ಸಾಗರ: ಇಲ್ಲಿನ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಶ್ರೀ ಶಾರದಾಂಬಾ ದೇವಸ್ಥಾನದ ಪಕ್ಕದಲ್ಲಿ ನೂತನ ವಾಣಿಜ್ಯ ಸಂಕೀರ್ಣಕ್ಕೆ (commercial complex) ಈಚೆಗೆ ಭೂಮಿಪೂಜೆ (Bhumi Puja) ನೆರವೇರಿಸಲಾಯಿತು.
ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಚಾರೋಡಿ ಕೊಂಕಣಿ ಆಚಾರ್ ಸಮಾಜದ ಅಧ್ಯಕ್ಷ ಕೆ.ವಿ.ಜಯರಾಮ್, ಶೃಂಗೇರಿ ಜಗದ್ಗುರುಗಳ ಆಶೀರ್ವಾದದಿಂದ ಈ ದಿನ ಭೂಮಿಪೂಜೆ ನೆರವೇರಿಸಲಾಗಿದೆ. ವಾಣಿಜ್ಯ ಸಂಕೀರ್ಣವನ್ನು ಅತ್ಯಂತ ಸುಂದರವಾಗಿ ನಿರ್ಮಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗುತ್ತಿದ್ದು, ಶೀಘ್ರದಲ್ಲಿಯೆ ಶೃಂಗೇರಿ ಶ್ರೀಗಳ ಸಾನಿಧ್ಯದಲ್ಲಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆಗೊಳಿಸುವ ಜತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಚಾರೋಡಿ ಕೊಂಕಣಿ ಆಚಾರ್ ಸಮಾಜ ತಾಲೂಕಿನಲ್ಲಿ ಸಣ್ಣ ಪ್ರಮಾಣದಲ್ಲಿದ್ದರೂ ದಶಕಗಳಿಂದ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ವಾಣಿಜ್ಯ ಸಂಕೀರ್ಣ ಭೂಮಿಪೂಜೆ ಕಾರ್ಯಕ್ರಮಕ್ಕೆ ಸಮಾಜದ ಹಿಂದಿನ ಎಲ್ಲ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿರುವುದು ಸಂಘಟನೆ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಹಾಲಿ ದೇವಸ್ಥಾನದ ಪಕ್ಕದಲ್ಲಿ ಸುಸಜ್ಜಿತವಾದ ಸಭಾಭವನ ನಿರ್ಮಿಸಿದ್ದು ಎಲ್ಲ ವರ್ಗದ ಜನರಿಗೂ ಶುಭ ಸಮಾರಂಭಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: Chandrayaan 3 : ಮಿಷನ್ ಚಂದ್ರಯಾನ 3 ಯಶಸ್ಸಿನಲ್ಲಿ ಒಂದೇ ಊರಿನ ಮೂವರು ವಿಜ್ಞಾನಿಗಳು ಭಾಗಿ!
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ವಿ.ಚಂದ್ರಶೇಖರ್, ಕಾರ್ಯದರ್ಶಿ ರಾಘವೇಂದ್ರ ವಿ., ಚಾರೋಡಿ ಕೊಂಕಣಿ ಆಚಾರ್ ಸಮಾಜದ ರಾಜ್ಯಾಧ್ಯಕ್ಷ ರಾಮಚಂದ್ರ ಶಿರೂರ್‍ಕರ್, ಪ್ರಮುಖರಾದ ಲಕ್ಷ್ಮಣ್ ಜಾಯಾ ಮೇಸ್ತ ಹೊನ್ನಾವರ, ಸುಬ್ರಾಯ ಮೇಸ್ತ, ಉಮೇಶ್ ಮೇಸ್ತ ಉಜ್ಜಾಡಿ, ರುಕ್ಮಾನಂದ ಶಿವಮೊಗ್ಗ, ವಸಂತ ಮೇಸ್ತ ಕುಂದಾಪುರ, ಹರೀಶ್ಚಂದ್ರ ಶಿರಸಿ, ರಾಘವೇಂದ್ರ ಬೆಂಗಳೂರು ಇನ್ನಿತರರು ಹಾಜರಿದ್ದರು.