ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಹಾಗೂ ಕರ್ನಾಟಕ ಪತ್ರಕರ್ತೆಯರ ಸಂಘದ ಸಹಯೋಗದಲ್ಲಿ ಏಪ್ರಿಲ್ 3ರಂದು ಬೆಳಗ್ಗೆ 10.30ಕ್ಕೆ ʼಮಹಿಳಾ ದಿನಾಚರಣೆ ಹಾಗೂ ಸಾಧಕಿಯರಿಗೆ ಪ್ರಶಸ್ತಿ ಪ್ರದಾನʼ (Womens Day) ಕಾರ್ಯಕ್ರಮವನ್ನು ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿಯ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನ ಭಾರತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಪತ್ರಕರ್ತೆಯರ ಸಂಘದ ಪ್ರಶಸ್ತಿ ಪುರಸ್ಕೃತರು
ಗಾಯತ್ರಿ ಚಂದ್ರಶೇಖರ್, ಹಿರಿಯ ಪತ್ರಕರ್ತೆ, ದೂರದರ್ಶನ, ಬೆಂಗಳೂರು
ಅನಿತಾ. ಎಚ್, ಉಪ ಸಂಪಾದಕರು, ಪ್ರಜಾವಾಣಿ, ದಾವಣಗೆರೆ
ಸಾಧಕಿ ಪ್ರಶಸ್ತಿ ಪುರಸ್ಕೃತರು
ರೂಪಾ ಎಂ.ವಿ, ಚಂದ್ರಯಾನ-3 ಡೆಪ್ಯುಟಿ ಪ್ರಾಜೆಕ್ಟ್ ಡೈರೆಕ್ಟರ್, ಇಸ್ರೋ
ಕಾತ್ಯಾಯನಿ ಚಾಮರಾಜ್, ನಾಗರಿಕ ಹಕ್ಕುಗಳ ಹೋರಾಟಗಾರ್ತಿ, ಬೆಂಗಳೂರು.
ಬುಧವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಬೆಂಗಳೂರು ನಗರ ವಿವಿ ಕುಲಪತಿ ಲಿಂಗರಾಜ ಗಾಂಧಿ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ.ನಾಗಾಂಬಿಕಾ ದೇವಿ, ಮಹಿಳಾ ಹಕ್ಕುಗಳ ಕಾರ್ಯಕರ್ತೆ ಬೃಂದಾ ಅಡಿಗೆ ಭಾಗವಹಿಸಲಿದ್ದು, ಬೆಂಗಳೂರು ನಗರ ವಿವಿ ಕುಲಸಚಿವ (ಆಡಳಿತ) ಜವರೇಗೌಡ, ಕುಲಸಚಿವ (ಮೌಲ್ಯಮಾಪನ) ಆನಂದ್ ಕುಮಾರ್, ವಿತ್ತಾಧಿಕಾರಿ ವಿಜಯಲಕ್ಷ್ಮಿ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಎನ್. ನರಸಿಂಹಮೂರ್ತಿ, ಕರ್ನಾಟಕ ಪತ್ರಕರ್ತೆಯರ ಸಂಘ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಮಂಜುಶ್ರೀ ಕಡಕೋಳ ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ | ದಶಮುಖ ಅಂಕಣ: ಮೌನವೆಂಬ ಭಾವಸೇತು
ಕರ್ನಾಟಕ ಪತ್ರಕರ್ತೆಯರ ಸಂಘದ ಮಾಜಿ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಮಾಜಿ ಪ್ರಧಾನ ಕಾರ್ಯದರ್ಶಿ ಮಾಲತಿ ಭಟ್, ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಬಿ.ಪಿ. ಮಲ್ಲಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಅಧ್ಯಕ್ಷ ರಮೇಶ್ ಪಾಳ್ಯ, ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಹನುಮೇಶ್ ಕೆ. ಯಾವಗಲ್, ಕರ್ನಾಟಕ ಲೇಖಕಿಯರ ಸಂಘ ಅಧ್ಯಕ್ಷೆ ಎಚ್.ಎಲ್. ಪುಷ್ಪ ಹಾಜರಿರುತ್ತಾರೆ.