Water supply : ಪೈಪ್ ವಾಲ್ವ್ ದುರಸ್ತಿ; ಅರ್ಧ ಬೆಂಗಳೂರಿಗೆ ನಾಳೆ ಕಾವೇರಿ ನೀರಿಲ್ಲ - Vistara News

ಬೆಂಗಳೂರು

Water supply : ಪೈಪ್ ವಾಲ್ವ್ ದುರಸ್ತಿ; ಅರ್ಧ ಬೆಂಗಳೂರಿಗೆ ನಾಳೆ ಕಾವೇರಿ ನೀರಿಲ್ಲ

Water shutdown : ಜಲಮಂಡಳಿಯು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಗೊಂಡಿದ್ದು, ಕಾವೇರಿ ನೀರು ಪೂರೈಕೆಯಲ್ಲಿ (Water supply) ಸೆ.13ರಂದು ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Bwssb
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಲಮಂಡಳಿಯು (BWSSB) ಚಂದ್ರಾ ಬಡಾವಣೆಯ ಜಲಗಾರಕ್ಕೆ ನೀರು ಪೂರೈಕೆಯ (Water supply) ಮಾರ್ಗಗಳಲ್ಲಿರುವ ಪೈಪ್ ವಾಲ್ವ್ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ 4ನೇ ಹಂತದ 1ನೇ ಫೇಸ್‌ನ ಮೂರು ಪಂಪ್‌ಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಅರ್ಧ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಲ್ಲಿ ಸೆ. 13ರಂದು ವ್ಯತ್ಯಯವಾಗಲಿದೆ.

ಮಹಾಲಕ್ಷ್ಮಿ ಲೇಔಟ್, ಜೆ.ಸಿ ನಗರ ಸುತ್ತಮುತ್ತ ಒಂದು ದಿನ ಕಾವೇರಿ ನೀರು ಪೂರೈಕೆ ಆಗುವುದಿಲ್ಲ. ಜತೆಗೆ ಆತ್ಮೀಯ ಗೆಳೆಯರ ಬಳಗ, ಶ್ರೀ ರಾಮನಗರ, ಮುನೇಶ್ವರ ಬ್ಲಾಕ್‌, ಜೆ.ಎಸ್‌ ನಗರ, ಮಹಾಲಕ್ಷ್ಮೀ ಲೇಔಟ್‌, ಬೋವಿ ಪಾಳ್ಯ, ಮೈಕೊ ಲೇಔಟ್, ಗಣೇಶ ಬ್ಲಾಕ್, ರಾಜಾಜಿನಗರ 2ನೇ ಬ್ಲಾಕ್‌ನಲ್ಲಿ ನೀರು ಬರುವುದಿಲ್ಲ.

ಇದನ್ನೂ ಓದಿ: Weather Report : ಸೆ.12ರಂದು ರಾಜ್ಯದ ಇಲ್ಲೆಲ್ಲ ಮಳೆ ನಿರೀಕ್ಷೆ

ಜತೆಗ ಡಾ. ರಾಜ್ ಕುಮಾರ್ ರೋಡ್, ಗುಬ್ಬಣ ಇಂಡಸ್ಟ್ರಿಯಲ್ ಲೇಔಟ್‌, ರಾಜಾಜಿನಗರ 4ನೇ ಎನ್ ಮತ್ತು ಎಮ್ ಬ್ಲಾಕ್, ರಾಜಾಜಿನಗರ ಡಿ ಬ್ಲಾಕ್, ಪ್ರಕಾಶ್ ನಗರ,3ನೇ ಹಂತ, ಪ್ರಕಾಶ್ ನಗರ, ಸುಬ್ರಹ್ಮಣ್ಯ ನಗರ, ಗಾಯತ್ರಿ ನಗರ, ನಂದಿನಿ ಲೇಔಟ್, ಜೆ.ಸಿ.ನಗರ ಸೇರಿ ಯಶವಂತಪುರ ಎ.ಪಿ.ಎಂ.ಸಿ, ಆರ್.ಎಂ.ಸಿ ಯಾರ್ಡ್, ಗೊರಗುಂಟೆಪಾಳ್ಯ, ಗಜಾನನ ಸ್ಲಮ್ 1 ಮತ್ತು 2 ಬಸವೇಶ್ವರ ನಗರ, ಬಿ.ಎಂ.ಇ.ಎಲ್ ಲೇಔಟ್, ಎನ್.ಜಿ.ಓ.ಎಸ್ ಕಾಲೋನಿ, ಗೃಹಲಕ್ಷ್ಮೀ ಲೇಔಟ್, ಜೆಸಿ ನಗರ, ಕಮಲನಗರ, ಕುರುಬರಹಳ್ಳಿಯಲ್ಲಿ ಸಮಸ್ಯೆ ಆಗಲಿದೆ.

