Site icon Vistara News

Bike Accident: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೈಕ್ ಡಿಕ್ಕಿಯಾಗಿ ಯುವತಿ ಸಾವು

Woman dies after being hit by bike in Electronic City

#image_title

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಪ್ಲೈಓವರ್ ಮೇಲೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಮತ್ತೊಂದು ಬೈಕ್‌ ಡಿಕ್ಕಿಯಾಗಿ ಯುವತಿ ಮೃತಪಟ್ಟಿದ್ದಾಳೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯ ಅವನಿ ಅಲೈನ್ ಅಪಾರ್ಟ್‌ಮೆಂಟ್ ನಿವಾಸಿ ಶುಭಶ್ರೀ (28) ಅಪಘಾತದಲ್ಲಿ (Bike Accident) ಮೃತಪಟ್ಟ ಯುವತಿ.

ಸ್ನೈಡರ್ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದ ಶುಭಶ್ರೀ, ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಹಿಂಬದಿ ಕುಳಿತು ಸಂಚರಿಸುತ್ತಿದ್ದಳು. ಗಾರ್ವೆಬಾವಿಪಾಳ್ಯದ ಸಮೀಪ ಹಿಂದಿನಿಂದ ಅತಿವೇಗವಾಗಿ ಕೆಟಿಎಮ್ ಬೈಕ್ ಬಂದು ಡಿಕ್ಕಿ ಹೊಡೆದಿದ್ದರಿಂದ ಯುವತಿ ಕೆಳಗೆ ಬಿದ್ದಿದ್ದಾಳೆ. ತಲೆಗೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆಗಾಗಿ ಹತ್ತಿರದ ಕಾವೇರಿ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದಾಗ ಶುಭಶ್ರೀ ಕೊನೆಯುಸಿರೆಳೆದಿದ್ದಾಳೆ.

ಇದನ್ನೂ ಓದಿ | Drowned in pond: ಬಹಿರ್ದೆಸೆಗೆ ಹೋಗಿದ್ದ ಒಂದೇ ಕುಟುಂಬದ ಇಬ್ಬರು ಮಕ್ಕಳು ನೀರು ಪಾಲು

ಅಪಘಾತ ನಡೆಸಿದ ಕೆಟಿಎಮ್ ಬೈಕ್ ಸವಾರ ವಿಮಲ್ ಚಂದ್ರ ಮೋಹನ್(30) ವಿರುದ್ಧ ಪ್ರಕರಣ ದಾಖಲಾಗಿದೆ. ಅತಿವೇಗ ಹಾಗೂ ಅಜಾಗರೂಕತೆ ಚಾಲನೆ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version