಡೋಣ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

Continue Reading
Advertisement
Prajwal Revanna Case
ಕರ್ನಾಟಕ4 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ4 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ5 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest5 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ5 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ5 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ6 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ6 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ6 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

IPL 2024
ಪ್ರಮುಖ ಸುದ್ದಿ6 hours ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ9 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ10 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ10 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ15 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ23 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ3 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