ಆನ್‌ಲೈನ್‌ ನಲ್ಲಿ ಆರ್ಡರ್‌ ಮಾಡಿದರೆ ಮನೆಬಾಗಿಲಿಗೆ ಜಲಮಂಡಳಿ ಕುಡಿವ ನೀರು ಪೂರೈಕೆ - Vistara News

Latest

ಆನ್‌ಲೈನ್‌ ನಲ್ಲಿ ಆರ್ಡರ್‌ ಮಾಡಿದರೆ ಮನೆಬಾಗಿಲಿಗೆ ಜಲಮಂಡಳಿ ಕುಡಿವ ನೀರು ಪೂರೈಕೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಏ.21- ಬಿರುಬಿಸಿನ ಬೆಗೆ ಜನರನ್ನು ಹೈರಣಾಗಿಸಿದೆ. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೂ ತತ್ವಾರ ಸಹಜ. ಇದರ ಲಾಭ ಪಡೆಯಲು ಖಾಸಗಿ ಒಡೆತನದ ನೀರಿನ ಟ್ಯಾಂಕರ್‌ ಗಳು ಜನರ ಸುಲಿಗೆಗಿಳುವುದು ಮಾಮೂಲು, ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಜಲಮಂಡಳಿ ಟ್ಯಾಂಕರ್‌ ಮಾಫಿಯಾಗೆ ಬ್ರೇಕ್‌ ಹಾಕಲು ಮುಂದಾಗಿದೆ.

ಡಿಜಿಟಲ್‌ ಯುಗದಲ್ಲಿ ಎಲ್ಲವೂ ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೆ ಸಿಗುತ್ತಿರುವಂತೆಯೇ, ಇದೀಗ ಕುಡಿಯುವ ನೀರೂ ಆ್ಯಪ್‌ ಮೂಲಕವೇ ಮನೆಗೆ ತಲುಪುವ ವ್ಯವಸ್ಥೆ ಮತ್ತೆ ಜಾರಿಗೆ ಬಂದಿದೆ. ಈ ಯೋಜನೆಯಡಿ ನಾಗರಿಕರು ತಮ್ಮ ಮೊಬೈಲ್‌ ಆ್ಯಪ್‌ ಮೂಲಕವೇ ಬೇಕಾದಷ್ಟು ಕಾವೇರಿ ನೀರನ್ನು ಬುಕ್‌ ಮಾಡಿ ಮನೆ ಬಾಗಿಲಿಗೆ ಪಡೆಯಬಹುದಾಗಿದೆ. ಆ್ಯಪ್‌ ಆಧಾರಿತ ನೀರು ಪೂರೈಕೆ ಸೇವೆಗೆ ಆರ್ಡರ್‌ ಮಾಡಿದರೆ ಮನೆ ಬಾಗಿಲಿಗೆ ನೇರ ಪೂರೈಕೆಯಾಗಲಿದೆ. . ಈ ಯೋಜನೆಗಾಗಿ 500ಕ್ಕೂ ಹೆಚ್ಚು ಟ್ಯಾಂಕರ್‌ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. 4,000 ರಿಂದ 12,000 ಲೀಟರ್‌ವರೆಗೆ ನೀರು ಪೂರೈಕೆ ಮಾಡಲಾಗುವುದು ಆನ್‌ಲೈನ್‌‍ ಅಥವಾ ನಗದು ಪಾವತಿ ಸೌಲಭ್ಯ ಕಲ್ಪಿಸಲಾಗಿದೆ.

ದರ ವಿವರ: 4,000 ಲೀಟರ್‌ ನೀರಿಗೆ 660 ರೂ.
5,000 ಲೀಟರ್‌ ಗೆ 700
6,000 ಲೀಟರ್‌ ಗೆ 740
12,000 ಲೀಟರ್‌ಗೆ 1,290
ಈ ದರಗಳು ಪ್ರಾರಂಭಿಕ 2 ಕಿಲೋಮೀಟರ್‌ ವ್ಯಾಪ್ತಿಗೆ ಅನ್ವಯಿಸುತ್ತವೆ. 4,000 ದಿಂದ 6,000 ಲೀಟರ್‌ ಟ್ಯಾಂಕರ್‌ಗಳಿಗೆ: 2 ಕಿಮೀ ನಂತರ ಪ್ರತಿ ಕಿಮೀಗೆ 50ರೂ. 12,000 ಲೀಟರ್‌ ಮತ್ತು ಅದಕ್ಕಿಂತ ಹೆಚ್ಚಿನ ಟ್ಯಾಂಕರ್‌ಗಳಿಗೆ 2 ಕಿಮೀ ನಂತರ ಪ್ರತಿ ಕಿಮೀಗೆ 70 ರೂ. ನೀಡಬೇಕಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

VISTARANEWS.COM


on

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಹ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಜೋಶಿ ಮನವಿಗೆ ಅಶ್ವಿನಿ ವೈಷ್ಣವ್ ಸ್ಪಂದನೆ: ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಪ್ರಯುಕ್ತ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಹ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಜೋಶಿ ಮನವಿಗೆ ಅಶ್ವಿನಿ ವೈಷ್ಣವ್ ಸ್ಪಂದನೆ: ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಪ್ರಯುಕ್ತ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

Continue Reading

Latest

VISTARANEWS.COM


on

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್ ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.


ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.


ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.


2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.


2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.


ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading

Latest

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

VISTARANEWS.COM


on

ಬೆಂಗಳೂರು: ಕಳೆದ ವರ್ಷ 102 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ನಟಿ ರನ್ಯಾ ರಾವ್​​​ಗೆ ಕೊನೆಗೂ ಜಾಮೀನು ದೊರೆತಿದೆ. ಇಂದು ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ.
2025 ಮಾರ್ಚ್ 3ರಂದು ರನ್ಯಾ ರಾವ್ ಅಲಿಯಾಸ್ ಹರ್ಷವರ್ಧಿನಿ ರನ್ಯಾ(34), ಅವರನ್ನು ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಇದೀಗ ಜಾಮೀನು ದೊರೆತಿದ್ದು, ಒಂದು ವರ್ಷದ ಸೆರೆವಾಸದ ಬಳಿಕ ಈಕೆ ಜೈಲಿನಿಂದ ಹೊರಬರಲಿದ್ದಾರೆ. ಈ ಹಿಂದೆ ಇವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾ ಮಾಡಿತ್ತು. ಹೀಗಾಗಿ ರನ್ಯಾ ರಾವ್​ಗೆ ಒಂದು ವರ್ಷ ಜಾಮೀನು ಸಿಕ್ಕಿರಲಿಲ್ಲ.
ಈಕೆಯನ್ನು ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆಗಟ್ಟುವಿಕೆ (ಕೋಫೆಪೋಸಾ) ಕಾಯ್ದೆಯಡಿಯಲ್ಲಿ ಬಂಧಿಸಲಾಗಿತ್ತು. ಜತೆಗೆ ತೆಲುಗು ನಟ ತರುಣ್ ಕೊಂಡೂರು (36) ಮತ್ತು ಸಾಹಿಲ್ ಸಕರಿಯಾ ಜೈನ್ (26) ಅವರನ್ನೂ ಬಂಧಿಸಲಾಗಿತ್ತು.

