Bhatkal News: ವೈದ್ಯಾಧಿಕಾರಿ, ಶುಶ್ರೂಶಕಿಯರ ಮೇಲೆ ಅವಾಚ್ಯ ಶಬ್ದದಿಂದ ನಿಂದನೆ, ಕೊಲೆ ಬೆದರಿಕೆ; ಯುವಕ ಪರಾರಿ - Vistara News

ಉತ್ತರ ಕನ್ನಡ

Bhatkal News: ವೈದ್ಯಾಧಿಕಾರಿ, ಶುಶ್ರೂಶಕಿಯರ ಮೇಲೆ ಅವಾಚ್ಯ ಶಬ್ದದಿಂದ ನಿಂದನೆ, ಕೊಲೆ ಬೆದರಿಕೆ; ಯುವಕ ಪರಾರಿ

Bhatkal News: ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ, ಶುಶ್ರೂಕಿಯರಿಗೆ ಅವಾಚ್ಯ ಶಬ್ದದಿಂದ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Bhatkal Taluk Hospital
ಭಟ್ಕಳ ತಾಲೂಕು ಆಸ್ಪತ್ರೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಟ್ಕಳ: ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ( medical officer) ಮತ್ತು ಶುಶ್ರೂಶಕಿಯರಿಗೆ ಯುವಕನೊಬ್ಬ ಅವಾಚ್ಯ ಶಬ್ದದಿಂದ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿರುವ ಘಟನೆ ನಡೆದಿದೆ.

ಆರೋಪಿ ಯುವಕನನ್ನು ಹನುಮಾನ ನಗರ ನಿವಾಸಿ ಸಂಜಯ ನಾಯ್ಕ ಎಂದು ಗುರುತಿಸಲಾಗಿದೆ. ಈತ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ಮತ್ತು ಶುಶ್ರೂಶಕಿಯರಿಗೆ ಅವಾಚ್ಯ ಶಬ್ದದಿಂದ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ವಿಚಾರಿಸಲು ಹೋದ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಮಾಡಿ, ಆತಂಕವನ್ನುಂಟು ಪಡಿಸಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: SC ST Reservation : ಬಾಗಲಕೋಟೆ ತಾಂಡಾಗಳಲ್ಲೂ ಆಕ್ರೋಶ; ಬಿಜೆಪಿ ಧ್ವಜ ತೆರವು, ಪ್ರವೇಶ ನಿರಾಕರಿಸಿ ಪೋಸ್ಟರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Uttara Kannada News: ಯಲ್ಲಾಪುರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ಜರುಗಿತು.

VISTARANEWS.COM


on

Uttara Kannada Lok Sabha constituency Congress candidate Dr Anjali Nimbalkar latest statement
Koo

ಯಲ್ಲಾಪುರ: ಇದು ನಾಯಕರ ಚುನಾವಣೆಯಲ್ಲ, ಪ್ರತಿ ಕಾರ್ಯಕರ್ತರ ಚುನಾವಣೆ. ರಾಜ್ಯದಲ್ಲಿ ಕಾಂಗ್ರೆಸ್ (Congress) ಅಲೆ ಇದೆ ಎಂದು‌ ಚುನಾವಣೆಯನ್ನು ಬಹಳ ಸುಲಭವಾಗಿ ಪರಿಗಣಿಸಬಾರದು ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ (Uttara Kannada News) ತಿಳಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರಕನ್ನಡ ಲೋಕಸಭಾ ಕ್ಷೇತ್ರ ದೊಡ್ಡದು. ಐದು ಜನ ಶಾಸಕರು ನಮ್ಮವರಿದ್ದು, ನಾವೆಲ್ಲರೂ ಸೇರಿ ಕೆಲಸ ಮಾಡಿ ಈ ಬಾರಿ ಗೆಲುವು ಸಾಧಿಸಬೇಕಿದೆ. ಪ್ರತಿ ಹಳ್ಳಿಗಳಿಗೆ ನನಗೆ ಪ್ರಚಾರಕ್ಕೆ ತೆರಳಲು ಕಷ್ಟವಿದೆ, ಸಮಯದ ಕೊರತೆ ಇದೆ. ಹೀಗಾಗಿ ಕಾರ್ಯಕರ್ತರು ನೀವೇ ಅಭ್ಯರ್ಥಿಯಾಗಿ ಪ್ರಚಾರ ಮಾಡಬೇಕು ಎಂದರು.

ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಪ್ರತಿ ಮನೆ ಮನೆಗೂ ಮುಟ್ಟಿದೆ. ಜನರ ಪರ ಕೆಲಸ ಮಾಡಬೇಕಾದರೆ ಅದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂಬ ನಂಬಿಕೆ ಜನರಲ್ಲಿದೆ. ಒಂದೊಂದು‌ ತಾಲೂಕಲ್ಲೂ ಒಂದೊಂದು ರೀತಿಯ ಸಮಸ್ಯೆಗಳಿವೆ. ಸಂಸದಳಾದರೆ ಶಾಸಕರು, ಸಚಿವರೊಂದಿಗೆ ಮಾತನಾಡಿ ತಾಲೂಕಾವಾರು ಸಮಸ್ಯೆಗಳನ್ನು ಪರಿಹಸರಿಲು ಚರ್ಚಿಸುತ್ತೇನೆ. ಇದು ನನ್ನ ಕ್ಷೇತ್ರ. ಜನ ವಿಶ್ವಾಸದಿಂದ ಆಶೀರ್ವದಿಸಿದರೆ ಜಿಲ್ಲೆಯ ಸಮಸ್ಯೆಗಳಿಗೆ ಹೋರಾಟಕ್ಕೆ ಸಿದ್ಧಳಿದ್ದೇನೆ ಎಂದರು.

ಇದನ್ನೂ ಓದಿ: Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮಾಜಿ ಶಾಸಕ ವಿ.ಎಸ್.ಪಾಟೀಲ ಮಾತನಾಡಿ, ಚುನಾವಣೆ ಸರಳವಲ್ಲ. ಎದುರಾಳಿಯನ್ನು ಎದುರಿಸುವ ಮನೋಭಾವ ನಮ್ಮಲ್ಲಿರಬೇಕು. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಆಗಲ್ಲ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದರು. ಆದರೆ ಐದೂ ಗ್ಯಾರಂಟಿಗಳನ್ನೂ ಜನರಿಗೆ ತಲುಪಿಸುವಲ್ಲಿ ಸಫಲರಾಗಿದ್ದೇವೆ. ಇದೀಗ ಡಾ.ಅಂಜಲಿ ನಿಂಬಾಳ್ಕರ್ ಅವರನ್ನ ಗೆಲ್ಲಿಸುವ ಮೂಲಕ ಮತ್ತೊಂದು ಗ್ಯಾರಂಟಿ ಕೊಡಬೇಕಿದೆ ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಮಾತನಾಡಿ, ಡಾ.ಅಂಜಲಿ ನಿಂಬಾಳ್ಕರ್ ಸುಶಿಕ್ಷಿತರು. ರೋಗಿಯ ಸೇವೆ ದೇವರ ಸೇವೆ ಎಂದುಕೊಂಡ ಅವರು, ಜನಸೇವೆಗಾಗಿ ರಾಜಕೀಯ ಆಯ್ದುಕೊಂಡರು. ಜಿಲ್ಲೆಯ ಸಮಸ್ಯೆಗಳನ್ನು ದೆಹಲಿಯ ಮಟ್ಟಕ್ಕೆ ಮುಟ್ಟಿಸಬಲ್ಲ ಸಮರ್ಥರು‌. ಅವರು ಈ ಬಾರಿ ಗೆದ್ದು ಸಂಸತ್‌ನಲ್ಲಿ ನಮ್ಮ ಧ್ವನಿಯಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಭಟ್, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಉಲ್ಲಾಸ್ ಶಾನಭಾಗ, ಶ್ರೀನಿವಾಸ್ ಧಾತ್ರಿ, ಟಿ.ಸಿ.ಗಾಂವ್ಕರ್, ವಿ.ಎಸ್.ಭಟ್, ದೀಪಕ್ ದೊಡ್ಡೂರು, ರಾಘವೇಂದ್ರ ಭಟ್, ಎಂ.ಜಿ.ಭಟ್, ದೇವಿದಾಸ್ ಶಾನಭಾಗ, ವಿ.ಎನ್.ಭಟ್, ಮತ್ತಿತರರಿದ್ದರು.

