ಉಡುಪಿ: ಇಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನದ ಗೋಷ್ಠಿಯ ಉದ್ಘಾಟನೆಗೆ ರೋಹಿತ್ ಚಕ್ರತೀರ್ಥ ಅವರನ್ನು ಕರೆಸಿರುವುದನ್ನು ವಿರೋಧಿಸಿ ಬಿಲ್ಲವ ಸಮುದಾಯದ ಕಾರ್ಯಕರ್ತರು ಸಮ್ಮೇಳನದ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ಇಂದಿನಿಂದ ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ಆರಂಭವಾಗಿದೆ. ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ರೋಹಿತ್ ಚಕ್ರತೀರ್ಥ ಅವರನ್ನು ನಿಯೋಜಿಸಲಾಗಿದೆ. ಇದನ್ನು ವಿರೋಧಿಸಿ ಸಮ್ಮೇಳನ ನಡೆಯುತ್ತಿರುವ ಸ್ಥಳಕ್ಕೆ ಮುತ್ತಿಗೆ ಹಾಕಲು ಬಿಲ್ಲವ ಮುಖಂಡರು ಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಸಮ್ಮೇಳನದ ಮೈದಾನದಿಂದ 150 ಮೀಟರ್ ದೂರದಲ್ಲಿಯೇ ಪೋಲಿಸರು ತಡೆದರು. ರೋಹಿತ್ ಚಕ್ರತೀರ್ಥ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಚಕ್ರತೀರ್ಥ ಅಗೌರವ ತೋರಿದ್ದಾರೆ. 10ನೇ ತರಗತಿ ಪಠ್ಯ ಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟಿದ್ದಾರೆ. ಹೀಗಾಗಿ ಅವರನ್ನು ಸಮ್ಮೇಳನಕ್ಕೆ ಕರೆಸಬಾರದು ಎಂದು ಪ್ರತಿಭಟನಕಾರರು ಪ್ರತಿಭಟಿಸಿದರು.
ಇದನ್ನೂ ಓದಿ: Yakshagana Sammelana | ಫೆ.11, 12ರಂದು ಉಡುಪಿಯಲ್ಲಿ ʼಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನʼ