World Heart Day: ಹೃದಯ ಕವಾಟ ಅಸ್ವಸ್ಥತೆ ಹೊಂದಿರುವ ರೋಗಿಗಳ ಪಾಲಿಗೆ ನವೀನ ತಂತ್ರಜ್ಞಾನಗಳು ವರದಾನ - Vistara News

ಬೆಂಗಳೂರು

World Heart Day: ಹೃದಯ ಕವಾಟ ಅಸ್ವಸ್ಥತೆ ಹೊಂದಿರುವ ರೋಗಿಗಳ ಪಾಲಿಗೆ ನವೀನ ತಂತ್ರಜ್ಞಾನಗಳು ವರದಾನ

World Heart Day : ನವೀನ ತಂತ್ರಜ್ಞಾನಗಳು ಹೃದಯ ಕವಾಟ ಅಸ್ವಸ್ಥತೆ ಹೊಂದಿರುವ
ರೋಗಿಗಳ ಪಾಲಿಗೆ ಕ್ರಾಂತಿಕಾರಿ ಆಗಿದೆ ಎಂದು ʻನಾರಾಯಣ ಇನ್ಸ್‌ಟಿಟ್ಯೂಟ್‌ ಆಫ್ ಕಾರ್ಡಿಯಾಕ್ ಸೈನ್ಸಸ್‌ʼನ ಹಿರಿಯ ಸಲಹೆಗಾರರಾದ ಡಾ.ಸಂಜಯ್ ಮೆಹ್ರೋತ್ರ ತಿಳಿಸಿದ್ದಾರೆ.

VISTARANEWS.COM


on

Innovative technologies have revolutionized patients with heart valve disorder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಭಾರತದಲ್ಲಿ ಹೃದಯರಕ್ತನಾಳದ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಸರ್ವರ ಹೃದಯ ಆರೋಗ್ಯ ಸುಧಾರಣೆಗಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ವಿಸ್ತರಿಸುವ ಅಗತ್ಯವನ್ನು ಒತ್ತಿ ಹೇಳಬೇಕಾದ ಪ್ರಾಮುಖ್ಯತೆ ಇತ್ತೀಚೆಗೆ ಹೆಚ್ಚುತ್ತಿದೆ. ಈ ವರ್ಷದ ವಿಶ್ವ ಹೃದಯ ದಿನವನ್ನು (World Heart Day) – “ಕ್ರಿಯಾಶೀಲರಾಗಿ ಹೃದಯವನ್ನು ಬಳಸಿ” ಎಂಬ ವಿಷಯಾಧಾರಿತವಾಗಿ ಆಚರಿಸಲಾಗುತ್ತಿದೆ. ಇದು ತಮ್ಮ ಹೃದಯದ ಆರೋಗ್ಯ ಮೇಲ್ವಿಚಾರಣೆಗಾಗಿ ಸಕ್ರಿಯ ಕ್ರಮಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸುತ್ತದೆ. ʻನಾರಾಯಣ ಇನ್ಸ್‌ಟಿಟ್ಯೂಟ್‌ ಆಫ್ ಕಾರ್ಡಿಯಾಕ್ ಸೈನ್ಸಸ್‌ʼನ ಹಿರಿಯ ಸಲಹೆಗಾರರಾದ ಡಾ.ಸಂಜಯ್ ಮೆಹ್ರೋತ್ರ ಅವರು ಸಹ ತಮ್ಮ ಮಾತುಗಳಲ್ಲಿ ಇದನ್ನೇ ಒತ್ತಿ ಹೇಳಿದರು.

ಹೃದಯರಕ್ತನಾಳದ ಕಾಯಿಲೆಗಳು ಹೃದಯ ಮತ್ತು ರಕ್ತನಾಳಗಳ ಮೇಲೆ ಪರಿಣಾಮ ಬೀರುವ ಹಲವಾರು ಪರಿಸ್ಥಿತಿಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ʻಕರೋನರಿ ಆರ್ಟಿಲರಿ ಡಿಸೀಜ್‌ʼ(ಹೃದಯದ ಧಮನಿಗಳಲ್ಲಿ ಕೊಬ್ಬು ಶೇಖರಣೆಯಿಂದ ಅಡಚಣೆ), ಹೃದಯ ವೈಫಲ್ಯ, ʻಅರಿಥ್ಮಿಯಾಸ್ʼ (ಅನಿಯಮಿತ ಹೃದಯಬಡಿತ) ಮತ್ತು ʻಅಯೋರ್ಟಿಕ್ ಸ್ಟೆನೋಸಿಸ್‌ʼನಂತಹ ಹೃದಯ ಕವಾಟ ಕಾಯಿಲೆಗಳು ಸೇರಿವೆ. ಇವುಗಳ ಪ್ರತಿ ಕಾಯಿಲೆಯ ವಿಧವೂ ಎದೆ ನೋವು, ಉಸಿರಾಟದ ತೊಂದರೆ ಮತ್ತು ಆಯಾಸದಂತಹ ತನ್ನದೇ ಆದ ಸವಾಲುಗಳು ಮತ್ತು ರೋಗಲಕ್ಷಣಗಳನ್ನು ಒಳಗೊಂಡಿರುತ್ತದೆ. ಈ ಪರಿಸ್ಥಿತಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಮಯೋಚಿತ ರೋಗಪತ್ತೆ ಮತ್ತು ಚಿಕಿತ್ಸೆ ನಿರ್ಣಾಯಕವಾಗಿದೆ.

Innovative technologies have revolutionized patients with heart valve disorder

“ಇತ್ತೀಚೆಗೆ, ನಾನು ಅನಿಲ್ (ಹೆಸರು ಬದಲಾಯಿಸಲಾಗಿದೆ) ಎಂಬ ಹಿರಿಯ ವ್ಯಕ್ತಿಗೆ ಚಿಕಿತ್ಸೆ ನೀಡಿದೆ. ಅವರು ಈ ಹಿಂದೆ ತುಂಬಾ ಸಕ್ರಿಯರಾಗಿದ್ದರು, ಉತ್ತಮ ಆರೋಗ್ಯವನ್ನು ಹೊಂದಿದ್ದರು. ಆದಾಗ್ಯೂ, ತೋಟಗಾರಿಕೆ ಮತ್ತು ಮನೆಯ ಸುತ್ತಲೂ ನಡೆಯುವಂತಹ ಸರಳ ಚಟುವಟಿಕೆಗಳ ಸಮಯದಲ್ಲೂ ಅವರಿಗೆ ಉಸಿರಾಟದ ತೊಂದರೆ ಆರಂಭವಾಯಿತು. ಮಲಗಿರುವಾಗ ಉಸಿರಾಟದ ತೊಂದರೆಯಿಂದಾಗಿ ನಿದ್ರೆ ಮಾಡಲು ಹೆಣಗಾಡುವ ಮಟ್ಟಕ್ಕೆ ಅವರ ಸ್ಥಿತಿ ಹದಗೆಟ್ಟಿತು. ಒಂದು ದಿನ, ಅವರು ಮೆಟ್ಟಿಲುಗಳನ್ನು ಇಳಿಯುವಾಗ ಕುಸಿದುಬಿದ್ದರು. ಆಸ್ಪತ್ರೆಗೆ ದಾಖಲಿಸಿದ ನಂತರ, ಅನಿಲ್ ಅವರಿಗೆ ʻಅಯೋರ್ಟಿಕ್ ಸ್ಟೆನೋಸಿಸ್ʼ ಇರುವುದು ಪತ್ತೆಯಾಯಿತು.

ಇದು ಹೃದಯದ ಕವಾಟಗಳ ಪೈಕಿ ಒಂದು ಕವಾಟವು ಕಿರಿದಾಗುವ ಸ್ಥಿತಿ. ಹೃದಯದ ಕಾರ್ಯವನ್ನು ಪೂರ್ವ ಸ್ಥಿತಿಗೆ ಪುನಃಸ್ಥಾಪಿಸಲು, ಅನಿಲ್ ಅವರು ʻಟ್ರಾನ್ಸ್ ಕ್ಯಾಥೆಟರ್ ಅಯೋರ್ಟಿಕ್ ವಾಲ್ವ್ ಇಂಪ್ಲಾಂಟೇಶನ್ʼ(ಟಿಎವಿಐ) ಎಂಬ ಕಾರ್ಯವಿಧಾನಕ್ಕೆ ಒಳಗಾದರು. ಗಮನಾರ್ಹ ವಿಷಯವೆಂದರೆ, ಮರುದಿನವೇ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು ಮತ್ತು ಶೀಘ್ರದಲ್ಲೇ ತಮ್ಮ ಸಾಮಾನ್ಯ ದೈನಂದಿನ ಚಟುವಟಿಕೆಗಳನ್ನು ಪುನರಾರಂಭಿಸಿದರು,” ಎಂದು ನಾರಾಯಣ ಇನ್ಸ್‌ಟಿಟ್ಯೂಟ್ ಆಫ್ ಕಾರ್ಡಿಯಾಕ್ ಸೈನ್ಸ್‌ʼನ ಹಿರಿಯ ಸಲಹೆಗಾರ ಡಾ.ಸಂಜಯ್ ಮೆಹ್ರೋತ್ರ ವಿವರಿಸಿದರು.

