ಬೀದರ್: ನಮ್ಮ ಸರ್ಕಾರಿ ಶಾಲೆಗಳು (Government schools) ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ, ಸರ್ಕಾರಿ ಶಾಲೆಯಲ್ಲಿ ಎಲ್ಲ ತರಹದ ಸೌಲಭ್ಯ ಕಲ್ಪಿಸಲಾಗಿದೆ, ಉತ್ತಮ ಶಿಕ್ಷಣ (Good education) ದೊರೆಯುತ್ತದೆ ಹೀಗಾಗಿ ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ರೇಕುಳಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿರುವ ಸಮಸ್ಯೆ ಕುರಿತು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಮಂಗಳವಾರ ಶಾಲೆಗೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರಿ ಶಾಲೆಯ ಮಕ್ಕಳು ಹೆಚ್ಚು ಬುದ್ಧಿವಂತರಾಗಿರುತ್ತಾರೆ, ಅವರಿಗೆ ಶಿಕ್ಷಕರು ಹೆಚ್ಚಿನ ಸಮಯಕೊಟ್ಟು ಶಿಕ್ಷಣ ನೀಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: BrahMos missile : ಆಕಸ್ಮಿಕವಾಗಿ ಪಾಕಿಸ್ತಾನದೊಳಗೆ ಬಿದ್ದಿದ್ದ ಬ್ರಹ್ಮೋಸ್ ಕ್ಷಿಪಣಿ; ಭಾರತಕ್ಕಾದ ನಷ್ಟ ಎಷ್ಟು ಕೋಟಿ ರೂ?
ಶಾಲೆಯಲ್ಲಿನ ಕೊಠಡಿಗಳ ದ್ವಾರ, ಶೌಚಾಲಯ ಸಮಸ್ಯೆ ಮತ್ತು ಶಾಲೆಯ ಮೇಲ್ಛಾವಣಿ ಮಳೆಗಾಲದಲ್ಲಿ ಸೋರುತಿದೆ ಎಂದು ಶಿಕ್ಷಕರು ಶಾಸಕರ ಗಮನಕ್ಕೆ ತಂದರು. ಈ ವೇಳೆ ಶಾಸಕರು ಅಧಿಕಾರಿಯೊಂದಿಗೆ ಮಾತನಾಡಿ ಶೀಘ್ರದಲ್ಲೇ ಶಾಲೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಬಂದ ಬಟ್ಟೆ, ಪುಸ್ತಕಗಳನ್ನು ಮಕ್ಕಳಿಗೆ ವಿತರಿಸುವ ಮೂಲಕ ಶುಭ ಹಾರೈಸಿದರು.
ಇದನ್ನೂ ಓದಿ: Star Travel Fashion: ದುಬೈ ಡೆಸರ್ಟ್ ಸಫಾರಿಗೆ ನಟಿ ಸಂಜನಾ ಆನಂದ್ ಸಿಂಪಲ್ ಸ್ಟೈಲ್!
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಶೈಲಾಕುಮಾರಿ, ಮುಖಂಡರಾದ ಶಿವಕುಮಾರಸ್ವಾಮಿ, ಸಂತೋಷ ಹಳ್ಳಿಖೇಡ, ಎಸ್‌ಡಿಎಂಸಿ ಅಧ್ಯಕ್ಷ ರಾಜಶೇಖರ್ ವಗದಾಳೆ, ಗ್ರಾಮದ ಮುಖಂಡರಾದ ಬಸವರಾಜ ಬೋರಾಳ, ಮಹೇಶ್ ಹಚ್ಚಿ, ಸಚೀನ ಮಡಿವಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.