ಇದನ್ನೂ ಓದಿ: Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

ಗ್ರಾಮದೇವಿಗೆ ವಿಶೇಷ ಪೂಜೆ

ಸಭೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರದ ಗ್ರಾಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Continue Reading

ಮಳೆ

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Rain News : ರಾಜ್ಯದಲ್ಲಿ ಮಳೆ ಕಾಣೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಹೀಟ್‌ ವೇವ್‌ ಅಲರ್ಟ್‌ (Heat wave Alert) ನೀಡಲಾಗಿದೆ. ಹವಾಮಾನ ಇಲಾಖೆ (karnataka Weather Forecast) ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಜತೆಗೆ ಮುಂದಿನ ಐದು ದಿನಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ಪ್ರಸ್ತುತ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಹವಾಮಾನ ಮೌಲ್ಯದ 90% ಮೀರಿದೆ. ಇನ್ನು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶಾಖ ಸೂಚ್ಯಂಕವು 40-50 ಡಿ.ಸೆ ವ್ಯಾಪ್ತಿಯಲ್ಲಿರಲಿದೆ.

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ. ಬಿಸಿಗಾಳಿ ಬೀಸಲಿದ್ದು, ಉರಿ ಬಿಸಿಲು ಜನರನ್ನು ತತ್ತರಿಸುವಂತೆ ಮಾಡಿದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ದಾಖಲಾಗಿದೆ. ಕೆಲವೊಮ್ಮೆ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

ಇನ್ನೂ ಬುಧವಾರದಂದು ರಾಜ್ಯಾದ್ಯಂತ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿ.ಸೆ ದಾಖಲಾಗಿತ್ತು. ಮಂಡ್ಯದ ಎಡಬ್ಲ್ಯೂಎಸ್‌ನಲ್ಲಿ ಕನಿಷ್ಠ ಉಷ್ಣಾಂಶ 16.7 ಡಿ.ಸೆ ಇತ್ತು. ಸರಾಸರಿ ಕನಿಷ್ಠ ಉಷ್ಣಾಂಶ ಕೋಲಾರದಲ್ಲಿ 18.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 40.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಬೆಂಗಳೂರು ನಗರ, ಕೋಲಾರ, ಹಾಸನ, ರಾಮನಗರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ನಿಂದ 18 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ನಿಂದ 44 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!


ಸಮ್ಮರ್‌ ಸೀಸನ್‌ನಲ್ಲಿ (Summer Fashion) ಇದೀಗ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ ಹೆಚ್ಚಾಗಿದೆ. ನೋಡಲು ಮಾತ್ರವಲ್ಲ, ಧರಿಸಿದಾಗ ಈ ಸೀಸನ್‌ನಲ್ಲಿ ಹೆಚ್ಚು ಸೆಕೆಯಾಗದಂತೆ, ಕಂಫರ್ಟಬಲ್‌ ಫೀಲ್‌ ಆಗುವಂತಹ ನಾನಾ ಡಿಸೈನ್ನ ಅದರಲ್ಲೂ ಲೈಟ್‌ವೈಟ್‌ ಫ್ಯಾಬ್ರಿಕ್‌ನ ತೋಳಿಲ್ಲದ ಈ ಗೌನ್‌ಗಳು ನಾನಾ ಡಿಸೈನ್‌ನಲ್ಲಿ ಮಾರುಕಟ್ಟೆಗೆ ಕಾಲಿಟ್ಟಿವೆ.

