Site icon Vistara News

Drowned in Water: ಡ್ಯಾಮ್ ನೀರಿನಲ್ಲಿ ಈಜಲು ಹೋದ ಬಾಲಕ ಮುಳುಗಿ ಸಾವು!

Drowned in Water boy who went swimming drowned and died

ಬಸವಕಲ್ಯಾಣ: ಡ್ಯಾಮ್ ನೀರಿನಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ (Drowned in Water) ಮೃತಪಟ್ಟಿರುವ ಘಟನೆ ತಾಲೂಕಿನ ಖೇರ್ಡಾ (ಬಿ) ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಸಸ್ತಾಪೂರ ಗ್ರಾಮದ ನಿವಾಸಿ ಮುಜಾಮೀಲ್ ಖಾಜಾಮಿಯ್ಯ (15) ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕನಾಗಿದ್ದಾನೆ. ಮೂಲತಃ ಸಸ್ತಾಪೂರ ಗ್ರಾಮದವನಾಗಿರುವ ಈತ ಕಳೆದ ಕೆಲ ದಿನಗಳಿಂದ ತನ್ನ ತಾಯಿ ತವರು ಮನೆಯಾಗಿರುವ ತಡೋಳಾ ಗ್ರಾಮದಲ್ಲಿ ನೆಲೆಸಿದ್ದ. ಮಂಗಳವಾರ ಸಂಜೆ ತನ್ನ ಐವರು ಗೆಳೆಯರೊಂದಿಗೆ ತಾಲೂಕಿನ ಖೇರ್ಡಾ (ಬಿ) ಗ್ರಾಮದ ಬಳಿಯ ಮುಲ್ಲಾಮಾರಿ ಜಲಾಶಯದ ಹಿನ್ನೀರಿನಲ್ಲಿ ಈಜಾಡಲೆಂದು ತೆರಳಿದ್ದ. ಆದರೆ ನೀರಿನಾಳದಲ್ಲಿ ಮುಳುಗಿ ಮೇಲೆ ಬಾರಲಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

ಘಟನೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದೊಂದಿಗೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಾಲಕನ ಶವ ಹೊರ ತಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸುದ್ದಿ ತಿಳಿದ ಪಿಎಸ್ಐ ರೇಣುಕಾ ಉಡಗಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು

ಯಾದಗಿರಿ: ತೆರೆದ ಗುಂಡಿಯಲ್ಲಿ ಬಿದ್ದು ಬಾಲಕನೊರ್ವ ಮೃತಪಟ್ಟಿದ್ದಾನೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ನಿನ್ನೆ ಸೋಮವಾರ ಸಂಜೆ ಘಟನೆ ನಡೆದಿದೆ. ಮನೋಜಕುಮಾರ (8) ಮೃತ ದುರ್ದೈವಿ.

ಮನೋಜಕುಮಾರ ತೋಟದ ಮನೆಯಲ್ಲಿ ಆಟವಾಡುತ್ತಿದ್ದ. ಆಟವಾಡುವಾಗ ಕಾಲು ಜಾರಿದ್ದು ತೆರೆದ ಗುಂಡಿಯಲ್ಲಿ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗುರುಮಠಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಗೇರಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹತ್ತು ವರ್ಷದ ವಸಂತ್‌ ಮೃತದುರ್ದೈವಿ.

ಇದನ್ನೂ ಓದಿ: Vijayapura News: ಗುಂಡಿಗೆ ಬಿದ್ದು ಮೂವರ ಸಾವು; ಬಾಲಕಿಯನ್ನು ರಕ್ಷಿಸಲು ಹೋದವರೂ ನೀರುಪಾಲು

ವಸಂತ್‌ ನೀರು ಕುಡಿಯಲು ಕೃಷಿ ಹೊಂಡಕ್ಕೆ‌ ತೆರಳಿದ್ದ ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಹೊಂಡದ ನೀರಿನ ಆಳದಲ್ಲಿ ಸಿಲುಕಿದ್ದ, ಇತ್ತ ಕೂಡಲೇ ಬಾಲಕನ ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದರು. ಆದರೆ ಉಸಿರುಗಟ್ಟಿ ಹೊಂಡದ ನೀರಲ್ಲಿ ವಸಂತ ಪ್ರಾಣ ಬಿಟ್ಟಿದ್ದಾನೆ. ಬಳ್ಳಾರಿಯ ಸಿರಗೇರಿ‌ ಪೊಲೀಸ್ ಠಾಣೆಯಲ್ಲಿ‌ ಈ ಸಂಬಂಧ ಪ್ರಕರಣ ದಾಖಲಾಗಿದೆ.

Exit mobile version