ಹುಲಸೂರು: ಹುಲಸೂರಿನ ಎಂ.ಕೆ.ಕೆ.ಪಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಸವಕಲ್ಯಾಣದ ಡಾ. ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ಸಹಯೋಗದಲ್ಲಿ ಕಾಲೇಜಿನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಮತ್ತು ಸಂವಿಧಾನ ಆಶಯ ಮತ್ತು ಆದ್ಯತೆ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಭಾರತ ಸಂವಿಧಾನ ನೀಡಿದ ಹಕ್ಕುಗಳು ಮತ್ತು ಭಾರತೀಯರು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಎಲ್ಲರೂ ಅರಿಯಬೇಕಿದೆ. ಶಾಲಾ ಕಾಲೇಜಿನಲ್ಲಿ ಸಂವಿಧಾನದ ಪೀಠಿಕೆ ಬರೀ ವಾಚನವಾಗಬಾರದು. ಅದನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ಧಬಾಲೆ, ಬಸವಕಲ್ಯಾಣ ಶ್ರೀ ಬಸವೇಶ್ವರ ಪದವಿ ಕಾಲೇಜಿನ ಅಧ್ಯಾಪಕ ಡಾ. ಭೀಮಾಶಂಕರ ಬಿರಾದಾರ ಮಾತನಾಡಿದರು.
ಇದನ್ನೂ ಓದಿ: Ind vs Aus : ಕಾಂಗರೂ ಪಡೆಯನ್ನು ಹಿಮ್ಮೆಟ್ಟಿಸಿ ಸರಣಿ ಗೆಲ್ಲುವುದೇ ಸೂರ್ಯ ಬಳಗ?
ಕಾಲೇಜಿನ ಪ್ರಾಚಾರ್ಯ ಪ್ರೊ. ಮಲ್ಲಿಕಾರ್ಜುನ ಕಾಂಬಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂವಿಧಾನ ಕುರಿತ ಪ್ರಬಂಧ, ಭಾಷಣ, ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಇದನ್ನೂ ಓದಿ: ನ.30ರವರೆಗೆ ವರ್ಟಿಕಲ್ ಡ್ರಿಲಿಂಗ್, ಇನ್ನೂ 3 ದಿನ ಕಾರ್ಮಿಕರಿಗೆ ಸುರಂಗವೇ ಗತಿ
ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಶಿವರಾಜ್ ಖಪಲೆ, ಕಸಾಪ ಅಧ್ಯಕ್ಷ ನಾಗರಾಜ ಹಾವಣ್ಣ, ಉಪಾಧ್ಯಕ್ಷ ಬಸವಕುಮಾರ ಕವಟೆ, ವಲಯ ಅಧ್ಯಕ್ಷ ದೀಪಕ್ ಪಾಟೀಲ, ಸಿ.ಆರ್.ಸಿ. ಧರ್ಮೇಂದ್ರ ಭೋಸ್ಲೆ, ಪತ್ರಕರ್ತ ಮಹೇಶ್ ಹುಲಸೂಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಡಾ ಮಾರುತಿ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಡಾ ಕುಪೇಂದ್ರ ರಾಥೋಡ್ ನಿರೂಪಿಸಿದರು.