Summer Fashion

ಕಂಫರ್ಟಬಲ್‌ ಡಿಸೈನ್‌ ಗೌನ್‌

“ಸ್ಲಿವ್‌ಲೆಸ್‌ ಗೌನ್‌ಗಳು ಸಮ್ಮರ್‌ ಸೀಸನ್‌ನ ಟ್ರೆಂಡಿ ಗೌನ್‌ಗಳು ಎನ್ನಬಹುದು. ಇವು ಸೆಕೆಯಾಗುವುದಿಲ್ಲ. ಆರಾಮ ಎಂದೆನಿಸುತ್ತವೆ. ಇನ್ನು, ಈ ಸೀಸನ್‌ಗೆ ಪೂರಕ ಎಂಬಂತೆ, ಡಿಸೈನ್‌ಗಳನ್ನು ಹೊಂದಿರುತ್ತವೆ. ತೀರಾ ಟೈಟ್‌ ಫಿಟ್ಟಿಂಗ್‌ ಆಗಿರುವುದಿಲ್ಲ. ಅದರಲ್ಲೂ ಲೇಯರ್‌ ಇನ್ನರ್‌ ಲೈನಿಂಗ್‌ ಹೊಂದಿರುವುದಿಲ್ಲ. ಲೈಟ್‌ವೈಟಾಗಿರುತ್ತವೆ. ಅಂತಹ ಫ್ಯಾಬ್ರಿಕನ್ನೇ ಇವುಗಳನ್ನು ವಿನ್ಯಾಸ ಮಾಡಲು ಆಯ್ಕೆ ಮಾಡಲಾಗಿರುತ್ತದೆ. ವೆಡ್ಡಿಂಗ್‌ ಸೀಸನ್‌ಗೆ ಸೂಕ್ತವಾಗಿರುವುದು ಮಾತ್ರವಲ್ಲ, ಪಾರ್ಟಿವೇರ್‌ ಗೌನ್‌ಗಳು ಹಾಗೂ ಫೋಟೋಶೂಟ್‌ ಗೌನ್‌ಗಳು ಈ ಸೀಸನ್‌ಗೆ ತಕ್ಕಂತೆ ಬಿಡುಗಡೆಗೊಂಡಿವೆ” ಎನ್ನುತ್ತಾರೆ ಗೌನ್‌ ಡಿಸೈನರ್ ರಾಜನ್‌. ಅವರ ಪ್ರಕಾರ, ಇಂತಹ ಗೌನ್‌ಗಳು ಈ ಸೀಸನ್‌ಗೆಂದೇ ಸಿದ್ಧಪಡಿಸಲಾಗಿರುತ್ತದೆ ಎನ್ನುತ್ತಾರೆ.

