Site icon Vistara News

Bike Accident: ಯಲಹಂಕ ಬಳಿ ನಿಯಂತ್ರಣ ತಪ್ಪಿ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

Bike accident near yelahanka

ಯಲಹಂಕ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Bike Accident) ಬೆಂಗಳೂರು ಹೊರಹೊಲವಯದ ಯಲಹಂಕ ತಾಲೂಕಿನ ಚಲ್ಲಹಳ್ಳಿ ಸಮೀಪ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಮೂಲದ ಯೋಗೇಶ್ (19) ಮೃತ ದುರ್ದೈವಿ.

ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುವ ವೇಳೆ ಅಪಘಾತ ನಡೆದಿದೆ. ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದ್ದಿಂದ ಗಂಭೀರವಾಗಿ ಗಾಯಗೊಂಡ ಸವಾರ ಮೃತಪಟ್ಟಿದ್ದಾನೆ. ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Lokayukta Raid: 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ಕಮಿಷನರ್

ರಸ್ತೆ ನಡುವಿನ ಜಾಹೀರಾತು ಫಲಕಕ್ಕೆ ಕಾರು ಡಿಕ್ಕಿ; ನಾಲ್ವರಿಗೆ ಗಂಭೀರ ಗಾಯ

ಯಲಹಂಕ: ರಸ್ತೆ ನಡುವಿನ ಜಾಹೀರಾತು ಫಲಕಕ್ಕೆ ಕಾರು ಡಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯ ಪುಟ್ಟೇನಹಳ್ಳಿ ಬಳಿ ನಡೆದಿದೆ. ರಸ್ತೆ ವಿಭಜಕದಲ್ಲಿದ್ದ ನಾಮಫಲಕಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ದೊಡ್ಡಬಳ್ಳಾಪುರ ಕಡೆಯಿಂದ ತೆರಳುತ್ತಿದ್ದ ಸ್ಕೋಡಾ ಕಾರು ಡಿವೈಡರ್‌ನಲ್ಲಿದ್ದ ಜಾಹೀರಾತು ಫಲಕಕ್ಕೆ ಡಿಕ್ಕಿಯಾಗಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು ದಾಖಲಿಸಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರೇನ್ ಮೂಲಕ ಕಾರನ್ನು ತೆರವು ಮಾಡಿದರು.

Exit mobile version