Site icon Vistara News

Bidar News: ಪ್ರಾಚಾರ್ಯ ಬಸವರಾಜ ಮೊಳಕೀರೆಗೆ ಕಲ್ಯಾಣ ಕರ್ನಾಟಕ ಎಜುಕೇಶನ್ ಐಕಾನ್ ಪ್ರಶಸ್ತಿ

Kalyana Karnataka Education Icon Award to Principal Basavaraja Molakire

ಭಾಲ್ಕಿ: ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಪದವಿಪೂರ್ವ ವಿಜ್ಞಾನ ಕಾಲೇಜಿನ (PU College) ಪ್ರಾಚಾರ್ಯ ಬಸವರಾಜ ಮೊಳಕೀರೆ ಅವರನ್ನು 2023ನೇ ಸಾಲಿನ ಕಲ್ಯಾಣ ಕರ್ನಾಟಕ ಎಜುಕೇಶನ್ ಐಕಾನ್ ಪ್ರಶಸ್ತಿಗೆ (Kalyana Karnataka Education Icon Award) ಆಯ್ಕೆ ಮಾಡಲಾಗಿದೆ.

ಬೀದರ್‌ನ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ಮಂಗಳವಾರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಸವರಾಜ ಮೊಳಕೀರೆ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಜಿಲ್ಲೆಯ ಪ್ರತಿಷ್ಠಿತ ಶ್ರೀ ಗುರು ನಾನಕ್‌ ಝೀರಾ ಸಾಹೀಬ್ ಫೌಂಡೇಶನ್ ವತಿಯಿಂದ ಪ್ರತಿವರ್ಷ ಶಿಕ್ಷಣ, ವೈದ್ಯಕೀಯ, ಸಾಮಾಜಿಕ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: Yadgiri News: ಕೈಗಾರಿಕೋದ್ಯಮಿಗಳು ಹೆಚ್ಚಿನ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರಬೇಕು: ದರ್ಶನಾಪುರ

ಈ ಬಾರಿ ಶೈಕ್ಷಣಿಕ ಕ್ಷೇತ್ರದಲ್ಲಿ ಅದರಲ್ಲೂ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನಡಿ ನಡೆಯುತ್ತಿರುವ ಕರಡ್ಯಾಳ ಚನ್ನಬಸವೇಶ್ವರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಬಸವರಾಜ ಮೊಳಕೀರೆ ಅವರನ್ನು ಶ್ರೀ ಗುರು ನಾನಕ್‌ ಝೀರಾ ಸಾಹೀಬ್ ಫೌಂಡೇಶನ್ ವತಿಯಿಂದ ನೀಡಲಾಗುವ ಕಲ್ಯಾಣ ಕರ್ನಾಟಕ ಎಜುಕೇಶನ್ ಐಕಾನ್ ಪ್ರಶಸ್ತಿಗೆ ಆಯ್ಕೆಗೆ ಮಾಡಲಾಗಿದೆ.

ಅಭಿನಂದನೆ

ಕಲ್ಯಾಣ ಕರ್ನಾಟಕ ಎಜುಕೇಶನ್ ಐಕಾನ್ ಪ್ರಶಸ್ತಿಗೆ ಆಯ್ಕೆ ಆಗಿರುವ ಪ್ರಾಚಾರ್ಯ ಬಸವರಾಜ ಮೊಳಕೀರೆ ಅವರನ್ನು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನ ರೆಡ್ಡಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Exit mobile version