Summer Fashion

ಟ್ರೆಂಡಿಯಾಗಿರುವ ಗೌನ್‌ ಡಿಸೈನ್ಸ್

ಸ್ಲಿವ್‌ಲೆಸ್‌ ಬಾರ್ಡರ್ ಗೌನ್ಸ್, ಎಥ್ನಿಕ್‌ ಡಿಸೈನ್ಸ್, ಸ್ಯಾಟಿನ್‌ ಗೌನ್ಸ್, ನೆಟ್ಟೆಡ್‌ ಸ್ಲಿವ್‌ಲೆಸ್‌ ಗೌನ್ಸ್, ಹಾಲ್ಟರ್‌ ನೆಕ್‌ ಗೌನ್ಸ್, ಸ್ವಿಂಗ್‌ ನೆಕ್‌ಲೈನ್‌ ಗೌನ್ಸ್, ಟೈಯಿಂಗ್‌ ಸ್ಲಿವ್‌ಲೆಸ್‌ ಗೌನ್ಸ್, ಶೋಲ್ಡರ್‌ಲೆಸ್‌ ಗೌನ್‌ಗಳು ಸೇರಿದಂತೆ ನಾನಾ ಬಗೆಯವು ಈ ಸೀಸನ್‌ಗೆ ಎಂಟ್ರಿ ನೀಡಿವೆ. ಇನ್ನು ಫುಲ್‌ಸ್ಲೀವ್‌ ಗೌನ್‌ಗಳು ಹಾಗೂ ಪಫ್‌ ಸ್ಲೀವ್‌, ಟೈಟ್‌ ಸ್ಲೀವ್‌ ಗೌನ್‌ಗಳು ಸದ್ಯಕ್ಕೆ ಸೈಡಿಗೆ ಸರಿದಿವೆ. ಮಾನ್ಸೂನ್‌ವರೆಗೂ ಇವು ಹಿಂದಿರುಗುವ ಯಾವುದೇ ಮುನ್ಸೂಚನೆಗಳು ಕಾಣುತ್ತಿಲ್ಲ ಎನ್ನುತ್ತಾರೆ ಸ್ಟೈಲಿಸ್ಟ್ ರಿಚಾ ಖಾನ್‌. ಅವರು ಹೇಳುವಂತೆ, ಈ ಸೀಸನ್‌ ಗೌನ್‌ಗಳು ಆದಷ್ಟೂ ಶಾರ್ಟ್ ಸ್ಲಿವ್‌ ಅಥವಾ ಸ್ಲಿವ್‌ಲೆಸ್‌ ಹೊಂದಿರುತ್ತವಂತೆ.

ಪಾರ್ಟಿವೇರ್‌ ಸ್ಲಿವ್‌ಲೆಸ್‌ ಗೌನ್‌ಗಳು

ಪಾರ್ಟಿವೇರ್‌ ಸ್ಲಿವ್‌ಲೆಸ್‌ ಗೌನ್‌ಗಳು ತೀರಾ ಉದ್ದವಾಗಿರುವುದಿಲ್ಲ! ಬದಲಿಗೆ ನೋಡಲು ಕೊಂಚ ಮ್ಯಾಕ್ಸಿಯಂತಿರುತ್ತವೆ. ಅಥವಾ ಲಾಂಗ್‌ ಸ್ಕರ್ಟ್‌ನಂತಿರುತ್ತವೆ. ಡಿಸೈನ್‌ಗಳು ಅಷ್ಟೇ! ಸಿಂಪಲ್‌ ಆಗಿರುತ್ತವೆ. ಕೊಂಚ ಶಿಮ್ಮರ್‌ ಆಗಿರುತ್ತವೆ ಎನ್ನುತ್ತಾರೆ ಡಿಸೈನರ್‌ ಡಿಂಪಲ್‌.

Summer Fashion

ಸ್ಲಿವ್‌ಲೆಸ್‌ ಗೌನ್‌ಗಳ ಆಯ್ಕೆಗೆ 3 ಟಿಪ್ಸ್

  • ಆದಷ್ಟೂ ಸಿಂಪಲ್‌ ಡಿಸೈನ್‌ ಆಯ್ಕೆ ಮಾಡಿ.
  • ಟ್ರೆಂಡಿ ಕಲರ್ಸ್ ಸೆಲೆಕ್ಟ್ ಮಾಡಿ.
  • ತೀರಾ ಟೈಟ್‌ ಆಗಿರುವುದು ಬೇಡ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ನಾನು ಉತ್ತರಕನ್ನಡದವಳಲ್ಲ ಎನ್ನುವ ಬಿಜೆಪಿಗರೂ ಪ್ರಚಾರಕ್ಕಾಗಿ ನನ್ನ ಕ್ಷೇತ್ರಕ್ಕೇ ಬರಬೇಕು: ನಿಂಬಾಳ್ಕರ್

Uttara Kannada News: ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ ಎಂದು ಅಂಜಲಿ ನಿಂಬಾಳ್ಕರ್‌ ಹೇಳಿದ್ದಾರೆ.

