ಬೀದರ್: ಜಿಲ್ಲೆಯ ಮನ್ನಾಏಖೆಳ್ಳಿಯಲ್ಲಿ ಟ್ರಾಮಾಕೇರ್ ಸೆಂಟರ್ (Trauma care center) ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ (Govt Hospital) ಹೆಚ್ಚಿನ ಚಿಕಿತ್ಸೆಗಾಗಿ ವಿವಿಧ ಸೌಲಭ್ಯಗಳನ್ನು (Facilities) ಒದಗಿಸುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಟಗುಪ್ಪಾ ತಾಲೂಕಿನ ಮನ್ನಾಏಖೆಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಟ್ರಾಮಾಕೇರ್ ಸೆಂಟರ್ ಪ್ರಾರಂಭಿಸಬೇಕು ಮತ್ತು ಮನ್ನಾಏಖೇಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಆಸ್ಪತ್ರೆ ಹೆಚ್ಚಿನ ಚಿಕಿತ್ಸೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಗುರುನಾನಕ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: Snake Rescue : ಸ್ಕೂಟರ್ ಡಿಕ್ಕಿಯೊಳಗೆ ಹಾಯಾಗಿ ಮಲಗಿದ್ದ ಹಾವು; ಬೆದರಿ ಎದ್ದು ಬಿದ್ದು ಓಡಿದ ಮಹಿಳೆ!
ಬೀದರ್ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಚಿಟಗುಪ್ಪಾ ತಾಲೂಕಿನ ಮನ್ನಾಏಖೆಳ್ಳಿ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವು ರಾಷ್ಟ್ರೀಯ ಹೆದ್ದಾರಿ 65 ಹೈದ್ರಾಬಾದ್ ಮುಂಬೈ ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ಅನೇಕ ಅಪಘಾತಗಳಾಗುತ್ತಿವೆ ಆದ್ದರಿಂದ ತುರ್ತು ಚಿಕಿತ್ಸೆಗಾಗಿ ಯಾವುದೇ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಪರದಾಡುವಂತಾಗಿದೆ, ಆದ್ದರಿಂದ ಮನ್ನಾಏಖೆಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ಟ್ರಾಮಾಕೇರ್ ಸೆಂಟರ್ ಪ್ರಾರಂಭಿಸುವ ಮೂಲಕ ತುರ್ತು ಚಿಕಿತ್ಸೆಯ ರೋಗಿಗಳಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.
ಜತೆಗೆ ಮನ್ನಾಏಖೆಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ ಐ ಹಾಗೂ ಇ.ಸಿ.ಜಿ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ಮೂಲಕ ಉತ್ತಮ ಗುಣಮಟ್ಟದ ಚಿಕಿತ್ಸೆಗೆ ರೋಗಿಗಳಿಗೆ ಅನೂಕೂಲ ಮಾಡಿಕೊಡುವಂತೆ ಎಂದು ಸಚಿವರಿಗೆ ಒತ್ತಾಯಿಸಿದರು.
ಇದನ್ನೂ ಓದಿ: G 20 in India : ಅಮೆರಿಕ ಅಧ್ಯಕ್ಷ ಬೈಡೆನ್‌ಗಾಗಿ ಬುಕ್ ಆಯ್ತು ಐಟಿಸಿ ಮೌರ್ಯ ಹೋಟೆಲ್‌ನ 400 ರೂಮ್!
ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮನ್ನಾಏಖೇಳ್ಳಿ ಟ್ರಾಮಾಕೇರ್ ಸೆಂಟರ್ ಪ್ರಾರಂಭಿಸುವ ಮತ್ತು ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು.