ಬೆಂಗಳೂರು: ಕಾಂಗ್ರೆಸ್‌ನವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಖಾಸಗಿ ಸಂಸ್ಥೆಯ ಮೂಲಕ ಮತದಾರರ ಗೌಪ್ಯ ಮಾಹಿತಿಗಳನ್ನು (Voter Data) ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಕ್ಷಾ ಕೆಲಸವನ್ನು NGOಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ. NGO, BLD ದುರ್ಬಳಕೆ ಮಾಡಿದ್ದಾರೆ.
ಆದ್ದರಿಂದ ಚುನಾವಣಾ ಆಯೋಗ ನೀಡಿರುವ ಆದೇಶದಿಂದ ಮೊದಲುಗೊಂಡು ಇಡೀ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡುತ್ತೇನೆ. ನಿಜ ಹೊರಗೆ ಬರಲಿ ಎಂದಿದ್ದಾರೆ.
ಸಿಎಂ ರಾಜೀನಾಮೆ ನೀಡಬೇಕು ಎಂಬ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ರಾಜೀನಾಮೆಗೆ ಒತ್ತಾಯಿಸುವುದು ಹಾಸ್ಯಾಸ್ಪದ. ಸಂಬಂಧವಿಲ್ಲದ್ದನ್ನು ಕೇಳುತ್ತಿದ್ದಾರೆ. ಅದೇ ಮಾನದಂಡವಾದರೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಈವರೆಗೆ ಮೂರು ಬಾರಿ ರಾಜೀನಾಮೆ ನೀಡಬೇಕಿತ್ತು. ಇದೊಂದು ಆಧಾರರಹಿತ ಆರೋಪ ಎಂದರು.
ಇದನ್ನೂ ಓದಿ | Voter Data | 15 ದಿನದ ಹಿಂದೆಯೇ ʼಚಿಲುಮೆʼ ಅನುಮತಿ ರದ್ದುಪಡಿಸಿದರೂ ಮೌನವಾಗಿದ್ದೇಕೆ BBMP?