VISTARANEWS.COM


on

Uttara Kannada Lok Sabha Constituency Congress Candidate Dr. Anjali Hemant Nimbalkar spoke in Lok Sabha election pre meeting in Ankola
Koo

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲೇ ಇಂಡಿಗೋ, ಏರ್‌ ಇಂಡಿಯಾ ವಿಮಾನ ಡಿಕ್ಕಿ; ಪ್ರಯಾಣಿಕರಿಗೆ ಶಾಕ್!

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಡಬಲ್ ಎಂಜಿನ್ ಸರ್ಕಾರವಿದ್ದರೂ ಬಿಜೆಪಿಗರಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲು ಆಗಿಲ್ಲ. ಸುಳ್ಳು ಹೇಳುವುದಷ್ಟೇ ಬಿಜೆಪಿಗರ ಕೆಲಸವಾಗಿದೆ. ಈಗಾಗಲೇ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದರೊಂದಿಗೆ ಸುಸಜ್ಜಿತ ಇನ್ನೊಂದು ಆಸ್ಪತ್ರೆ ಕೂಡ ಶೀಘ್ರವೇ ನಿರ್ಮಾಣವಾಗಲಿದೆ. ನಮ್ಮ ಪಕ್ಷ ಒಬ್ಬ ವೈದ್ಯರನ್ನೇ ಈಗ ಲೋಕಸಭಾ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರ ಆಸೆ ಕೂಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡುವುದಾಗಿದೆ ಎಂದರು.

ಚುನಾವಣಾ ಪೂರ್ವ ಗ್ಯಾರಂಟಿ ಕಾರ್ಡ್ ಕೊಟ್ಟು ಮತ ಕೇಳಿದ್ದೆವು. ಈ ಬಾರಿ ಅದೇ ಗ್ಯಾರಂಟಿ ಯೋಜನೆಯ ಆಧಾರದಲ್ಲಿ ನಾವು ಮತ ಕೇಳಬೇಕಿದೆ. 30 ವರ್ಷ ಸಂಸತ್‌ನಲ್ಲಿ ಒಂದೇ ಒಂದು ಬಾರಿ ನಮ್ಮ ಜಿಲ್ಲೆಯ ಹೆಸರು ಕೇಳಿ ಬಂದಿಲ್ಲ. ಅರಣ್ಯ ಅತಿಕ್ರಮಣ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲೇ ಪರಿಹಾರ ಸಿಗಬೇಕಿದೆ. ಜಿಲ್ಲೆಯಲ್ಲಿರುವ ಅನೇಕ ಸಮಸ್ಯೆಗಳು ಕೂಡ ಕೇಂದ್ರದಿಂದ ಪರಿಹಾರವಾಗಬೇಕಿದೆ. ಅದಕ್ಕಾಗಿ ನಮ್ಮ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಆಯ್ಕೆ ಮಾಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ಕೆಪಿಸಿಸಿ ಸದಸ್ಯ ರಮಾನಂದ ನಾಯಕ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಮಾತನಾಡಿದರು.

ಇದನ್ನೂ ಓದಿ: Job Alert: ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಏ. 9ರೊಳಗೆ ಅರ್ಜಿ ಸಲ್ಲಿಸಿ

ಈ ವೇಳೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ, ಪ್ರಮುಖರಾದ ಜಿ.ಎಂ.ಶೆಟ್ಟಿ, ನಾರಾಯಣ ನಾಯಕ, ಬಿ.ಡಿ.ನಾಯಕ, ಶಂಭು ಶೆಟ್ಟಿ, ನವಾಜ್ ಶೇಖ್, ಆರ್.ಎಚ್.ನಾಯ್ಕ, ವಿನೋದ ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Karnataka Weather : ಮುಂದಿನ 5 ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಉತ್ತರ ಒಳನಾಡಲ್ಲಿ ಹೀಟ್‌ ವೇವ್‌!

