ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಒಬ್ಬ ಯುವಕ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Bike Accident) ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ಭಾನುವಾರ ನಡೆದಿದೆ. ಬೈಕ್‌ನಲ್ಲಿ ಹೋಗುತ್ತಿದ್ದಾಗ ಪೈಪ್‌ಲೇನ್‌ಗಾಗಿ ತೋಡಿದ್ದ ಗುಂಡಿಗೆ ಬೈಕ್ ಸಮೇತ ಬಿದ್ದು ಯುವಕ ಕೊನೆಯುಸಿರೆಳೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರ್ಷದ ಹಿಂದೆ ಉಲ್ಲಾಳ ಕೆರೆ ಬಳಿ ಇದೇ ರೀತಿಯ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಕಾರ್ಮಿಕನೊಬ್ಬ ಮೃತಪಟ್ಟಿದ್ದ. ಭಾನುವಾರ ಜಲಮಂಡಳಿ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಂಡಿ ಪಕ್ಕ ಯಾವುದೇ ಬ್ಯಾರಿಕೇಡ್ ಅಳವಡಿಸದಿರುವುದು ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಇದನ್ನೂ ಓದಿ | Chitradurga News: ಮನೆ ಮುಂದೆ ನಾಯಿ ಹೊಲಸು ಮಾಡಿದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಚೂರಿ ಇರಿತ!
ಟಯರ್ ಬ್ಲಾಸ್ಟ್ ಆಗಿ ಟಿಪ್ಪರ್ ಪಲ್ಟಿ; ರಸ್ತೆ ಬದಿ ನಿಂತಿದ್ದ ಒಂದೇ ಕುಟುಂಬದ ಐವರ ದುರ್ಮರಣ
ಬಾಗಲಕೋಟೆ: ಟಯರ್ ಬ್ಲಾಸ್ಟ್ ಆಗಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿದ ಘಟನೆ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹೊಲದ ಕೆಲಸ ಮುಗಿಸಿ ರಸ್ತೆ ಪಕ್ಕ ನಿಂತಿದ್ದವರ ಮೇಲೆ ಟಿಪ್ಪರ್ ಪಲ್ಟಿಯಾಗಿದ್ದರಿಂದ ದುರಂತ ನಡೆದಿದೆ.
ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (70), ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (60), ಮಗ ಪುಂಡಲೀಕ ಯಂಕಪ್ಪ ತೋಳಮಟ್ಟಿ (35), ಮಗಳು ನಾಗವ್ವ ಅಶೋಕ ಬಮ್ಮಣ್ಣವರ (45), ಅಳಿಯ ಅಶೋಕ ನಿಂಗಪ್ಪ ಬಮ್ಮಣ್ಣವರ (50) ಮೃತರು.
ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ಬೀಳಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.