ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಬಂಧಿಸಲಾಗಿದೆ.
ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ರೂಪಾಯಿ ವಂಚಿಸಿದ್ದ ಆರೋಪ ಇವರ ವಿರುದ್ಧ ಕೇಳಿಬಂದಿತ್ತು. ಹೀಗಾಗಿ ನಿಗಮದ ಎಂ.ಡಿ ಲೀಲಾವತಿ, ಜನರಲ್ ಮ್ಯಾನೇಜರ್ ನಾಗರಾಜಪ್ಪ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿತ್ತು. ತನಿಖೆಗೆ ಅಗತ್ಯ ದಾಖಲೆಗಳನ್ನ ಸಲ್ಲಿಸದ ಹಿನ್ನೆಲೆಯಲ್ಲಿ ಲೀಲಾವತಿ ಅವರನ್ನು ಬಂಧಿಸಲಾಗಿದ್ದು, ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇನ್ನು ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಅವರ ವಿರುದ್ಧ ತನಿಖೆ ಮುಂದುವರಿದಿದೆ. ಮಾಗಡಿ ರಸ್ತೆಯ ಸನ್ ಫ್ಲವರ್ ಅಪಾರ್ಟ್‌ಮೆಂಟ್‌ನಲ್ಲಿರುವ ನಾಗರಾಜಪ್ಪ ಅವರ ಫ್ಲ್ಯಾಟ್ ಮೇಲೆ ಕೂಡ ಎಸಿಬಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ವಿಜಯನಗರದಲ್ಲಿರವ ಮನೆ, 1 ಕಾರು, ದ್ವಿಚಕ್ರ ವಾಹನ, 26 ಸಾವಿರ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಬೇನಾಮಿ ಹೆಸರಿನ ಖಾತೆಯಲ್ಲಿ 29.40 ರೂಪಾಯಿ ಠೇವಣಿ ಪತ್ತೆಯಾಗಿದೆ.
ಇದನ್ನೂ ಓದಿ | ಭೋವಿ ಅಭಿವೃದ್ಧಿ ನಿಗಮ ನಿರ್ದೇಶಕ ರವಿಕುಮಾರ್ ವಿರುದ್ಧ ಎಫ್‌ಐಆರ್