Site icon Vistara News

Bidar News: ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪದ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah inspected the work of new anubhava mantapa in Basavakalyan

ಬಸವಕಲ್ಯಾಣ: ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ವಿಶ್ವಜ್ಯೋತಿ ಬಸವಣ್ಣನವರ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ರಾಜ್ಯ ಸರ್ಕಾರದಿಂದ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಅನುಭವ ಮಂಟಪ ಕಾಮಗಾರಿ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿ, ಕಾಮಗಾರಿ (Bidar News) ಪರಿಶೀಲಿಸಿದರು.

ವಿಶ್ವಗುರು ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ ಹಿನ್ನಲೆಯಲ್ಲಿ ನಗರದ ರಥ ಮೈದಾನದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದ ನಂತರ ನಗರದ ಹೊರವಲಯದಲ್ಲಿ 101 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನುಭವ ಮಂಟಪ ಕಾಮಗಾರಿ ವೀಕ್ಷಿಸಿ, ಅನುಭವ ಮಂಟಪದ ಯೋಜನೆ ಕುರಿತು ಮಾಹಿತಿ ಪಡೆದರು.

ಇದನ್ನೂ ಓದಿ: Uttara Kannada News: ಮುರ್ಡೇಶ್ವರದಲ್ಲಿ ಮಾ.8 ರಂದು ಮಹಾಶಿವರಾತ್ರಿ ಜಾಗರಣೆ ಉತ್ಸವ

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನುಭವ ಮಂಟಪ ಕಾಮಗಾರಿಗೆ ಅನುದಾನದ ಕೊರತೆ ಇಲ್ಲ, ಈಗಾಗಲೇ 504 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವ ಜತೆಗೆ ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Kannada signboard rules: ಶೇ.60 ಕನ್ನಡ ಬಳಕೆ: ಮಾ. 12ಕ್ಕೆ ಎಲ್ಲ ಜಿಲ್ಲಾಧಿಕಾರಿಗಳಿಂದ ಅನುಷ್ಠಾನ ವರದಿ ಸಲ್ಲಿಕೆ

ಈ ಸಂದರ್ಭದಲ್ಲಿ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು, ಭಾಲ್ಕಿಯ ಶ್ರೀ ಗುರುಬಸವ ಪಟ್ಟದ್ದೇವರು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವರಾದ ಎಂ.ಬಿ.ಪಾಟೀಲ, ರಹಿಂ ಖಾನ್, ಎಂಎಲ್ಸಿಗಳಾದ ಡಾ. ಚಂದ್ರಶೇಖರ್ ಪಾಟೀಲ, ಭೀಮರಾವ ಪಾಟೀಲ, ಅರವಿಂದಕುಮಾರ ಅರಳಿ, ಮಾಜಿ ಎಂಎಲ್ಸಿ ವಿಜಯಸಿಂಗ್, ಕಾಂಗ್ರೆಸ್ ಪಕ್ಷದ ಮುಖಂಡ ಧನರಾಜ್ ತಾಳಂಪಳ್ಳಿ, ಮಾಲಾ ಬಿ. ನಾರಾಯಣರಾವ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version