ಬಸವಕಲ್ಯಾಣ: ವಿಶ್ವಗುರು, ಜಗಜ್ಯೋತಿ ಬಸವಣ್ಣನವರನ್ನು (Vishwaguru Basavanna) ಕರ್ನಾಟಕದ ಸಾಂಸ್ಕೃತಿಕ ನಾಯಕ (Karnataka Cultural Leader) ಎಂದು ಘೋಷಣೆ ಮಾಡಿದ ಹಿನ್ನಲೆಯಲ್ಲಿ ಗುರುವಾರ ಬಸವಣ್ಣನ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರದಿಂದ ಘೋಷಣೆಯಾಗುತಿದ್ದಂತೆ ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿವಿಧ ಬಸವಪರ ಸಂಘಟನೆಗಳ ಪ್ರಮುಖರು ಹಾಗೂ ಪದಾಧಿಕಾರಿಗಳು, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಇದನ್ನೂ ಓದಿ: Benefits of Consuming Whole Foods: ಸಂಪೂರ್ಣ ಆಹಾರಗಳು ನಮಗೇಕೆ ಬೇಕು?
ಬಸವ ಮಹಾಮನೆ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಇಂದು ರಾಜ್ಯ ಸರ್ಕಾರದಿಂದ ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಸಂತಸ ತಂದಿದೆ. ಬಸವಾಭಿಮಾನಿಗಳ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೆವೆ ಎಂದು ತಿಳಿಸಿದರು.
ಜಗತ್ತಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ, ಕಾಯಕ, ದಾಸೋಹದಂತಹ ಶ್ರೇಷ್ಠ ತತ್ವ ನೀಡಿ ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕನಾಗಿದ್ದಾನೆ. ಕರ್ನಾಟಕ ಅಷ್ಟೇ ಅಲ್ಲ, ನೆರೆಯ ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳು ಸಹ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Reliance Jio: 2024ರಲ್ಲೂ ಜಿಯೋ ಭಾರತದ ಸ್ಟ್ರಾಂಗೆಸ್ಟ್ ಬ್ರ್ಯಾಂಡ್! ನಂತರ ಸ್ಥಾನದ ಎಲ್ಐಸಿಗೆ
ಈ ಸಂದರ್ಭದಲ್ಲಿ ಅನುಭವ ಮಂಟಪದ ಸಂಚಾಲಕರಾದ ಶ್ರೀ ಶಿವಾನಂದ ದೇವರು, ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಬಸವರಾಜ ಕೋರ್ಕೆ, ವಿಶ್ವ ಸಮಿತಿ ಉಪಾಧ್ಯಕ್ಷ ಡಾ. ಜಿ.ಎಸ್. ಭುರಳೆ, ರಾಷ್ಟ್ರೀಯ ಬಸವ ದಳದ ತಾಲೂಕು ಅಧ್ಯಕ್ಷ ರವಿ ಕೋಳಕೂರ, ಪ್ರಮುಖರಾದ ಜಗನ್ನಾಥ ಖೂಬಾ, ವಿವೇಕ ಹೊದಲೂರೆ, ಮಲ್ಲಿಕಾರ್ಜುನ ಚಿರಡೆ, ಸುನೀಲ ಪಾಟೀಲ, ನಾಗಯ್ಯ ಸ್ವಾಮಿ, ಶ್ರೀಕಾಂತ್ ಬಡದಾಳೆ, ಭೀಮಾಶಂಕರ ಬಿರಾದಾರ, ಶರಣಪ್ಪ ಪರೆಪ್ಪ, ಸಿದ್ದು ಬಿರಾದಾರ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.