Site icon Vistara News

Bike Accident | ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸಾವು, ಇಬ್ಬರಿಗೆ ಗಾಯ

Bike Accident

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ (Bike Accident) ಒಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪೈಗಂಬರ್ ಮಕಾಂದರ್ (37) ಮೃತಪಟ್ಟವರು. ಇಬ್ಬರು ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿ ಸಾವು
ವಿಜಯಪುರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರದ ಮಾರುತಿ ಕಾಲೊನಿ ಬಳಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯ ಹೆಸರು ಹಾಗೂ ವಿಳಾಸ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಬಳಿಕ ಲಾರಿ ಚಾಲಕ ವಾಹನದ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Murder Case | ಮಾವನ ಸಂಸಾರ ಸರಿಪಡಿಸಲು ಮಾತುಕತೆಗೆ ಕರೆದ ಅಳಿಯ; ಎಣ್ಣೆ ಗಲಾಟೆಯು ಕೊಲೆಯಲ್ಲಿ ಅಂತ್ಯ

Exit mobile version