Karnataka Weather : ಮುಂದಿನ ಮೂರು ದಿನಗಳ ಕಾಲ ಅಂದರೆ, ಮಾರ್ಚ್‌ 28ರಿಂದ 30ರವರೆಗೆ ಉತ್ತರ ಒಳನಾಡಿನ ಕೆಲವು ಕಡೆ ಹೀಟ್‌ ವೇವ್‌ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು ಮುಂದಿನ ನಾಲ್ಕೈದು ದಿನ 36 – 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

VISTARANEWS.COM


on

Karnataka Weather Heavy rains lash in Karnataka for next 5 days also Heat wave caution and Girl enjoying rain
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಅಂದರೆ (ಮಾ. 28 – ಏಪ್ರಿಲ್‌ 1) ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು – ಮಿಂಚುಗಳ ಸಹಿತ ಸಾಧಾರಣದಿಂದ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬೆಂಗಳೂರು ಮಾತ್ರ ಸೆಕೆಯಲ್ಲಿ ಮತ್ತಷ್ಟು ಬೇಯಲಿದೆ ಎಂದು ಅಂದಾಜಿಸಲಾಗಿದೆ. ಕಾರಣ, ಏಪ್ರಿಲ್‌ 2ರವರೆಗೆ ಗರಿಷ್ಠ ಉಷ್ಣಾಂಶವು 36 – 37 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ. ಇನ್ನು ರಾಜ್ಯದ ಹಲವು ನದಿಗಳಲ್ಲಿ ನೀರು ಬತ್ತಿರುವ ದೃಶ್ಯಗಳನ್ನು ನೆಟ್ಟಿಗರು ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಬರದ ಭೀಕರತೆಯ ದರ್ಶನ ಮಾಡಿಸಿದ್ದಾರೆ. ಹೀಗಾಗಿ ಕಾವೇರಿ ಕೊಳ್ಳ ಸೇರಿದಂತೆ ನದಿ ಒಡಲು ಇರುವ ಕಡೆಗಳಲ್ಲಿ ಉತ್ತಮ ಮಳೆಯಾಗಬಹುದು ಎಂಬ ನಿರೀಕ್ಷೆಯನ್ನು ಹೊಂದಲಾಗಿದೆ.

ಇದರ ಜತೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 2 – 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಲ್ಲಿ ಹೀಟ್‌ ವೇವ್‌!

ಮುಂದಿನ ಮೂರು ದಿನಗಳ ಕಾಲ ಅಂದರೆ, ಮಾರ್ಚ್‌ 28ರಿಂದ 30ರವರೆಗೆ ಉತ್ತರ ಒಳನಾಡಿನ ಕೆಲವು ಕಡೆ ಹೀಟ್‌ ವೇವ್‌ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಬಿಸಿಲಿನ ಬೇಗೆಯ ಜತೆಗೆ ಬಿಸಿ ಗಾಳಿಯನ್ನೂ ಜನರು ತಡೆದುಕೊಳ್ಳಬೇಕಿದೆ.

ಹಾಟ್‌ ಬೆಂಗಳೂರು

ಬೆಂಗಳೂರಲ್ಲಿ ಬಿಸಿಲಿನ ತೀವ್ರತೆ ಇರಲಿದ್ದು, ಸೆಕೆಯು ಕಾಡಲಿದೆ. ಇಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದ್ದು, ಹಾಲಿ 35 ಡಿಗ್ರಿ ಸೆಲ್ಸಿಯಸ್‌ ಇರುವ ಗರಿಷ್ಠ ಉಷ್ಣಾಂಶವು ಮುಂದಿನ ನಾಲ್ಕೈದು ದಿನ 36 – 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಲಾಗಿದೆ. ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ಶಿವಮೊಗ್ಗ, ದಾವಣಗೆರೆಯಲ್ಲಿ ಗುಡುಗಿನೊಂದಿಗೆ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ ಸೇರಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಮಳೆಯಾಗಬಹುದು ಎಂದು ಹೇಳಲಾಗಿದೆ.

