ಬೀದರ್: ಜಿಲ್ಲೆಯ ದಕ್ಷಿಣ ಕ್ಷೇತ್ರದ ಗುನ್ನಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅನುದಾನದಡಿಯ 12 ಲಕ್ಷ ರೂ. ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಭೂಮಿ ಪೂಜೆ (Bhumi Pooja) ನೆರವೇರಿಸಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು, ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: Reliance Jio: 9 ಪ್ರಶಸ್ತಿ ಗೆದ್ದ ರಿಲಯನ್ಸ್ ಜಿಯೋ! ಅಪ್‌ಲೋಡ್, ಡೌನ್‌ಲೋಡ್ ವೇಗದಲ್ಲಿ ನಂಬರ್ 1
ಗ್ರಾಮೀಣ ಪ್ರದೇಶದಲ್ಲಿ ಪಿಡಿಒ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅಭಿವೃದ್ಧಿ ಕೆಲಸಗಳನ್ನು ಮಾಡಲು ಮುಂದಾಗಬೇಕು, ಗ್ರಾಮೀಣ ಪ್ರದೇಶದ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಬೇಕು ಎಂದು ತಿಳಿಸಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿಯಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮಗಳಲ್ಲಿ ನಿವಾಸಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವಂತೆ ಶಾಸಕರಿಗೆ ಮನವಿ ಪತ್ರಗಳನ್ನು ಸಲ್ಲಿಸಿದರು.
ಇದನ್ನೂ ಓದಿ: Makeup Awareness: ಫೆಸ್ಟಿವ್ ಸೀಸನ್ ಮೇಕಪ್‌ಗೆ ಬ್ರೇಕ್ ನೀಡಿ! ತ್ವಚೆ ರಿಲ್ಯಾಕ್ಸ್ ಆಗಲು ಬಿಡಿ
ಈ ಸಂದರ್ಭದಲ್ಲಿ ಚಿಟ್ಟಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಗಾಳೆಪ್ಪ, ಗ್ರಾಪಂ ಪಿಡಿಒ ಸುನೀತಾ, ಮುಖಂಡರಾದ ಸುರೇಶ್ ಮಾಶೆಟ್ಟಿ, ಶಿವರಾಜ ಪಾಟೀಲ, ಚಂದ್ರಕಾಂತ ಪಾಟೀಲ, ಸೂರ್ಯಕಾಂತ ಬಿರಾದಾರ, ಲಕ್ಷ್ಮಣರಾವ ಸಿಂಧೋಲ, ಅನೀಲಕುಮಾರ್ ಗುನ್ನಳ್ಳಿ, ಜೋಸೆಫ್ ಕೊಡ್ಡೆಕರ್, ಕಂಟೆಪ್ಪ ಮನ್ನಳ್ಳಿ, ಓಂಕಾರ ಸುಲ್ತಾನಪುರ, ಸಂಗಮೇಶ ಗೋರನಳ್ಳಿ, ತುಳಸಿರಾಮ, ಶಿವಕುಮಾರ, ಮಾಣಿಕ, ಅಂಬಾದಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.