Site icon Vistara News

Voter Data | ಸಿದ್ದರಾಮಯ್ಯ ಸರ್ಕಾರ ಜಾತಿಗಣತಿ ವಿವರವನ್ನು ಚುನಾವಣೆಗೆ ಬಳಸಿತ್ತು: ಸಿಎಂ ಬೊಮ್ಮಾಯಿ ಆರೋಪ

siddaramaiah and basavaraj bommai

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಜಾತಿ ಗಣತಿಯಲ್ಲಿ ಇಡೀ ಕರ್ನಾಟಕದ ಮಾಹಿತಿಯನ್ನು ಚುನಾವಣೆಗೆ ಬಳಸಿಕೊಳ್ಳಲಾಗಿತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ. ಮತದಾರರ ದತ್ತಾಂಶವನ್ನು (Voter Data) ಅಕ್ರಮವಾಗಿ ಬಳಸಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್‌ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ರಮಣಶ್ಶ್ರೀ ಪ್ರತಿಷ್ಠಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ 130 ಕೋಟಿ ರೂ. ಖರ್ಚು ಮಾಡಿ, ಇಡೀ ಕರ್ನಾಟಕದ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದರು. ಸಮೀಕ್ಷೆ ಹೆಸರಿನಲ್ಲಿ ಜಾತಿ , ಉಪಜಾತಿಗಳನ್ನು ಸೃಷ್ಟಿಸಿ, ದಾಖಲೆಗಳನ್ನು ಮಾಡಿ, ಆ ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸದೇ, ಚುನಾವಣೆಯ ಉದ್ದೇಶಕ್ಕೆ ಕಾಂಗ್ರೆಸ್ ಬಳಸಿಕೊಂಡಿತು.

ಇಷ್ಟೆಲ್ಲ ದಾಖಲೆಗಳನ್ನು ಬಳಸಿಕೊಂಡರೂ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿತು. ಮತದಾರರ ಮಾಹಿತಿ ದುರುಪಯೋಗದಲ್ಲಿ ಶಿಕ್ಷೆ ಮೊದಲು ಸಿದ್ದರಾಮಯ್ಯನವರ ಸರ್ಕಾರಕ್ಕೆ ಆಗಬೇಕು. ಪ್ರಸ್ತುತ ಈ ವಿಚಾರದಲ್ಲಿ ಸರ್ಕಾರಕ್ಕೆ ಸಂಬಂಧಿಸಿರುವುದಿಲ್ಲ. ತಳಹಂತದಲ್ಲಿ ಈ ಕೆಲಸವಾಗಿದ್ದರೆ, ಸೂಕ್ತ ವಿಚಾರಣೆಯಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ತಿಳಿಸಿದರು.

ಗುಂಬಜ್‌ ವಿವಾದ ತನಿಖೆ
ಮೈಸೂರಿನಲ್ಲಿ ತಂಗುದಾಣದ ವಿನ್ಯಾಸದ ಬಗ್ಗೆ ಶಾಸಕ ರಾಮದಾಸ್ ಹಾಗೂ ಸಂಸದ ಪ್ರತಾಪ್‌ ಸಿಂಹ ನಡುವಿನ ಗುದ್ದಾಟದ ಕುರಿತು ಪ್ರತಿಕ್ರಿಯೆ ನೀಡಿ, ಈ ವಿವಾವದ ಬಗ್ಗೆ ಪರಿಶೀಲಿಸಲು ನಡೆಸಲು ತಜ್ಞರ ಸಮಿತಿರನ್ನು ರಚಿಸಲು ತಿಳಿಸಲಾಗಿದೆ. ಈ ವಿಷಯದಲ್ಲಿ ಸ್ಥಳೀಯ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಏಕೆ ಬಂದಿದೆ ಎಂದು ತಿಳಿಯುವುದಕ್ಕಿಂತ, ತಜ್ಞರ ಸಮಿತಿ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ | Voter Data | ʼಅಶ್ವತ್ಥನಾರಾಯಣ್‌ ಬಹಳ ಒಳ್ಳೆಯ ಕೆಲಸ ಮಾಡ್ತಿದಾರೆʼ: ಡಿ.ಕೆ. ಶಿವಕುಮಾರ್‌ ಹೇಳಿಕೆ

Exit mobile version