ಬಸವಕಲ್ಯಾಣ: ಬೀದಿನಾಯಿಯೊಂದರ ಹಾವಳಿ (Stray dog) ಮಿತಿಮೀರಿದ್ದು, ತಾಲೂಕಿನ ವಿವಿಧೆಡೆ ಕಳೆದ ಎರಡು ವಾರದಲ್ಲಿ 15ಕ್ಕೂ ಹೆಚ್ಚು ಜನರಿಗೆ ಕಚ್ಚಿ (Bitten) ಗಾಯಗೊಳಿಸಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ತಾಲೂಕಿನ ನಾರಾಯಣಪುರ, ನಾರಾಯಣಪುರವಾಡಿ ಶಿವಪುರ ಸೇರಿದಂತೆ ಐದಕ್ಕೂ ಹೆಚ್ಚು ಗ್ರಾಮಗಳ ಸುಮಾರು 15ಕ್ಕೂ ಹೆಚ್ಚು ಜನರಿಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದ್ದು, ಗಾಯಗೊಂಡವರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: Dr Alok Mohan IPS: ನೂತನ ಡಿಜಿ-ಐಜಿಪಿ ಅಲೋಕ್ ಮೋಹನ್ ಅಧಿಕಾರ ಸ್ವೀಕಾರ
ಕಳೆದ ಎರಡು ವಾರದಿಂದ ದಿನಕ್ಕೆ ಇಬ್ಬರನ್ನಾದರೂ ಬೀದಿ ನಾಯಿಯು ಕಚ್ಚಿ ಗಾಯಗೊಳಿಸುತ್ತಿದ್ದು, ನಾಯಿಗೆ ಹುಚ್ಚು ಹಿಡಿದಿರುವ ಹಿನ್ನೆಲೆಯಲ್ಲಿ ಈ ರೀತಿ ವರ್ತಿಸುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಬೀದಿ ನಾಯಿ ಉಪಟಳವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಕೂಡಾ ಬೀದಿ ನಾಯಿಗಳ ನಿಯಂತ್ರಣಕ್ಕೆ ಬಸವಕಲ್ಯಾಣ ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಂದಾಗದಿರುವುದಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನು ಮನೆ ಬಳಿ ಆಟವಾಡುವ ಚಿಕ್ಕ ಮಕ್ಕಳ ಮೇಲೂ ದಾಳಿ ನಡೆಸಿ ಕಚ್ಚಿ ಗಾಯಗೊಳಿಸುತ್ತಿದೆ, ನಾಯಿಯ ಕಾಟದಿಂದಾಗಿ ರಸ್ತೆಯಲ್ಲಿ ಮಹಿಳೆಯರು, ವೃದ್ಧರು ಓಡಾಡಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: IPL 2023 : ಶುಭ್ಮನ್ ಗಿಲ್ ಸಹೋದರಿಗೆ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ
ಜಾನುವಾರುಗಳನ್ನು ಬಿಡದ ಬೀದಿನಾಯಿಯು ಏಕಾಏಕಿ ದಾಳಿ ನಡೆಸುತ್ತಿರುವುದರಿಂದ ಗ್ರಾಮಸ್ಥರು ಆತಂಕ ಪಡುವಂತಾಗಿದೆ. ಜನರ ಮೇಲೆ ದಾಳಿ ನಡೆಸುತ್ತಿರುವ ಬೀದಿ ನಾಯಿ ನಿಯಂತ್ರಣಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.