ಹೌಸಿಂಗ್ ಬೋರ್ಡ್, ಶಾರದ ಕಾಲೋನಿ, ವ್ಯಷಭಾವತಿ ನಗರ, ಎಸ್.ಬಿ.ಐ. ಸ್ಕ್ಯಾಫ್ ಕಾಲೋನಿ, ಮಾರುತಿನಗರ, ಚಂದ್ರನಗರ, ಚೆನ್ನಿಗಪ್ಪ ಲೇಔಟ್, ವಿನಾಯಕ ನಗರ, ಗಂಗಣ್ಯ ಲೇಔಟ್, ಎ.ಕೆ ಕಾಲೋನಿ, ನಂಜಪ್ಪ ಲೇಔಟ್, ದಾಸರಹಳ್ಳಿ ಸೇರಿದಂತೆ ಹಲವೆಡೆ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನೀರಿನ ವ್ಯತ್ಯಯ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀರು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಜಲಮಂಡಳಿಯಿಂದ ಮನವಿ ಮಾಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

ರಾಜ್ಯಾದ್ಯಂತ ಹಲವೆಡೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಟ್ಟಿಗೆ ಮೇ. 8ರವರೆಗೆ ಹೀಟ್‌ ವೇವ್‌ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ ಇದ್ದರೂ ಕೆಲವೆಡೆ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಸೋಮವಾರದಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ (Karnataka Weather Forecast) ನೀಡಲಿದೆ.

ಈ ಜಿಲ್ಲೆಗಳಲ್ಲಿ ಬಿಸಿ ಬಿಸಿ ವಾತಾವರಣ

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 3 ದಿನಗಳವರೆಗೆ ಕರಾವಳಿಯಲ್ಲಿ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ.

ಇದನ್ನೂ ಓದಿ: Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

Prajwal Revanna Case: ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆ್ಯಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವಿಡಿಯೋ ಹಂಚಿಕೆ ಸಂತ್ರಸ್ತ ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಹೆಲ್ಸ್ ಲೈನ್ ನಂ.
6360938947 ಅನ್ನು ಬೆಳಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದೆ.

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದು. ತಪ್ಪಿದರೆ ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.

ಇದನ್ನೂ ಓದಿ | Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿ ನಾಚಿಕೆ, ಹಿಂಜರಿಕೆ, ಅವಮಾನ ಪಡಬೇಕೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರ್‌, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ಸಿಐಡಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದ ಸಂಬಂಧ ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಿತ್ತು. ಈ ವೇಳೆಯೂ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದುಕೊಂಡು ಕಾಣಿಸಿಕೊಂಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಶಾಸಕ ಎಚ್.ಡಿ.ರೇವಣ್ಣ ಅವರ ಕೈಯಲ್ಲಿ ಸದಾ ನಿಂಬೆ ಹಣ್ಣು ಇರುತ್ತದೆ ಎಂಬುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಹಲವರು ಹಾಸ್ಯ ಮಾಡಿದರೂ ರೇವಣ್ಣ ಅವರು ಮಾತ್ರ ಎಲ್ಲವನ್ನೂ ನಗುತ್ತಲೇ ಸ್ವೀಕರಿಸಿ ಮುಂದೆ ಸಾಗುತ್ತಿದ್ದರು. ಇದೀಗ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ ಸಂಬಂಧಪಟ್ಟಂತೆ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ರೇವಣ್ಣ ಅವರನ್ನು ಭಾನುವಾರ ಸಂಜೆ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಿತ್ತು. ಈ ವೇಳೆಯೂ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಸಾಗುತ್ತಿದ್ದದ್ದು ಕಂಡುಬಂದಿದೆ.

