ಔರಾದ್: ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ (Patients) ಆರೋಗ್ಯವನ್ನು (Health) ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ್ ಶಿಂಧೆ ಭೇಟಿ ನೀಡಿ ವಿಚಾರಿಸಿದರು.
ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾದ ಹಾಗೂ ಇಲ್ಲಿಯವರೆಗೆ ಗುಣಮುಖರಾದವರ ಬಗ್ಗೆ ಮಾಹಿತಿ ಪಡೆದರು. ಪ್ರತಿಯೊಬ್ಬ ರೋಗಿಯ ವೈಯಕ್ತಿಕ ಕಾಳಜಿ ವಹಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ICC Champions Trophy 2013: ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ಗೆಲುವಿಗೆ ಇಂದು 10ನೇ ವರ್ಷದ ಸಂಭ್ರಮ
ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವಿದ್ದು, ಆಸ್ಪತ್ರೆಯ ಯಾವುದೇ ಅಭಿವೃದ್ಧಿ ಕೆಲಸವಾದರೂ ನನಗೆ ತಿಳಿಸಿ ಸರ್ಕಾರದ ಗಮನಕ್ಕೆ ತಂದು ಅನುದಾನ ತರುವುದಾಗಿ ವೈದ್ಯರಿಗೆ ಭರವಸೆ ನೀಡಿದರು. ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ವೈದ್ಯರಿಗೆ ತಿಳಿಸಿದರು.
ಕರಕ್ಯಾಳ ಗ್ರಾಮದಲ್ಲಿ ಆಗಿರುವ ಪ್ರಕರಣ ಗಂಭೀರವಾಗಿದ್ದು, ತಾಲೂಕಿನ ಆಯಾ ಗ್ರಾ.ಪಂ ವ್ಯಾಪ್ತಿಯಲ್ಲಿ ಕುಡಿವ ನೀರನ್ನು ವ್ಯವಸ್ಥಿತವಾಗಿ ಪೂರೈಕೆ ಮಾಡುವುದರ ಜತೆಗೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು.
ಸ್ಥಗಿತಗೊಂಡ ಶುದ್ಧ ಕುಡಿವ ನೀರಿನ ಘಟಕಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದು ಎಲ್ಲವನ್ನು ಸರಿಪಡಿಸಬೇಕು ಎಂದರು.
ಜನರ ಸಮಸ್ಯೆಗೆ ಸ್ಪಂದಿಸಿ
ಗ್ರಾ.ಪಂ ಪಿಡಿಒಗಳು ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಡಾ. ಭೀಮಸೇನರಾವ್ ಶಿಂಧೆ ಹೇಳಿದರು. ಕುಡಿವ ನೀರು, ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು. ಕುಡಿವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಕರ್ತವ್ಯ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕಾಗಿ ಸರ್ಕಾರಕ್ಕೆ ಪತ್ರ ಬರೆಯುವದಾಗಿ ಶಿಂಧೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Hema Malini : ಪತಿ ಧರ್ಮೇಂದ್ರರ ಮೊದಲ ಪತ್ನಿಯ ಮಗನ ಮದುವೆಗೆ ಹೋಗದ ಹೇಮಾ ಮಾಲಿನಿ!
ಈ ವೇಳೆ ಪಪಂ ಮಾಜಿ ಅಧ್ಯಕ್ಷ ಸುನಿಲಮಾರ್ ದೇಶಮುಖ, ಕಾಂಗ್ರೆಸ್ ಮುಖಂಡ ಡಾ. ಮಹೇಶ ಫುಲಾರಿ, ಆಡಳಿತ ವೈದ್ಯಾಧಿಕಾರಿ ಡಾ. ರಮಣ ಪೋಕಲವಾರ್, ಡಾ. ರಾಜಕುಮಾರ್ ಬುಕ್ಕಾ ಸೇರಿದಂತೆ ಅನೇಕರಿದ್ದರು.