ಬೀದರ್: ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಜಿಲ್ಲೆಯ ಹುಲಸೂರ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ 9ನೇ ಅಂತರಾಷ್ಟ್ರೀಯ ಯೋಗ ದಿನ (International Yoga Day) ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು ಸೂರ್ಯಕಾಂತ ಪಾಟೀಲ್ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗ ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Video Viral: ಉಚಿತ ಬಸ್‌ನಲ್ಲಿ ಹೆಚ್ಚಿದ ಮಹಿಳೆಯರ ʼಶಕ್ತಿʼ; ಡ್ರೈವರ್ ಸೀಟ್‌ನಿಂದಲೇ ಹತ್ತಿದ ನಾರಿಯರು!
ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ನವೀನ್ ಕುಮಾರ್ ದಾಮ ಅವರು ಶಾಲೆಯ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.