ಈ ಹಿಂದೆ ಕುಟುಂಬಕ್ಕೆ ಸಂಕಷ್ಟ ಬಂದಾಗ ಹೋಮ-ಹವನ, ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳ ಮೊರೆ ಹೋಗುವ ರೇವಣ್ಣ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಓಡಾಡುತ್ತಿದ್ದರು. ಆದರೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ ಬಂಧನವಾದ ನಂತರ ಅವರಿಗೆ ಜ್ಯೋತಿಷ್ಯ, ನಿಂಬೆಹಣ್ಣು ಕೂಡ ಕೈಹಿಡಿಯಲಿಲ್ಲ ಎಂದು ಸಾರ್ವಜನಿಕರು ವ್ಯಂಗ್ಯವಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನ್ಯಾಯಾಧೀಶರ ಮುಂದೆ ಹಾಜರಾದಾಗಲೂ ರೇವಣ್ಣ ಅವರು ಎಡಗೈನಲ್ಲಿ ನಿಂಬೆಹಣ್ಣಿನೊಂದಿಗೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿಗೆ ಬರುವ ಮುನ್ನ ಹೊಳೇನರಸಿಪುರದ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು ಎನ್ನಲಾಗಿದೆ. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಆದರೆ, ಯಾವ ಪ್ರಯತ್ನವೂ ಫಲಿಸಲಿಲ್ಲ. ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸುತ್ತಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಮಾಜಿ ಸಚಿವ ಎಚ್‌.ಡಿ. ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ; ಮತ್ತೆ ತೀವ್ರ ವಿಚಾರಣೆ

Prajwal Revanna Case HD Revanna sent to judicial custody Shift to Parappana Agrahara

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು 4 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮ್ಯಾಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು 4 ದಿನಗಳ ವರೆಗೆ ಅಂದರೆ ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ರೇವಣ್ಣ ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಗುಡುಗಿದರು.

Continue Reading

ಕರ್ನಾಟಕ

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

Fire Accident: ಬೆಂಗಳೂರಿನ ಎಂಜಿ‌ ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಮಳಿಗೆಯಲ್ಲಿ ಭಾನುವಾರ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದೆ.

VISTARANEWS.COM


on

Fire Accident
Koo

ಬೆಂಗಳೂರು: ನಗರದ ಎಂ.ಜಿ. ರಸ್ತೆಯ ಆಪ್ಟಿಕಲ್ಸ್ ಮಳಿಗೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಅವಘಡ (Fire Accident) ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎಂಜಿ‌ ರೋಡ್ ಮೆಟ್ರೋ ಸ್ಟೇಷನ್ ಬಳಿಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Gadag News

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

murder case In karwar

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ2 mins ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sunil Narine
ಕ್ರೀಡೆ13 mins ago

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Ranjani Raghavan Starrer Sathyam Kannada Movie Gets UA Certificate
ಸ್ಯಾಂಡಲ್ ವುಡ್19 mins ago

Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

Terrorist Attack
ದೇಶ24 mins ago

Terrorist attack: ʼಮಗನ ಬರ್ತ್‌ ಡೇ ಪಾರ್ಟಿಗೆ ಪ್ಲ್ಯಾನ್‌ ಮಾಡಿದ್ದ, ಆದರೆ ಈಗ…ʼ ಕಣ್ಣೀರಿಟ್ಟ ಹುತಾತ್ಮ ಯೋಧನ ಕುಟುಂಬ

Samantha Ruth Prabhu Fake Viral Nude Pic
ಟಾಲಿವುಡ್40 mins ago

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Dr.Nagareddy Patil
ಕರ್ನಾಟಕ40 mins ago

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

IPL 2024 Points Table
ಕ್ರೀಡೆ41 mins ago

IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Terrorist attack
ದೇಶ1 hour ago

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Cooking Oils
ಆರೋಗ್ಯ2 hours ago

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ14 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ15 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ15 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