Site icon Vistara News

Karnataka Election 2023: ಪಕ್ಷದ ಬಾವುಟದೊಂದಿಗೆ ಮತಗಟ್ಟೆಗೆ ಬಂದ ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್ ಮುಖಂಡರ ಆಕ್ಷೇಪ

BJP candidate came to polling booth with party flag, Congress leaders objected

ರಾಯಚೂರು, ಕರ್ನಾಟಕ: ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಗಲಾಟೆ ನಡೆದಿದೆ. ಬಿಜೆಪಿ ಪಕ್ಷದ ಬಾವುಟ ವಿಚಾರದಲ್ಲಿ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ(Karnataka Election 2023).

ಕರ್ನಾಟಕ ಚುನಾವಣೆ ಕುತುಹೂಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬಿಜೆಪಿ ಪಕ್ಷದ ಅಭ್ಯರ್ಥಿ ಮಾನಪ್ಪ ವಜ್ಜಲ್ ಅವರ ಕಾರಿಗೆ ಬಾವುಟ ಕಟ್ಟಲಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಮತದಾನ ಮಾಡಲು ಅದೇ ಕಾರನ್ನು ಮಾನಪ್ಪ ವಜ್ಜಲ್ ಅವರು ಬಳಕೆ ಮಾಡಿದರು. ಬಿಜೆಪಿ ಬಾವುಟ ಇರುವ ಕಾರಿನಲ್ಲಿ ‌ಮತಗಟ್ಟೆಗೆ ಆಗಮಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಬಾವುಟ ಕಟ್ಟಿದ ಕಾರಿಗೆ ಅವಕಾಶ ಕೊಟ್ಟ ಅಧಿಕಾರಿಗಳನ್ನು ಕಾಂಗ್ರೆಸ್ ಮುಖಂಡರು ಪ್ರಶ್ನಿಸಿದ್ದಾರೆ. ಆ ಬಳಿಕ ಕಾಂಗ್ರೆಸ್ ಮುಖಂಡರು ಮತ್ತು ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಅವರ ನಡುವೆ ಮಾತಿನ ಚಕಮಕಿ ನಡೆದಿದೆ. ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣವಿತ್ತು. ಪೊಲೀಸರು ಕೂಡಲೇ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇದನ್ನೂ ಓದಿ: ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಎದುರೇ ಸ್ವತಂತ್ರ ಅಭ್ಯರ್ಥಿ ಮೇಲೆ ಹಲ್ಲೆ, ಕಲಬುರಗಿಯಲ್ಲೂ ಗಲಾಟೆ

ರಾಮನಗರದಲ್ಲೂ ಗಲಾಟೆ

ರಾಮನಗರ: ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕನಕಪುರ ತಾಲೂಕಿನ ಹೆಗ್ಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ. ಮತದಾರಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಜೆಡಿಎಸ್ ಕಾರ್ಯಕರ್ತರ ಹೆಸರು ಕೈಬಿಟ್ಟ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿ ಗೊಳಿಸಿದ್ದಾರೆ.

Exit mobile version