ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ.ಆರ್. ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ (underpasses) ಭಾನುವಾರ (ಮೇ 21) ಸುರಿದ ಭಾರಿ ಮಳೆಗೆ (Bangalore Rain) ಮೃತಪಟ್ಟಿದ್ದ ಯುವತಿ ಭಾನುರೇಖಾಳ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ಮೂಲಕ ವಿಜಯವಾಡಕ್ಕೆ ಮೃತದೇಹದೇಹವನ್ನು ಕುಟುಂಬಸ್ಥರು ಕೊಂಡೊಯ್ದರು. ಬೆಳಗ್ಗೆ ಮಾರ್ಥಾಸ್‌ನಿಂದ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾಕ್ಕೆ ರವಾನೆ ಮಾಡಲಾಗಿತ್ತು.
ಇದನ್ನೂ ಓದಿ: Karnataka Assembly: ಹಿಂದುತ್ವ-ಗೋಮಾತೆ ಹೆಸರಲ್ಲಿ ಯತ್ನಾಳ್, ಸತ್ಯಸಾರಮಣಿ ಹೆಸರಲ್ಲಿ ಭಾಗೀರಥಿ ಮುರುಳ್ಯ ಪ್ರಮಾಣ
ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೇಸ್
ಈ ಪ್ರಕರಣದ ಕುರಿತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವತಿ ಸಹೋದರ ಸಂದೀಪ್ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ್ದು, ನೀರು ಹೊರ ಹೋಗಲು ಸೂಕ್ತ ಕ್ರಮ ಕೈಗೊಳ್ಳದ ಬಗ್ಗೆ ದೂರು ನೀಡಲಾಗಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸರು ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಅಸಹಜ ಸಾವು ಪ್ರಕರಣ ಎಂದು ದಾಖಲಿಸಲಾಗಿದೆ.
ಘಟನೆ ಹೇಗೆ ನಡೆದಿತ್ತು?
ಆಂಧ್ರ ಮೂಲದ ಭಾನುರೇಖಾ ಕುಟುಂಬಸ್ಥರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಒಂದೇ ಕುಟುಂಬದ ಒಟ್ಟು ಆರು ಜನ ಕಾರಿನಲ್ಲಿದ್ದರು. ಡ್ರೈವರ್ ಸೇರಿ ಏಳು ಜನರಿದ್ದರು. ಸಮಿತಾ (13), ಸೋಹಿತಾ (15), ಸಂಭ್ರಾಜ್ಯಂ (65), ಭಾನುರೇಖಾ (22) ಹರೀಶ್ ಸ್ವರೂಪ (47), ಸಂದೀಪ್ (35) ಕಾರಿನಲ್ಲಿದ್ದರು.
ಅಂಡರ್‌ಪಾಸ್‌ನಲ್ಲಿ ಕಾರು ಇಳಿಯುತ್ತಿದ್ದಂತೆ, ನೀರು ಹೆಚ್ಚಾಗುತ್ತಿದೆ, ಕಾರು ಮುಂದೆ ಹೋಗುವುದಿಲ್ಲ, ಹೀಗಾಗಿ ಎಲ್ಲರೂ ಕೆಳಗಿಳಿಯಿರಿ ಎಂದು ಚಾಲಕ ಹೇಳಿದ್ದ. ಆದರೆ, ಕಾರು ಮೂವ್ ಮಾಡಿ, ಹೋಗಬಹುದು ಎಂದು ಡ್ರೈವರ್‌ಗೆ ಇವರು ಒತ್ತಾಯಿಸಿದರು. ಈ ವೇಳೆ ಚಾಲಕ ಕಾರು ಮುಂದೆ ಬಿಡುತ್ತಿದ್ದಂತೆ ಕ್ಷಣ ಕ್ಷಣಕ್ಕೂ ಅಂಡರ್‌ಪಾಸ್ ಒಳಗೆ ನೀರು ಹೆಚ್ಚಾಗುತ್ತಾ ಹೋಯಿತು. ಇಂಜಿನ್‌ಗೆ ನೀರು ತುಂಬಿಕೊಂಡು ಬ್ಲಾಕ್ ಆಯಿತು. ನಂತರ ಕಾರು ರೀಸ್ಟಾರ್ಟ್ ಮಾಡಲು ಸಾಧ್ಯವಾಗಿರಲಿಲ್ಲ.
ಇದನ್ನೂ ಓದಿ: Missing Case: ತುಮಕೂರಲ್ಲಿ ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ; ಆತಂಕದಲ್ಲಿ ಪೋಷಕರು
ಅಷ್ಟರಲ್ಲೇ ನೀರು ಕಾರಿನ ಡೋರ್‌ನ ಮಟ್ಟಕ್ಕೆ ಬಂದಿದ್ದು, ನಂತರ ಡೋರ್ ಬ್ಲಾಕ್ ಆಗಿ ತೆಗೆಯಲು ಕಷ್ಟವಾಯಿತು. ಈ ವೇಳೆ ಡ್ರೈವರ್ ಡೋರ್ ತೆಗೆದು ಒಬ್ಬೊಬ್ಬರನ್ನೇ ಕೆಳಗೆ ಇಳಿಸಲು ಪ್ರಯತ್ನಿಸಿದ್ದಾನೆ. ಅಷ್ಟರಲ್ಲಾಗಲೇ ಒಳಗಡೆ ಇದ್ದ ಭಾನುರೇಖಾ ಸಾಕಷ್ಟು ನೀರು ಕುಡಿದಿದ್ದರು. ನೀರು ಕುಡಿದು ಪ್ರಜ್ಞೆ ಕಳೆದುಕೊಂಡಿದ್ದರು. ನಂತರ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಒಬ್ಬೊಬ್ಬರನ್ನೇ ರಕ್ಷಣೆ ಮಾಡಿದ್ದರು. ನಂತರ ಎಲ್ಲರನ್ನೂ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆ ತಂದಿದ್ದರು. ಬಂದ ಕೂಡಲೇ ಭಾನುರೇಖಾ ಅವರನ್ನು ಪರೀಕ್ಷಿಸಿದ ಆಸ್ಪತ್ರೆ ವೈದ್ಯರು, ಅವರು ಮೃತಪಟ್ಟಿದ್ದನ್ನು ಖಚಿತಪಡಿಸಿದ್ದರು.