Continue Reading

Latest

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

VISTARANEWS.COM


on

ತಮಿಳುನಾಡು ವಿಧಾನಸಭೆಯ ಎಲ್ಲ 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಾಳೆ ಮತದಾನ ನಡೆಯಲಿದೆ. ದಶಕಗಳಿಂದ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮಾತ್ರ ಹಣಾಹಣಿ ನಡೆಯುತ್ತಿತ್ತು. ಕಾಂಗ್ರೆಸ್‌ ಬಿಜೆಪಿ ಮೊದಲಾದ ಪಕ್ಷಗಳು ನಾಮಕಾವಸ್ತೆಗಾಗಿ ಸ್ಪರ್ಧೆ ಮಾಡುತ್ತಿದ್ದವು. ಆದರೆ ಈ ಬಾರಿ ತಮಿಳುನಾಡು ಚುನಾವಣೆ ಹಲವು ಕಾರಣಗಳಿಗೆ ಗಮನ ಸೆಳೆಯುತ್ತಿದೆ. ಮೊದಲನೆಯದಾಗಿ ನಟ, ರಾಜಕಾರಣಿ ಸಿ.ಜೋಸೆಫ್‌ ವಿಜಯ್‌ ಹೊಸ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸ್ಥಾಪಿಸಿ ಅಖಾಡಾಕ್ಕಿಳಿದಿದ್ದಾರೆ. ಎರಡನೆಯದಾಗಿ ಬಿಜೆಪಿ ತೀವ್ರ ಪೈಪೋಟಿ ನೀಡುತ್ತಿದೆ.
234 ವಿಧಾನಸಭಾ ಕ್ಷೇತ್ರಗಳಲ್ಲಿ 4,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೇ 4ರಂದು ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.
ವಿಜಯ್‌ ಅವರ ರಾಜಕೀಯ ಪ್ರವೇಶ ವಿಶೇಷವಾಗಿ ಯುವ ಸಮೂಹವನ್ನು ಸೆಳೆಯುತ್ತಿದೆ ಎಂದು ಹೇಳಲಾಗುತ್ತಿದೆ. ಒಟ್ಟು 5.73 ಕೋಟಿ ಮತದಾರರ ಪೈಕಿ 18-30 ವಯೋಮಾನದೊಳಗಿನ ಮತದಾರರನ್ನು ನಂಬಿಕೊಂಡಿದ್ದಾರೆ. ಈ ವಯೋಮಾನದ ಸುಮಾರು 1.50 ಕೋಟಿ ಮತದಾರರು ತಮ್ಮ ಕೈ ಹಿಡಿಯಲಿದ್ದಾರೆ ಎನ್ನುವುದು ವಿಜಯ್‌ ನಿರೀಕ್ಷೆ. 30-39 ವಯೋಮಾನದ 1.16 ಕೋಟಿ ಮತದಾರರೂ ಸೇರಿದರೆ ಸುಮಾರು 2.38 ಕೋಟಿ ಮತದಾರರು ವಿಜಯ್‌ ಬೆಂಬಲಕ್ಕೆ ನಿಲ್ಲಲಿದ್ದಾರೆಯೇ ಎಂಬ ಕುತೂಹಲವೂ ಇದೆ. ಮಹಿಳಾ ಮತದಾರರು ವಿಜಯ್ ಅವರ ಬೆಂಬಲಕ್ಕೆ ನಿಲ್ಲಬಹುದೇ ಎಂಬ ಕುತೂಹಲವೂ ಇದೆ.ಯುವ ಮತದಾರರ ಮೇಲೆ ವಿಜಯ್ ಅವರ ಪ್ರಭಾವ ಎಷ್ಟಿರಲಿದೆ ಎಂಬುದು ಕುತೂಹಲ ಮೂಡಿಸಿದೆ.
ಈ ವರ್ಗದ ಮತದಾರರು ದಶಕಗಳಿಂದ ಆಡಳಿತ ನಡೆಸಿಕೊಂಡು ಬರುತ್ತಿರುವ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಂದ ಭ್ರಮನಿರಸನಗೊಂಡಿದ್ದಾರೆ. ವಿಜಯ್‌ ಅವರು ಮತಗಳನ್ನು ಕಬಳಿಸಬಹುದೇ ಹೊರತು ಅಧಿಕಾರ ಹಿಡಿಯುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ.
ಇನ್ನು ಆಡಳಿತಾರೂಢ ಡಿಎಂಕೆ ಮರಳಿ ಅಧಿಕಾರ ಹಿಡಿಯುವ ವಿಶ್ವಾಸ ಹೊಂದಿದೆ. ತಮ್ಮ ಸರ್ಕಾರದ ಸಾಧನೆಗಳು, ಜನಪರ ಯೋಜನೆಗಳು ತಮ್ಮನ್ನು ಗೆಲ್ಲಿಸುತ್ತವೆ ಎಂದು ಮುಖ್ಯಮಂತ್ರಿ ಸ್ಟಾಲಿನ್‌ ನಿರೀಕ್ಷಿಸಿದ್ದಾರೆ. ಬಲವಾದ ಆಡಳಿತ ವಿರೋಧಿ ಅಲೆ ಇಲ್ಲದೆ ಇರುವುದು ಡಿಎಂಕೆ ಪಾಲಿಗೆ ಪ್ಲಸ್‌ ಪಾಯಿಂಟ್‌ ಆಗಿದೆ.
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಮರಳಿ ಗದ್ದುಗೆ ಹಿಡಿಯಲು ಹವಣಿಸುತ್ತಿದೆ. ಜಯಲಲಿತಾ ಅವರ ಅಗಲಿಕೆಯ ದಿನದಿಂದಲೂ ಪಕ್ಷ ಮೇಲೇರಲು ಸಾಧ್ಯವೇ ಆಗಿಲ್ಲ. ಜಯಲಲಿತಾ ಅವರ ಹೆಸರಿನಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಎಐಎಡಿಎಂಕೆ ಕಸರತ್ತು ನಡೆಸಿದೆ.ಆಡಳಿತ ವಿರೋಧಿ ಅಲೆ ಮತ್ತು ಕೇಂದ್ರ ಸರ್ಕಾರದ ಯೋಜೆನಗಳನ್ನು ನೆಚ್ಚಿಕೊಂಡಿದೆ.

Continue Reading
Advertisement
Latest14 minutes ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

Latest21 minutes ago

Latest21 minutes ago

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

Latest43 minutes ago

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

Latest2 hours ago

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

ಅವಿಭಾಗೀಕೃತ2 hours ago

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

Latest2 hours ago

ಹಾರ್ದಿಕ್ ವಿರುದ್ಧ ಅಸಮಾಧಾನ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಹೋದರ ಕೃನಾಲ್ ಪಾಂಡ್ಯ.

Donald trump
Latest2 hours ago

ಯುದ್ಧವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆ: ಡೋನಾಲ್ಡ್ ಟ್ರಂಪ್‌ ಘೋಷಣೆ

BJP State President B Y Vijayendra latest statement in bengaluru
Latest3 hours ago

ಸರ್ಕಾರಿ ನೌಕರರಿಗೆ ಸಂಬಳ ಕೊಡದ ಸರ್ಕಾರ: ವಿಜಯೇಂದ್ರ ವಾಗ್ದಾಳಿ

Latest3 hours ago

ವೈರಲ್ ಬೆಡಗಿ ಕುಂಭಮೇಳದ ಮೋನಾಲಿಸಾ ಬಗ್ಗೆ ಬಿಗ್ ಅಪ್ಡೇಟ್: ಪತ್ನಿ ಗರ್ಭಿಣಿ ಎಂದು ಪೊಲೀಸರಿಗೆ ಪತಿ ಫರ್ಮಾನ್ ಮಾಹಿತಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