Site icon Vistara News

Bike Accident: ಮೈಕೋ ಲೇಔಟ್‌ನಲ್ಲಿ ಬಿಎಂಟಿಸಿ ಬಸ್‌ಗೆ ಬೈಕ್ ಸವಾರ ಬಲಿ

Bike rider killed in BMTC bus accident in Mico Layout

#image_title

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್‌ಗೆ ಮತ್ತೊಬ್ಬ ಬೈಕ್ ಸವಾರ ಬಲಿಯಾಗಿರುವ ಘಟನೆ (Bike Accident) ನಗರದ ಮೈಕೋ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೈನುಲ್ ಅಹಮ್ಮದ್ ಮೃತ ದುರ್ದೈವಿ. ಬಿಎಂಟಿಸಿ ಬಸ್ ಚಾಲಕನ ಅತಿಯಾದ ವೇಗ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಅಪಘಾತದ ಬಳಿಕ ಬಿಎಂಟಿಸಿ ಚಾಲಕ ಎಸ್ಕೇಪ್ ಆಗಿದ್ದು ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ಸಂಬಂಧ ಮೈಕೋ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಶವಂತಪುರದಲ್ಲಿ ಕುಖ್ಯಾತ ಮನೆಗಳ್ಳ ಬಂಧನ

ಬೆಂಗಳೂರು: ಬರೋಬ್ಬರಿ 40 ಮನೆಗಳಲ್ಲಿ ಕಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು, ಮಂಡ್ಯ ಹಾಗೂ ತುಮಕೂರಿನ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ | Murder Case: ಶೀಲ ಶಂಕಿಸಿ ಪತ್ನಿಯ ಕೊಲೆ ಮಾಡಿದ ಪತಿ

ಮುದಾಸಿರ್(32) ಬಂಧಿತ ಆರೋಪಿ. ಈತ ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡಿ ಕಳವು ಮಾಡಿ ಪರಾರಿಯಾಗುತ್ತಿದ್ದ. ಮನೆಯೊಂದರ ಬಾಗಿಲು ಮುರಿಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ಆಧಾರದಲ್ಲಿ ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿ ಮುದಾಸಿರ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Exit mobile version