Site icon Vistara News

ಕೋವಿಡ್‌ ನಿಯಮ ಉಲ್ಲಂಘನೆ: ಕಾಂಗ್ರೆಸ್‌ ನಾಯಕರ ವಿರುದ್ಧ ಚಾರ್ಜ್‌ ಶೀಟ್‌ಗೆ ಕೋರ್ಟ್‌ ತಡೆ

mekedatu Project

ಬೆಂಗಳೂರು: ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ನಾಯಕರ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಪೊಲೀಸರ ಆರೋಪಪಟ್ಟಿ ಸಲ್ಲಿಕೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ವೇಳೆ ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡಿದ್ದ ಕಾರಣಕ್ಕೆ ಸರ್ಕಾರ ವಿಧಿಸಿದ್ದ ನಿಯಮವನ್ನು ಗಾಳಿ ತೂರಿದ್ದಕ್ಕೆ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ | ಕೆರೆ ನುಂಗಿ ಹಾಕಿ ಮೇಕೆದಾಟು ಎಂದರೆ ಏನು ಪ್ರಯೋಜನ?: ಕುಮಾರಸ್ವಾಮಿ ಆಕ್ರೋಶ

ಇದೀಗ ಈ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಗೆ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಏಕ ಸದಸ್ಯ ಪೀಠ ತಡೆ ನೀಡಿದೆ. ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್ ಸೇರಿ ಒಟ್ಟು 29 ನಾಯಕರು ಹಾಜರಾಗಲು ಜನಪ್ರತಿನಿಧೀಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಲಾಗಿತ್ತು. ಮಂಗಳವಾರ(ಜೂನ್ 28) ಕಾಂಗ್ರೆಸ್‌ ನಾಯಕರ ಪರ ವಕೀಲ ಪೊನ್ನಣ್ಣ ಹೈಕೋರ್ಟ್‌ ಮೊರೆ ಹೋಗಿ ವಾದ ಮಂಡಿಸಿದ್ದರು.

ಸಾಂಕ್ರಾಮಿಕ ರೋಗ ನಿಯಂತ್ರಣ ಅಧಿಸೂಚನೆಯಡಿ ಪ್ರಕರಣವನ್ನು ದಾಖಲಿಸಬೇಕಿತ್ತು. ಆದರೆ ಸರ್ಕಾರಿ ವಕೀಲರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದಾಖಲು ಮಾಡಿದ್ದಾರೆ. ಹೀಗಾಗಿ ಈ ಪ್ರಕರಣಗಳು ಕಾನೂನು ಬಾಹಿರವಾಗಿದೆ ಎಂದು ವಾದಿಸಿದರು. ಸದ್ಯ ನ್ಯಾಯಾಲಯವು ಚಾರ್ಜ್‌ಶೀಟ್‌ ಸಲ್ಲಿಕೆಗೆ ತಡೆ ನೀಡಿದೆ. ಸದ್ಯ ಕಾಂಗ್ರೆಸ್ ನಾಯಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ | ಮೇಕೆದಾಟು ವಿಷಯದಲ್ಲಿ ಕೋರ್ಟೇ ಸುಪ್ರೀಂ, ಪ್ರಾಧಿಕಾರದ ಮಾತು ಕೇಳಲ್ಲ ಎಂದ ಸ್ಟಾಲಿನ್‌

Exit mobile version