ಬೆಂಗಳೂರು: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ ʼಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ (Book Release) ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.
ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್; ಚಿನ್ನದ ದರ ಇಳಿಕೆ
ಕಾರ್ಯಕ್ರಮದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾರು ಹಾಗೂ ಶ್ರೀಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮತ್ತು ಪಿ.ಇ.ಎಸ್. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎಂ.ಆರ್. ದೊರೆಸ್ವಾಮಿ ಉಪಸ್ಥಿತರಿರುವರು.
ಇದನ್ನೂ ಓದಿ: Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್ ಯತಿರಾಜ್
ಸಂಜೆ 5 ಗಂಟೆಗೆ ಕಲಾಸ್ನೇಹಿ ಹಾಗೂ ನರ್ತನಯೋಗ ಸಂಸ್ಥೆಯ ನಿರ್ದೇಶಕಿ ಸ್ನೇಹಾ ನಾರಾಯಣ ಮತ್ತು ಯೋಗೇಶ್ ಕುಮಾರ್ ಅವರಿಂದ ಭರತನಾಟ್ಯ, ಸಂಜೆ 5.30 ಕ್ಕೆ ನೂರಕ್ಕೂ ಹೆಚ್ಚು ಗಣ್ಯರಿಂದ ಪುಸ್ತಕ ಲೋಕಾರ್ಪಣೆ, ಶ್ರೀಸಂಸ್ಥಾನದವರೊಂದಿಗೆ ಸಂವಾದ, ಎನ್. ರವಿಶಂಕರ್ ಸಂವಾದಕರಾಗಿ ಪಾಲ್ಗೊಳ್ಳುವರು. ಮಂತ್ರಾಲಯ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮ ಜರುಗಲಿದೆ.