ಶಿವಮೊಗ್ಗ: ವಿಧಾನಸಭಾ ಚುನಾವಣಾ (Karnataka Election 2023) ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಬೂತ್‌ಗಳಲ್ಲಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ್ ನಾಯ್ಕ (Ashok Naik) ಪ್ರಚಾರ ಕಾರ್ಯ ನಡೆಸಿದರು. ನೂರಾರು ಕಾರ್ಯಕರ್ತರು ಪ್ರತಿ ಬೂತ್, ಗ್ರಾಮದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು.
ಶಾಂತಿಪುರ ಗ್ರಾಮದಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಪುರದಾಳು, ಹನುಮಂತಪುರ, ಮಂಜರಿಕೊಪ್ಪ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಪ್ರಚಾರ ಕಾರ್ಯದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡು ಬೆಂಬಲ ಸೂಚಿಸಿದರು.
ಇದನ್ನೂ ಓದಿ:Congress Manifesto : ಸಪ್ತ ಭಾಗ್ಯ, ಮೀಸಲಾತಿ ಏರಿಕೆ, ಬಜರಂಗದಳ ನಿಷೇಧ; ಕಾಂಗ್ರೆಸ್‌ನ TOP 25 ಭರವಸೆಗಳು
ಅಭಿವೃದ್ಧಿ ಕಾರ್ಯಗಳೇ ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವಿಗೆ ಕಾರಣ
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ್ ನಾಯ್ಕ ಮಾತನಾಡಿ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಹೆಚ್ಚಿನ ಅನುದಾನ ನೀಡಿದ ಪರಿಣಾಮ ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಅಧಿಕ ಪ್ರಮಾಣದಲ್ಲಿ ನಡೆದಿದ್ದು, ಐದು ವರ್ಷಗಳ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಕಾರಣ ಆಗಲಿದೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಬೂತ್‌ಗಳಲ್ಲಿ ಪ್ರಚಾರ ಕಾರ್ಯ ನಡೆಸಿ ಬಿಜೆಪಿ ಬೆಂಬಲಿಸುವ ಜತೆಯಲ್ಲಿ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು. ಪುರದಾಳು ವ್ಯಾಪ್ತಿಯಲ್ಲಿ ಕೋಟ್ಯಂತರ ರೂಪಾಯಿ ಅನುದಾನದ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಈ ಬಾರಿಯೂ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಅಶೋಕ್ ನಾಯ್ಕ ತಿಳಿಸಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕುಂಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಶಾಂತಿಪುರ, ಪುರದಾಳು, ಮಂಜರಿಕೊಪ್ಪ, ಕಲ್ಕೊಪ್ಪ, ಕೂಡಿ, ಆಡಿನಕೊಟ್ಟಿಗೆ, ದೊಡ್ಡಿಮಟ್ಟಿ, ಶೆಟ್ಟಿಕೆರೆ, ರೇಚಿಕೊಪ್ಪ ಗ್ರಾಮಗಳಲ್ಲಿ ಪ್ರಚಾರ ಕಾರ್ಯ ನಡೆಸಿದರು. ನೂರಾರು ಕಾರ್ಯಕರ್ತರು, ಗ್ರಾಮಸ್ಥರು ಆಗಮಿಸಿದ್ದರು.
ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ವಿವಿಧ ಸಮಿತಿ ಮುಖಂಡರು ಗ್ರಾಮಾಂತರ ಕಾರ್ಯಾಲಯದಲ್ಲಿ ಸಭೆ ನಡೆಸಿದರು.
ಇದನ್ನೂ ಓದಿ: Karnataka Election 2023: ತಾಕತ್ತಿದ್ದರೆ ಬಜರಂಗದಳವನ್ನು ಬ್ಯಾನ್ ಮಾಡಿ: ಕಾಂಗ್ರೆಸ್‌ಗೆ ಶೋಭಾ ಕರಂದ್ಲಾಜೆ ಸವಾಲು
ಆಯನೂರು ಕುಂಸಿ ಭಾಗದ ಪ್ರಚಾರ ಕಾರ್ಯದಲ್ಲಿ ತಮ್ಮಡಿಹಳ್ಳಿ ನಾಗರಾಜ್, ಜಗದೀಶ್, ಉದಯ್ ಸೇರಿದಂತೆ ಮಹಾಶಕ್ತಿ ಕೇಂದ್ರದ ಪ್ರಮುಖರು, ನೂರಾರು ಕಾರ್ಯಕರ್ತರು ಹಾಜರಿದ್ದರು.