ಬೀದರ್
Bidar News: ಔರಾದ್‌ನಲ್ಲಿ ಉದ್ಯಮಿಯ ಸಂಶಯಾಸ್ಪದ ಸಾವು
Bidar News: ವ್ಯಕ್ತಿಯೋರ್ವ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆಯು ಔರಾದ್ ಪಟ್ಟಣದ ಅಮರೇಶ್ವರ ದೇವಸ್ಥಾನದ ಹಿಂಬದಿಯ ರುದ್ರಭೂಮಿಯ ಬಳಿ ಮಂಗಳವಾರ ಜರುಗಿದೆ.
ಔರಾದ್: ವ್ಯಕ್ತಿಯೊಬ್ಬರು ಸಂಶಯಾಸ್ಪದವಾಗಿ ಮೃತಪಟ್ಟಿರುವ (Suspicious Death) ಘಟನೆ ಪಟ್ಟಣದ ಅಮರೇಶ್ವರ ದೇವಸ್ಥಾನದ ಹಿಂಬದಿಯ ರುದ್ರಭೂಮಿಯ ಬಳಿ ಮಂಗಳವಾರ ನಡೆದಿದೆ.
ತಾಲೂಕಿನ ಬೋರಾಳ ಗ್ರಾಮದ ಬಾಬುರಾವ ಗಂಗಾಧರ್ ಪಾಂಡರೆ (54) ಮೃತ ವ್ಯಕ್ತಿ. ಬಹಿರ್ದೆಸೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ, ಅಲ್ಲದೇ ಮೃತ ವ್ಯಕ್ತಿಯ ಗುಪ್ತಾಂಗ ಮತ್ತು ಕೈ ಬೆರಳುಗಳು ಕತ್ತರಿಸಿರುವ ರೀತಿಯಲ್ಲಿ ಕಂಡುಬಂದಿದ್ದು, ಇದು ಸಂಶಯಾಸ್ಪದ ಸಾವು ಎಂದು ಮೃತನ ಪುತ್ರ ಸುಧೀರಕುಮಾರ ಪಾಂಡರೆ ದೂರು ನೀಡಿದ್ದಾರೆ. ಔರಾದ್ ಪಟ್ಟಣದ ಅಮರೇಶ್ವರ ದೇವಸ್ಥಾನದ ಬಳಿಯಲ್ಲಿ ಮೃತ ಬಾಬುರಾವ ಪಾಂಡರೆ ಅವರು ಎರಡು ಬಟ್ಟೆ ಅಂಗಡಿಗಳ ಮಾಲೀಕರಾಗಿದ್ದರು.
ಘಟನಾಸ್ಥಳಕ್ಕೆ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ರಘುವೀರಸಿಂಗ್ ಠಾಕೂರ್ ಭೇಟಿ ನೀಡಿ, ಪರಿಶೀಲಿಸಿದರು. ಮೃತ ದೇಹನ್ನು ಬೀದರನ ಬ್ರೀಮ್ಸ್ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಇದನ್ನೂ ಓದಿ: Shivamogga News: ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು
ಈ ವೇಳೆ ಎಎಸ್ಪಿ ಮಹೇಶ ಮೇಘಣ್ಣನವರ್ ಮೃತದೇಹವನ್ನು ಪರಿಶೀಲಿಸಿದರು. ಸಾವಿನ ಬಗ್ಗೆ ಎಲ್ಲ ರೀತಿಯಿಂದ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಕುಟುಂಬದ ಸದಸ್ಯರಿಗೆ ಭರವಸೆ ನೀಡಿದ್ದಾರೆ.
ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್
Bidar News: ಮೇಹಕರ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
Bidar News: ಹುಲಸೂರ ತಾಲೂಕಿನ ಮೇಹಕರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮೇಹಕರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜರುಗಿತು.
ಹುಲಸೂರ: ತಾಲೂಕಿನ ಮೇಹಕರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮೇಹಕರ ಕ್ಲಸ್ಟರ್ ಮಟ್ಟದ (Cluster Level) ಪ್ರತಿಭಾ ಕಾರಂಜಿ (Pratibha Karanji) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮೇಹಕರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೀತಲ ಕಾಂಬಳೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಅತುತ್ಯಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದತ್ತಾ ಪವಾರ ಮಾತನಾಡಿ, ಕೋಲಾಟ, ನೃತ್ಯ, ಜನಪದ ಗೀತೆಗಳು ಸೇರಿದಂತೆ ಇನ್ನೂ ಮುಂತಾದ ನಮ್ಮ ದೇಶೀಯ ಕಲೆಗಳನ್ನು ಉಳಿಸುವ ಸಲುವಾಗಿ ಹಾಗೂ ಮಕ್ಕಳಲ್ಲಿ ಅಡಗಿರುವಂತಹ ಪ್ರತಿಭೆಯನ್ನು ಗುರುತಿಸುವುದೇ ಈ ಪ್ರತಿಭಾ ಕಾರಂಜಿಯ ಉದ್ದೇಶವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Benefits Of Ajwain: ಅಜವಾನವೆಂಬ ಘಾಟುಮದ್ದಿನ ಬಗ್ಗೆ ನಿಮಗೆ ಗೊತ್ತಿದೆಯೆ?
ನಿವೃತ್ತ ಮುಖ್ಯಗುರು ಸುಭಾಷ್ ಹುಲಸೂರೆ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಲ್ಲಿ ಅಡಗಿರುವಂತಹ ಪ್ರತಿಭೆಯನ್ನು ಹೊರ ತೆಗೆಯಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಿಳಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ವಿನೋದ ವಾಂಖೆಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದ 8 ಶಾಲೆಯ ವಿದ್ಯಾರ್ಥಿಗಳು ಭಕ್ತಿಗೀತೆ, ಕನ್ನಡ, ಇಂಗ್ಲಿಷ್, ಹಿಂದಿ ಕಂಠಪಾಠ, ಲಘು ಸಂಗೀತ, ಚಿತ್ರಕಲೆ, ಅಭಿನಯ ಗೀತೆ, ಜಾನಪದ, ಛದ್ಮವೇಷ, ಕಥೆ ಹೇಳುವುದು, ಆಶುಭಾಷಣ, ಮಿಮಿಕ್ರಿ, ಕವನ ವಾಚನ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನ ಸೆಳೆದರು.
ಇದನ್ನೂ ಓದಿ: Hamsajyothi Trust: ನಾಳೆ ಹಂಸಜ್ಯೋತಿಯ 48ನೇ ವಾರ್ಷಿಕೋತ್ಸವ, ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ
ಕಾರ್ಯಕ್ರಮದಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ರನಜೀತ ಸಿಂಗ ಠಾಕೂರ, ಜಾಲಿಂದರ ಜೆದೇ, ಸಮೀರ ಶೇಕ್, ಚನ್ನಬಸಪ್ಪ ತಳವಾಡೆ, ಮುಖ್ಯಗುರು ದಿಗಂಬರ ತೇಲಂಗ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕ ಸಂಘದ ಸದಸ್ಯ ಸಂಜೀವ ಮಂಗಣೆ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸರೋಜಿನಿ ಪರಷೆಟ್ಟೆ ಹಾಗೂ ಕವಿತಾ ಸಾಬನೆ, ರೂಪಲಿ ಮೋರೆ, ಕಲ್ಪನಾ ದಾಂಡೆಕರ, ಸತ್ಯವಾನ್ ಕಾಂಬ್ಳೆ , ಗೋವಿಂದ ಪಾಟಿಲ್, ದತ್ತಾ ಪವಾರ್, ಕಮಲಾಕರ ಪಾಲಾಪೂರೆ, ದತ್ತಾ ಸಾಬನೆ ಮತ್ತು ಶ್ರೀಮಂತರಾವ್ ಗಣೇಶವಾಡೆ, ಎಸ್ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.
ಉಡುಪಿ
Weather report : ಉತ್ತರ, ಕರಾವಳಿಯಲ್ಲಿ ಮಳೆಗೆ ಬಲ; ದಕ್ಷಿಣದಲ್ಲಿ ದುರ್ಬಲ
Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಐಎಂಡಿ ಯೆಲ್ಲೋ ಅಲರ್ಟ್ (Weather report) ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ
ಸೆ. 27ರಂದು ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಣ್ಣ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆ ಇರಿಲಿದೆ.
ಮಲೆನಾಡಲ್ಲೂ ಸಣ್ಣ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಬಿಸಿಲಿನಿಂದ ಕೂಡಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ
ರಾಜ್ಯದಲ್ಲಿ ಸೆ. 25ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 5 ಸೆಂ.ಮೀ, ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಹೊನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರಲ್ಲಿ ತಲಾ 3, ಕುಮಟಾ, ತಾಳಿಕೋಟೆ , ಫರಹತಾಬಾದ್, ಚಿಂಚೋಳಿ , ಕೆಂಭಾವಿ, ಬೆಂಗಳೂರು ಸಿಟಿ ಗೌರಿಬಿದನೂರು , ಕುರುಗೋಡು ಸೇರಿದಂತೆ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು, ಮಂಗಳೂರು , ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ , ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ , ಶಹಪುರ, ಶೋರಾಪುರ ಕಕ್ಕೇರಿ, ಗಂಗಾವತಿ, ದೇವರಹಿಪ್ಪರಗಿ, ಇಂಡಿ , ಕುಡತಿನಿ, ಹೊಸಪೇಟೆ, ಬೆಂಗಳೂರು ಕೆಐಎಎಲ್ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?
Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಲಘುವಾಗಿ, ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ (Weather report) ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನಾಲ್ಕು ಜಿಲ್ಲೆಗಳಿಗೆ ಅಲರ್ಟ್
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಒಳನಾಡಲ್ಲಿ ಹಗುರ ಮಳೆ
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Rain News : ಉತ್ತರ ಕರ್ನಾಟಕದ ಹಲವು ಕಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಸೆ. 26ರಂದು ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ (weather report) ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಬೆಂಗಳೂರಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಕೊಪ್ಪಳದಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆ ಬೀಳಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ.
ಇದನ್ನೂ ಓದಿ:Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ
ರಾಜ್ಯದಲ್ಲಿ ಭಾನುವಾರದಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಶಹಪುರದಲ್ಲಿ 7 ಸೆಂ.ಮೀ ವರದಿ ಆಗಿದೆ. ಅಂಕೋಲಾ, ಹೆಬ್ಬೂರಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕುಮಟಾ, ಗೇರ್ಸೊಪ್ಪ, ಗೋಕರ್ಣ, ಮಂಕಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಕುಂದಾಪುರ, ಕೋಟ, ಸಿದ್ದಾಪುರ, ಬೇಲಿಕೇರಿ, ಹೊನ್ನಾವರ, ಖಜೂರಿ, ಮೈಸೂರು, ರಾಯಲ್ಪಾಡದಲ್ಲಿ ತಲಾ 3 ಸೆಂ.ಮೀ, ಉಡುಪಿ, ಕಾರ್ಕಳ , ಮಂಗಳೂರು, ಉಪ್ಪಿನಂಗಡಿ, ಮೂಲ್ಕಿ, ಕದ್ರಾ, ಕೆಂಭಾವಿ, ಮುನಿರಾಬಾದ್ , ಗಬ್ಬೂರು ಹಾಗೂ ಆಳಂದ, ಸೇಡಂ, ಕಳಸ, ಗುಬ್ಬಿ, ತಿಪಟೂರು, ಚಿತ್ರದುರ್ಗ, ಕುಡತಿನಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕಾರವಾರ, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಿರವತ್ತಿ, ಮುಂಡಗೋಡ ಯಲ್ಲಾಪುರ, ಮಂಚಿಕೆರೆ, ಜಾಲಹಳ್ಳಿ, ಮಹಾಗೋಣ, ಮುಧೋಳೆ, ಗುಂಡಗುರ್ತಿ, ಆಡಕಿ, ಕವಡಿಮಟ್ಟಿ ಅರ್ಗ, ಭಾಲ್ಕಿ , ಮಂಠಾಳ, ಹಾವೇರಿ, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಲಿಂಗನಮಕ್ಕಿ ಎಚ್‌ಎಂಎಸ್, ತಾಳಗುಪ್ಪ, ತ್ಯಾಗರ್ತಿ, ಯಗಟಿ , ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
Live News21 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ12 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ4 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
South Cinema15 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕರ್ನಾಟಕ15 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್11 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ12 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್15 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