Site icon Vistara News

Bike Accident | ಮಂಡ್ಯದ ಹೊಸಹಳ್ಳಿ ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸವಾರ ಸಾವು

Accident

ಮಂಡ್ಯ: ಮಳವಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟರ್‌ (Bike Accident) ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸಹಳ್ಳಿ ಗೇಟ್ ಬಳಿಯ ಮಳವಳ್ಳಿ-ಕೊಳ್ಳೇಗಾಲ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ನಾಗಲಿಂಗಪ್ಪ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಳವಳ್ಳಿ ಕಡೆಯಿಂದ ಹೊಸಹಳ್ಳಿಗೆ ಟಿವಿಎಸ್ ಸ್ಕೂಟರ್‌ನಲ್ಲಿ ನಾಗಲಿಂಗಪ್ಪ ತೆರಳುತ್ತಿದ್ದರು. ಅದೇ ವೇಳೆ ಬೆಂಗಳೂರಿನಿಂದ ಕೊಳ್ಳೇಗಾಲದ ಕಡೆ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಸ್ಕೂಟರ್‌ನಿಂದ ಬಿದ್ದ ನಾಗಲಿಂಗಪ್ಪ ಅವರಿಗೆ ತೀವ್ರ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇನ್ನು ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದೆ. ಬೆಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | ಮಂಡ್ಯದ ಕಲ್ಲಹಳ್ಳಿ ಬಳಿ ಭೀಕರ ಅಪಘಾತ: ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

Exit mobile version