ಉತ್ತರ ಕರ್ನಾಟಕದಲ್ಲಿ ಕೆಲವು ಕಡೆ ಅಲ್ಪ ಮಳೆ

ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಅಲ್ಪ ಪ್ರಮಾಣದ ಮಳೆಯಾಗುವ ಸಂಭವ ಇದೆ. ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಕರಾವಳಿ – ಮಲೆನಾಡಲ್ಲಿ ಸಾಧಾರಣ ಮಳೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯನ್ನು ಹೊಂದಲಾಗಿದೆ.

ಇದನ್ನೂ ಓದಿ: Summer Skincare: ಬೇಸಿಗೆಯಲ್ಲಿ ನಿಮ್ಮ ಚರ್ಮ ಕಪ್ಪಾಗದಂತೆ ತಡೆಯಲು ಹೀಗೆ ಮಾಡಿ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 35 ಡಿ.ಸೆ – 21 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 23 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 41 ಡಿ.ಸೆ – 26 ಡಿ.ಸೆ
ಬೆಳಗಾವಿ: 37 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ

ದುಬಾರೆಯ ಪರಿಸ್ಥಿತಿ ಹೇಗಿದೆ ನೋಡಿ!

ಕಾವೇರಿ ನದಿಯಲ್ಲೂ ನೀರಿಲ್ಲ

ಮಳೆ ಇಲ್ಲದೆ ಕರ್ನಾಟಕದ ಬಹುತೇಕ ನದಿಗಳು ಬತ್ತುವ ಹಂತವನ್ನು ತಲುಪಿವೆ. ನೀರಿಲ್ಲದೆ ನದಿ ಮಾರ್ಗಗಳು ಒಣಗಿ ಹೋಗಿವೆ. ಖಾಲಿ ರಸ್ತೆಯಂತಾಗಿವೆ. ಕಾವೇರಿ ನದಿ ತೀರದ ಪ್ರದೇಶದಲ್ಲಿರುವ ದುಬಾರೆ ಪರಿಸ್ಥಿತಿ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಕೊಡಗು ಕನೆಕ್ಟ್‌ ಎಂಬ ಖಾತೆಯಲ್ಲಿ ಫೋಟೊಗಳನ್ನು ಪೋಸ್ಟ್‌ ಮಾಡಲಾಗಿದೆ. ಇದು ನೀರಿನ ಕೊರತೆಯ ತೀವ್ರತೆಯನ್ನು ಎತ್ತಿ ತೋರಿಸುತ್ತದೆ.

Continue Reading
Advertisement
BJP State Vice President Malavika Avinash latest statement
ಬೆಂಗಳೂರು1 min ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 20242 mins ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Uttara Kannada Lok Sabha constituency Congress candidate Dr Anjali Nimbalkar latest statement
ಉತ್ತರ ಕನ್ನಡ5 mins ago

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Rameswaram cafe bomb blast case
ಬೆಂಗಳೂರು30 mins ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rajasthan Royals
ಪ್ರಮುಖ ಸುದ್ದಿ42 mins ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

SBI Debit Cards
ವಾಣಿಜ್ಯ45 mins ago

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

Rishabh Pant -IPL 2024
ಕ್ರೀಡೆ1 hour ago

Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

Parliament Flashback
ಕರ್ನಾಟಕ2 hours ago

Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

Lok Sabha Election 2024 HD Kumaraswamy to file nomination for Mandya Lok Sabha seat on April 4
ಕರ್ನಾಟಕ2 hours ago

Lok Sabha Election 2024: ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆ ಯಶಸ್ವಿ; ಏ. 4ಕ್ಕೆ ಹೆಚ್ಡಿಕೆ ನಾಮಪತ್ರ ಸಲ್ಲಿಕೆ

IPL 2024- Jayadev Unadkat
ಕ್ರೀಡೆ2 hours ago

IPL 2024 : ಐಪಿಎಲ್ ಇತಿಹಾಸದಲ್ಲಿ ವಿಭಿನ್ನ ಸಾಧನೆ ಮಾಡಿದ ಎಸ್​ಆರ್​​ಎಚ್​​ ಬೌಲರ್​ ಉನಾದ್ಕಟ್​

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20247 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20249 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