ʻಅಯೋರ್ಟಿಕ್ ಸ್ಟೆನೋಸಿಸ್ʼ(ಎಎಸ್) ಸಮಸ್ಯೆಗೆ ಚಿಕಿತ್ಸೆಯು ಅದರ ತೀವ್ರತೆ ಮತ್ತು ರೋಗಲಕ್ಷಣಗಳನ್ನು ಅವಲಂಬಿಸಿರುತ್ತದೆ. ಲಕ್ಷಣರಹಿತ ಅಥವಾ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ, ತೊಡಕುಗಳ ಅಪಾಯವನ್ನು ಕಡಿಮೆ ಮಾಡಲು ವೈದ್ಯರು ಔಷಧ ಅಥವಾ ಜೀವನಶೈಲಿ ಬದಲಾವಣೆಗಳನ್ನು ಶಿಫಾರಸು ಮಾಡಬಹುದು. ಆಗಾಗ್ಗೆ ವೈದ್ಯರ ಭೇಟಿ ಮತ್ತು ಪರೀಕ್ಷೆಗಳ ಮೂಲಕ ನಿಯಮಿತ ಮೇಲ್ವಿಚಾರಣೆಗೆ ಸಲಹೆ ನೀಡಬಹುದು.

ಇದನ್ನೂ ಓದಿ: Breast cancer : ಸ್ತನ ಕ್ಯಾನ್ಸರ್‌ ರೋಗಿಗೆ ರೊಬೋಟ್‌ ನೆರವಿನಿಂದ ತನ್ನದೆ ದೇಹದ ಮತ್ತೊಂದು ಭಾಗ ಬಳಸಿ ಸ್ತನ ಪುನರ್‌ ನಿರ್ಮಾಣ; ಫೋರ್ಟಿಸ್‌ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ

ಆದಾಗ್ಯೂ, ತೀವ್ರವಾದ ʻಎಎಸ್ʼ ಸಮಸ್ಯೆಗೆ ಶಸ್ತ್ರಚಿಕಿತ್ಸೆಯ ಅಗತ್ಯವಿರುತ್ತದೆ. ತಾಂತ್ರಿಕ ಪ್ರಗತಿಗಳು ಕಳೆದ ದಶಕದಲ್ಲಿ ʻಟಿಎವಿಐʼ ಅನ್ನು ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿಯಾಗಿಸಿವೆ. ಕಡಿಮೆ ಸಮಯ ಆಸ್ಪತ್ರೆಯಲ್ಲಿ ಉಳಿಯುವುದು, ಕಡಿಮೆ ನೋವು, ಕಡಿಮೆ ರಕ್ತ ನಷ್ಟ, ಕಡಿಮೆ ಸೋಂಕುಗಳು ಮತ್ತು ಕ್ಷಿಪ್ರ ಚೇತರಿಕೆಯಂತಹ ಪ್ರಯೋಜನಗಳನ್ನು ನೀಡುತ್ತವೆ. ಕಾರ್ಯವಿಧಾನದ ಮರುದಿನ ರೋಗಿಗಳು ಸಾಮಾನ್ಯವಾಗಿ ತಮ್ಮ ಸಾಮಾನ್ಯ ಚಟುವಟಿಕೆಗಳಿಗೆ ಮರಳಬಹುದು. ಸಂಶೋಧಕರು ಕವಾಟಗಳನ್ನು ಹೆಚ್ಚು ಕಾಲ ಉಳಿಯುವಂತೆ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಕಿರಿಯ ವ್ಯಕ್ತಿಗಳು ಸೇರಿದಂತೆ ಹೆಚ್ಚಿನ ರೋಗಿಗಳಿಗೆ ʻಟಿಎವಿಐʼ ಆಯ್ಕೆಗಳನ್ನು ವಿಸ್ತರಿಸುವ ನಿಟ್ಟಿನಲ್ಲೂ ಕೆಲಸ ನಡೆಯುತ್ತಿದೆ.

ವೈದ್ಯಕೀಯ ಆರೈಕೆಯಲ್ಲಿ ಎಷ್ಟೆಲ್ಲಾ ಪ್ರಗತಿಯ ಹೊರತಾಗಿಯೂ, ಯುವ ಜನರಲ್ಲಿ ಹೃದಯರಕ್ತನಾಳದ ಕಾಯಿಲೆಗಳು ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ. ಈ ಹೆಚ್ಚುತ್ತಿರುವ ಹೃದ್ರೋಗದ ವ್ಯಾಪ್ತಿಯು ನಿರಂತರ ಜಾಗರೂಕತೆ ಮತ್ತು ತಡೆಗಟ್ಟುವ ಕ್ರಮಗಳ ಅಗತ್ಯವನ್ನು ಒತ್ತಿಹೇಳುತ್ತದೆ. ಹೃದಯರಕ್ತನಾಳದ ಕಾಯಿಲೆಗಳು ಮತ್ತು ಆರಂಭಿಕ ಮಧ್ಯಸ್ಥಿಕೆಯ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ವಿಶೇಷವಾಗಿ ಅಧಿಕ ರಕ್ತದೊತ್ತಡ ಅಥವಾ ಮಧುಮೇಹದಂತಹ ಅಪಾಯದ ಅಂಶಗಳನ್ನು ಹೊಂದಿರುವವರಿಗೆ ನಿಯಮಿತ ಪರೀಕ್ಷೆ ಮತ್ತು ತಪಾಸಣೆಗಳು ಅತ್ಯಗತ್ಯ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest2 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest7 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest7 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest1 day ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest1 day ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ1 day ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest1 day ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest1 day ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest1 day ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