Site icon Vistara News

Dead Body Found : ವಾಟರ್‌ ಟ್ಯಾಂಕ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Dead Body Found in water tank

ಬೀದರ್ : ಕುಡಿಯುವ ನೀರಿನ ಓವರ್ ಹೆಡ್ ವಾಟರ್ ಟ್ಯಾಂಕ್‌ನಲ್ಲಿ (Water Tank) ಶವವೊಂದು (Dead Body Found) ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ (Bidar News) ನಡೆದಿದೆ. ಗ್ರಾಮದ ಮನೆ ಮನೆಗೆ ಸರಬರಾಜು ಮಾಡುತ್ತಿದ್ದ ನೀರು ಗಬ್ಬು ನಾರುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಮೊದಮೊದಲು ಕುಡಿಯುವ ನೀರಿಗೆ ಚರಂಡಿ ನೀರು ಏನಾದರೂ ಮಿಶ್ರಣ ಎಂದು ಶಂಕಿಸಲಾಗಿತ್ತು. ಮನೆಗೆ ಸರಬರಾಜು ಆಗುತ್ತಿದ್ದ ನೀರಲ್ಲಿ ಕೂದಲು ಬರುತ್ತಿದ್ದವು. ಇತ್ತ ದೂರು ಬಂದ ಕಾರಣಕ್ಕೆ ವಾಟರ್ ಟ್ಯಾಂಕ್ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿಯಿಯಲ್ಲಿ ವ್ಯಕ್ತಿಯೊಬ್ಬಮ ಶವ ಪತ್ತೆಯಾಗಿದೆ.

ನೀರಿನ ಟ್ಯಾಂಕ್‌ನಲ್ಲಿ ಎಷ್ಟು ದಿವಸದಿಂದ ಶವವಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದು ತಿಳಿದು ಬಂದಿಲ್ಲ. ಗ್ರಾಮಸ್ಥರು ಹಲವು ದಿನದಿಂದ ಶವ ಬಿದ್ದಿದ್ದ ಟ್ಯಾಂಕಿನ ನೀರನ್ನೇ ಕುಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಕುಡಿಯುವ ನೀರು ಗಬ್ಬು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಿದಾಗ ಶವ ಪತ್ತೆಯಾಗಿದೆ ಎಂದು ಗ್ರಾಮ ಪಂಚಾಯತಿ ಪಿಡಿಓ ಮಾಹಿತಿ ನೀಡಿದ್ದಾರೆ. ಮೊದಮೊದಲು ನೀರಿನೊಟ್ಟಿಗೆ ಕೂದಲು ಬಂದಿದೆ. ಜತೆಗೆ ಕುಡಿಯಲು ಆಗದಷ್ಟು ನೀರು ಗಬ್ಬು ನಾರುತ್ತಿತ್ತು. ಇದೀಗ ಸತ್ಯ ವಿಷಯವನ್ನು ತಿಳಿದು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version